• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ನರೇಂದ್ರ ಮೋದಿ, ಯಡಿಯೂರಪ್ಪ ಏನು ಎಳೆ ಕಡಸುಗಳಾ?'

|

ಬೆಂಗಳೂರು, ಅಕ್ಟೋಬರ್ 28: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಯಶವಂತಪುರ ಬಿಕೆ ನಗರದಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಇದರ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

   Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

   ಸಿದ್ದರಾಮಯ್ಯ ಅವರು ಪ್ರಚಾರಕ್ಕಾಗಿ ಬಿಕೆ ನಗರಕ್ಕೆ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು, ಅವರ ವಾಹನ ಮುಂದೆ ಸಾಗದಂತೆ ತಡೆದಿದ್ದರು. ಗಲಾಟೆ ಮಾಡಿದವರನ್ನು ಬಂಧಿಸದೆ ಹೋದರೆ ಪೊಲೀಸ್ ಠಾಣೆಯ ಮುಂದೆ ಧರಣಿ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಬುಧವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

   ಆರ್‌ ಆರ್‌ ನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಅಡ್ಡಿ, ಗಲಾಟೆ!

   'ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ' ಎಂದು ಆರೋಪಿಸಿದ್ದಾರೆ. ಮುಂದೆ ಓದಿ.

   ಗಲಭೆ ಎಬ್ಬಿಸಲು ಮುನಿರತ್ನ ಪ್ರಯತ್ನ

   ಗಲಭೆ ಎಬ್ಬಿಸಲು ಮುನಿರತ್ನ ಪ್ರಯತ್ನ

   ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ, ಅವರೇ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ.

   ಮೋದಿ, ಯಡಿಯೂರಪ್ಪ ಎಳೆ ಕಡಸುಗಳಾ?

   ಮೋದಿ, ಯಡಿಯೂರಪ್ಪ ಎಳೆ ಕಡಸುಗಳಾ?

   ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

   ಖಾಲಿಯಿಲ್ಲದ ಸಿಎಂ ಕುರ್ಚಿಗೆ ಡಿಕೆಶಿ, ಸಿದ್ದರಾಮಯ್ಯ ನಾಮುಂದು ತಾಮುಂದು..

   ಅಡ್ಡದಾರಿ ಹಿಡಿಯುವವರು ಇಂತಹವರು

   ಅಡ್ಡದಾರಿ ಹಿಡಿಯುವವರು ಇಂತಹವರು

   ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

   ಅಭಿಮಾನದಿಂದ ಹೇಳುತ್ತಾರೆ

   ಅಭಿಮಾನದಿಂದ ಹೇಳುತ್ತಾರೆ

   ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವರೇ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ? ಎಂದು ಡಿಕೆ ಶಿವಕುಮಾರ್ ಅವರು ಮುಂದಿನ ಸಿಎಂ ಆಗುತ್ತಾರೆ ಎಂಬ ಕಾಂಗ್ರೆಸ್‌ನ ಕೆಲವು ಮುಖಂಡರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ.

   English summary
   Congress leader Siddaramaiah attacks BJP in a series of tweets said, Muniratna trying to clash as he has the fear of defeat in RR Nagar by poll.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X