ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯವರು ಸತ್ಯವಂತರಾಗಿದ್ದರೆ 40% ಕಮಿಷನ್ ಆರೋಪ ತನಿಖೆಗೆ ಹೆದರಲು ಕಾರಣವೇನು?: ಸಿದ್ದು

|
Google Oneindia Kannada News

ಬೆಂಗಳೂರು ಆಗಸ್ಟ್ 26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಿಂದ ಹಿಡಿದು ಸಚಿವರು, ಶಾಸಕರವರೆಗೆ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಸರಣಿ ಟ್ವೀಟ್ ಮಾಡಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯವರು ಭ್ರಷ್ಟಾಚಾರ ನಡೆಸಿಲ್ಲ ಎಂದಾದರೆ ತನಿಖೆಗೆ ಹೆದರಿಕೊಳ್ಳುತ್ತಿರುವುದು ಏಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ನಿಲ್ಲಿಸಬೇಕು: ಉಮೇಶ್‌ ಕತ್ತಿಸಿದ್ದರಾಮಯ್ಯ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ನಿಲ್ಲಿಸಬೇಕು: ಉಮೇಶ್‌ ಕತ್ತಿ

ಪ್ರಸ್ತುತ ರಾಜ್ಯ ಬಿಜೆಪಿ ಸರ್ಕಾರದಲ್ಲಿರುವವರು ಎಲ್ಲರೂ ಸತ್ಯಹರಿಶ್ಚಂದ್ರರು ಆಗಿದ್ದರೆ ತನಿಖೆಗೆ ಯಾಕೆ ಹೆದರಿಕೊಳ್ಳುತ್ತಿದ್ದಾರೆ?. ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಲಿ. ಆರೋಪಗಳು ಕೇಳಿಬಂದಾಗ ತನಿಖೆ ನಡೆಸಿ ಸತ್ಯಾಸತ್ಯತೆ ಜನತೆಯ ಮುಂದಿಡುವುದು ಸರ್ಕಾರದ ಕರ್ತವ್ಯ ಅಲ್ಲವೇ ಎಂದರು.

ಕಮಿಷನ್ ಹಾವಳಿಗೆ ಬೇಸತ್ತ ಗುತ್ತಿಗೆದಾರರು ಕಳೆದ ವರ್ಷವೇ ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಇದರ ನಂತರವೂ ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ. ಗುತ್ತಿಗೆದಾರರಿಗೆ ಕಿರುಕುಳ ಹೆಚ್ಚಾಗಿದೆಯಂತೆ. ತನಿಖೆಗೆ ಆದೇಶಿಸಿದರೆ ಎಲ್ಲ ಪುರಾವೆಗಳನ್ನು ಕೊಡಲು ಸಿದ್ಧನಿದ್ದೇನೆ ಎಂದು ಸಂಘದ ಅಧ್ಯಕ್ಷರೇ ಹೇಳಿರುವಾಗ ರಾಜ್ಯ ಸರ್ಕಾರ ಏಕೆ ಒಪ್ಪುತ್ತಿಲ್ಲ. ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

40 ಪರ್ಸೆಂಟ್ ಕಮಿಷನ್: ಗುತ್ತಿಗೆದಾರರಿಗೆ ಕುಮಾರಸ್ವಾಮಿ ಕೊಟ್ಟ ಟಿಪ್ಸ್ ಏನು?

ಕಾಂಗ್ರೆಸ್ ಅವಧಿಯಲ್ಲಿ ಅಕ್ರಮಗಳು, ಹಗರಣಗಳು ನಡೆದಿಲ್ಲವೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ಐದು ಪ್ರಕರಣಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹೆದರದೆ ನಿರ್ಧಾರ ಸಿಬಿಐ ತನಿಖೆಗೆ ಒಪ್ಪಿಸುವ ನಿರ್ಧಾರ ಕೈಗೊಂಡಿದ್ದೆ. ನೀವು ಯಾಕೆ ತನಿಖೆಗೆ ಹೆದರುತ್ತಿದ್ದೀರಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಕಮಿಷನ್‌ನಿಂದಾಗಿ ಗುಣಮಟ್ಟದ ಕಾಮಗಾರಿ ಹೇಗೆ ಸಾಧ್ಯ

ಕಮಿಷನ್‌ನಿಂದಾಗಿ ಗುಣಮಟ್ಟದ ಕಾಮಗಾರಿ ಹೇಗೆ ಸಾಧ್ಯ

ಎಸಿಬಿ ದಾಳಿಯಲ್ಲಿ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ಅಧಿಕಾರಿಯನ್ನು ಮತ್ತೆ ಅದೇ ಸ್ಥಳಕ್ಕೆ ನೇಮಕ ಮಾಡಲು ಶಾಸಕ ಬೋಪಯ್ಯ ಅವರು 2.5 ಕೋಟಿ ಲಂಚ ಪಡೆದಿದ್ದಾರೆ. ಹೀಗೆಂದು ಕೊಡಗು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಚೆಂಗಪ್ಪ ಆರೋಪಿಸಿದ್ದಾರೆ.

ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕು?. ಲೋಕೋಪಯೋಗಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೇರಿ 22,000 ಕೋಟಿ ಬಿಲ್ ಹಣ ಬಿಡುಗಡೆಗೆ ಬಾಕಿ ಇದೆ. 40 ಪಸೇಂಟ್‌ ಸರ್ಕಾರಕ್ಕೆ, 20 ಪರ್ಸೆಂಟ್ ಗುತ್ತಿಗೆದಾರನಿಗೆ, 15 ಪರ್ಸೆಂಟ್ ಜಿಎಸ್‌ಟಿಗೆ, ಉಳಿದ 25 ಪರ್ಸೆಂಟ್‌ನಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಿದ್ದಾಗ ಗುಣಮಟ್ಟದ ಕಾಮಗಾರಿ ಹೇಗೆ ಸಾಧ್ಯ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಸಂತೋಷ್ ಪಾಟೀಲ್‌ನಂತೆ ಸಾಯಬೇಕಾ?

ಸಂತೋಷ್ ಪಾಟೀಲ್‌ನಂತೆ ಸಾಯಬೇಕಾ?

ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಸಚಿವ ಕೆ.ಎಸ್. ಈಶ್ವರಪ್ಪ ಅವರ ಲಂಚದ ಕಿರುಕುಳಕ್ಕೆ ನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರಿಂದಲೇ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಲಂಚ ಕೊಡುವುದಿಲ್ಲ ಎನ್ನುವವರು ಸಂತೋಷ್ ಪಾಟೀಲ್ ನಂತೆ ಸಾಯಬೇಕಾಗುತ್ತದೆ ಎಂದು ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಆರೋಪ ಕುರಿತು ಅವರು ವಿವರಿಸಿದರು.

ಸರ್ಕಾರವೇ ಭ್ರಷ್ಟವಾಗಿದ್ದರೆ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳುವವರು ಯಾರು ಎಂದು ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನು ಟ್ಯಾಗ್‌ ಮಾಡಿ ಟ್ವಿಟ್ ಮಾಡಿದ್ದಾರೆ. ಕೆ.ಎಸ್‌.ಈಶ್ವರಪ್ಪ ಅವರ ಮೇಲಿನ ಆರೋಪದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದನ್ನು ಮೃತನ ಸಹೋದರ ಚಾಲೆಂಜ್ ಮಾಡಿದ್ದಾರೆ. ಈ ರೀತಿ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ನಡೆಯಬಾರದು. ಮೃತರಿಗೆ, ಅಥವಾ ಇಂತ ಪ್ರಕರಣಗಳಲ್ಲಿ ಬಲಿಪಶುಗಳಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದ್ದಾರೆ.

ನೇಮಕಾತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ

ನೇಮಕಾತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ

ಇನ್ನೂ ಪಿಎಸ್ಐ ನೇಮಕಾತಿಯಲ್ಲಿ ಮಾತ್ರವಲ್ಲ, ವಿಶ್ವವಿದ್ಯಾಲಯದ ನೇಮಕಾತಿಗಳಲ್ಲಿಯೂ ಭ್ರಷ್ಟಾಚಾರ ವ್ಯಾಪಕ ಹರಡಿದೆ. ಪಿಎಸ್ಐನಲ್ಲಿ 300 ಅಭ್ಯರ್ಥಿಗಳಿಂದ 30 ಲಕ್ಷ ರೂ.ಗಳಿಂದ ಒಂದು ಕೋಟಿ ರೂಪಾಯಿ ವರೆಗೆ ಲಂಚ ಪಡೆದಿದ್ದಾರೆ. ಇದರ ಹಿಂದಿರುವ ಎಲ್ಲಾ ಭ್ರಷ್ಟರ ಹೆಸರು ಹೊರಬೇಕಾದರೆ ನ್ಯಾಯಾಂಗ ತನಿಖೆಯಿಂದ ಮಾತ್ರವೇ ಸಾಧ್ಯ.

ವರ್ಗಾವಣೆಗೆ ಹೋಟೆಲ್ ತಿಂಡಿಯ ಹಾಗೆ ಬೆಲೆ ನಿಗದಿ ಮಾಡಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿಯಿಂದ ಹಿಡಿದು ಪೊಲೀಸ್ ಪೇದೆಗಳ ವರೆಗೆ ಒಂದೊಂದು ಬೆಲೆ ನಿಗದಿ ಮಾಡಿದ್ದಾರೆ. ವರ್ಗಾವಣೆಯಾದ ಒಂದು ವರ್ಷದಲ್ಲಿ ಎಷ್ಟಾದರೂ ಹಣ ಹೊಡೆಯಿರಿ ಎಂದು

ರಾಜ್ಯ ಸರ್ಕಾರವೇ ಅವರಿಗೆ ಈ ಮುಲಕ ಅವಕಾಶ ಕೊಟ್ಟಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.

ಬಿಜೆಪಿಯ ರೈತರ ಸಾಲಮನ್ನಾ ಎಲ್ಲಿದೆ?

ಬಿಜೆಪಿಯ ರೈತರ ಸಾಲಮನ್ನಾ ಎಲ್ಲಿದೆ?

ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಸಾಧನೆ ಬಗ್ಗೆ ಮಾತನಾಡಬೇಕು. ಆದರೆ ಬಿಜೆಪಿ ನಾಯಕರು ಹಲಾಲ್, ಹಿಜಾಬ್, ಮೀನು-ಮಾಂಸ, ಸಾವರ್ಕರ್, ಜಾತಿ, ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ. ಇದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ಕುತಂತ್ರವೇ ಆಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಲ್ಲಿನ ರೂ.1 ಲಕ್ಷದ ವರೆಗಿನ ರೈತರ ಸಾಲಮನ್ನಾ ಮತ್ತು ರೈತರ ಬೆಳೆಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಂಬಲ ಬೆಲೆ ಕೊಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದರು, ಆದರೆ ನುಡಿದಂತೆ ನಡೆದುಕೊಂಡಿಲ್ಲ ಎಂದರು.


ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಐದು ವರ್ಷದಲ್ಲಿ ಒಂದೂವರೆ ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದಿದ್ದರು. ಕಳೆದ ನಾಲ್ಕು ವರ್ಷದಲ್ಲಿ ಖರ್ಚು ಮಾಡಿದ್ದೆಷ್ಟು?. ಮುಖ್ಯಮಂತ್ರಿಗಳ ಹೆಸರಲ್ಲಿ ಪ್ರತಿ ತಾಲೂಕಿಗೆ ಒಂದರಂತೆ ಒಟ್ಟು 300 ಕ್ಯಾಂಟೀನ್ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದರು. ನಿರ್ಮಿಸುವ ಸಂಖ್ಯೆ ಕೊಡಬಲ್ಲಿರಾ ಎಂದರು.

ಶೇ.90 ರಷ್ಟು ಭರವಸೆ ಈಡೇರಿಸದ ಬಿಜೆಪಿ

ಶೇ.90 ರಷ್ಟು ಭರವಸೆ ಈಡೇರಿಸದ ಬಿಜೆಪಿ

2013 ರಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ 165 ಭರವಸೆಗಳನ್ನು ಈಡೇರಿಸಿದ್ದೆವು. ಆದರೆ ಬಿಜೆಪಿ ಮಾತ್ರ ತಾನು ನೀಡಿದ ಪ್ರಣಾಳಿಕೆಯಲ್ಲಿನ ಶೇ.90 ಭರವಸೆಗಳನ್ನು ಈಡೇರಿಸಿಲ್ಲ. ಇದಕ್ಕೆ ದುಡ್ಡಿನ ಕೊರತೆ ಕೂಡಾ ಕಾರಣ. ಸದನದೊಳಗೆ ಈ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ.

ಎಸಿಬಿ ರದ್ದತಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸಿದ್ದೇವೆ. ನಮ್ಮ ಕಾಲದಲ್ಲಿ ಲೋಕಾಯುಕ್ತರಾಗಿದ್ದ ಭಾಸ್ಕರ್ ರಾವ್ ಎಂಬುವವರ ಮೇಲೆಯೇ ಭ್ರಷ್ಟಾಚಾರದ ಆರೋಪಗಳಿದ್ದವು. ಈ ಕಾರಣಕ್ಕಾಗಿ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಎಂಬ ಸ್ವತಂತ್ರ ತನಿಖೆಯ ವಿಂಗ್ ರಚನೆ ಮಾಡಿದ್ದೆವು ಎಂದು ಅವರು ವಿವರಿಸಿದರು.

ಪ್ರತಾಪ್‌ ಸಿಂಹ ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ

ಪ್ರತಾಪ್‌ ಸಿಂಹ ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ

vಎಸಿಬಿ ದೇಶಕ್ಕೆ ಹೊಸದೇನಲ್ಲ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಬಿಹಾರ, ಕೇರಳ, ಪಶ್ಚಿಮ ಬಂಗಾಳಗಳಲ್ಲಿಯೂ ಲೋಕಾಯುಕ್ತ ಜೊತೆ ಎಸಿಬಿ ಕಾರ್ಯನಿರ್ವಹಿಸುತ್ತಿದೆ. ಆ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್‌ ಎಸಿಬಿಯನ್ನು ಸ್ಥಾಪಿಸಿದ್ದೆವು. ಅದಕ್ಕೆ ಸದುದ್ದೇಶ ಇತ್ತೇ ಹೊರತು ದುರುದ್ದೇಶ ಇರಲಿಲ್ಲ. ಸಂಸದ ಪ್ರತಾಪ್ ಸಿಂಹ ಅವರು ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ. ಅವರಿಗೆ ಧೈರ್ಯವಿದ್ದರೆ ನಮ್ಮ ಪಕ್ಷದ ವಕ್ತಾರ ಲಕ್ಷ್ಮಣ್ ಸೇರಿದಂತೆ ಅನೇಕರು ಹಾಕಿರುವ ಸವಾಲನ್ನು ಸ್ವೀಕರಿಸಿ ಚರ್ಚೆಗೆ ಬರಲಿ. ಮುಖ್ಯಮಂತ್ರಿಯಾಗಿ ನಾನು ಮೈಸೂರು ನಗರಕ್ಕೆ ಏನು ಮಾಡಿದ್ದೇನೆ? ಪ್ರತಾಪ್ ಸಿಂಹ ಏನು ಮಾಡಿದ್ದಾರೆ? ಎಂದು ಚರ್ಚೆಯಾಗಲಿ ಎಂದು ಅವರು ಬಹಿರಂಗ ಸವಾಲ್ ಹಾಕಿದರು.

English summary
Leader of the opposition Siddaramaiah slams BJP over 40 percent commission scam in latest tweet and demand judicial investigation over 40% commission case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X