• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನೈಜ ಹಿಂದೂಗಳು ಮತಾಂತರ ನಿಷೇಧ ಕಾಯ್ದೆಯನ್ನು ಒಪ್ಪಲ್ಲ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 13: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಜನ ಬೇಸತ್ತಿದ್ದು, ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ಧೇಶದಿಂದ ಸುಗ್ರೀವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಬಿಜೆಪಿ ಸರ್ಕಾರದ ನಿರ್ಣಯ ವಿರೋಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ದುರುದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯಪಾಲ ಥಾವರ್‍‌ ಚಂದ್ ಗೆಹ್ಲೋಟ್‌ಗೆ ಮನವಿ ಮಾಡಿದ್ದಾರೆ.

ಆಮಿಷ, ಒತ್ತಡ, ಬೆದರಿಕೆ ಮೂಲಕ ನಡೆಯುವ ಬಲವಂತದ ಮತಾಂತರ ತಡೆಯಲು ಈಗಿರುವ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿರುವ ಅವರು ಅಲ್ಪಸಂಖ್ಯಾತರನ್ನು ಭಯಪಡಿಸಲು ಕಾಯ್ದೆ ಜಾರಿ ಮಾಡಲು ಹೊರಟಿದ್ದಾರೆ ಎಂದಿದ್ದಾರೆ.

"ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ" ಎಂದಿರುವ ಸಿದ್ದರಾಮಯ್ಯ ಮತಾಂತರ ನಿಷೇಧ ಕಾಯ್ದೆಯನ್ನು ಸಹೃದಯ ಹಿಂದೂಗಳು ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

"ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲೆ ದಾಳಿ ನಡೆದಿರುವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್‌ಗಳ ಮೇಳಿನ ದಾಳಿಯಿಂದ ರಾಜ್ಯದ ಜನ ತಲೆತಗ್ಗಿಸುವುಂತಾಗಿದೆ. ಅವಸರದ ಮತಾಂತರ ನಿಷೇಧ ಕಾಯ್ದೆ ಜಾರಿ ಇಂತಹ ದಾಳಿಗೆ ದುಷ್ಕರ್ಮಿಗಳಿಗೆ ನೀಡುವ ಆಯುಧವೇ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪಶ್ನಿಸಿದ್ದಾರೆ.

ಸ್ವ‌ಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ನಂಬಿಕೆ ಇಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Siddaramaiah slammed the BJP government over approves ordinance route for Anti conversion bill.

ಮತಾಂತರ ನಿಷೇಧ ಕಾಯಿದೆ ದುರುಪಯೋಗಪಡಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ಮತಾಂತರ ನಿಷೇಧ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ:
ವಿರೋಧದ ನಡುವೆಯೇ ರಾಜ್ಯ ಸರ್ಕಾರ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಮೇಲ್ಮನೆಯಲ್ಲಿ ಚರ್ಚೆಗೂ ಬಾರದ ವಿಧೇಯಕವನ್ನು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಸಮ್ಮತಿಸಲು ಅನುಮೋದನೆ ನೀಡಿದೆ.

ಮತಾಂತರ ನಿಷೇಧ ಕಾಯಿದೆಯಲ್ಲಿ ಏನಿದೆ?

ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.‌

ವ್ಯಕ್ತಿಯು ಆತನ ನಿಕಟಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ.

ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರು ನೀಡಿದರೆ ಪ್ರಕರಣ ದಾಖಲಿಸಬಹುದು.

ಬಲವಂತದ ಮತಾಂತರಕ್ಕೆ 3 ವರ್ಷದಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 25,000 ರೂಪಾಯಿ ದಂಡ‌ ವಸೂಲಾತಿಗೆ ಅವಕಾಶ.

ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್‌ಸಿ, ಎಸ್‌ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ 3 ವರ್ಷದಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.

ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.

ಅಪರಾಧ ಪುನರಾವರ್ತನೆಯಾದರೆ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿ.

ಮತಾಂತರದ ಉದ್ದೇಶದಿಂದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ.

   ಹಿಂದಿ ಹೇರಿಕೆ ವಿರೋಧಿಸಿ ತಮಿಳು ಸಂಘಟನೆ ಜೊತೆ ಒಂದಾದ ಕನ್ನಡಿಗರ ಪ್ರತಿಭಟನೆ | Oneindia Kannada

   English summary
   Former Karnataka Chief Minister Siddaramaiah slammed the BJP government over approves ordinance route for Anti conversion bill.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X