ನವಿಲು ತೀರ್ಥದಿಂದ ಬಾದಾಮಿಗೆ ನೀರು ಕೇಳಿದ ಸಿದ್ದರಾಮಯ್ಯ

Recommended Video

      ಬಾದಾಮಿಗೆ ನವಿಲು ತೀರ್ಥದಿಂದ ನೀರು ಬಿಡುಗಡೆ ಮಾಡುವಂತೆ ಸಿದ್ದು ಸೂಚನೆ | Oneindia Kannada

      ಬೆಂಗಳೂರು, ಜು.7: ಬಾದಾಮಿ ವಿಧಾನಸಭೆ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವುದರಿಂದ ಬೆಳಗಾವಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

      ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದಿದೆ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ, ಆದರೆ ಕಲಬುರಗಿ, ಬಾಗಲಕೋಟೆ ಈ ಭಾಗದಲ್ಲಿ ಮಳೆಯಾಗದೆ, ರೈತರು ಕಂಗಾಲಾಗಿದ್ದಾರೆ, ಹಾಗಾಗಿ ಬಾದಾಮಿ ಕ್ಷೇತ್ರದ ಜನರಿಗೆ ನೀರು ಒದಗಿಸುವಂತೆ ಸಿದ್ದರಾಮಯ್ಯ ಹೇಳಿದ್ದಾರೆ.

      ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಮೇಘಣ್ಣನವರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಮಲಪ್ರಭಾ ಅಚ್ಚುಕಟ್ಟು ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಹೋಗಾಗಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದರು.

      Siddaramaiah sought water release from Naveelu teertha reservoir

      ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ರೈತರ ಬೆಳೆಗಳಿಗೂ ನೀರು ದೊರೆಯುತ್ತದೆ ಎಂದರು. ನೀರು ಬಿಡುಗಡೆಗೆ ತಕ್ಷಣ ಕ್ರಮ ಜರುಗಿಸುವುದಾಗಿ ಪಾದೇಶಿಕ ಆಯುಕ್ತರು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+