ಸಿದ್ದು-ಡಿಕೆಶಿ ಪ್ರಮಾಣ ವಚನ: ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ; ಇಲ್ಲಿದೆ ಪರ್ಯಾಯ ಮಾರ್ಗ
2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ಸೋಲಿಸಿ 135 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆದಿರುವ ಕಾಂಗ್ರೆಸ್ ಇದೀಗ ಏಕಾಂಗಿಯಾಗಿ ಸರ್ಕಾರ ರಚಿಸಲು ಮುಂದಾಗಿದೆ.
ಶನಿವಾರ, ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಪ್ರಮಾಣ ವಚನ ಸಮಾರಂಭ ಇರುವ ಕಾರಣ, ರಾಜ್ಯದ ಬೇರೆ ಬೇರೆ ಕಡೆಗಳಿಂದ ಸಹಸ್ರಾರು ಕಾರ್ಯಕರ್ತರು ಹಾಗು ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಕೇಂದ್ರ ಭಾಗದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿದೆ.
ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಸಂಪರ್ಕವಾಗುವ ಎಲ್ಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬದಲಾಯಿಸಲಾಗಿದೆ.
ಬೆಂಗಳೂರು ನಗರ ಸಂಚಾರಿ ಪೊಲೀಸರಿಂದ ಈ ಕುರಿತು ಮಾರ್ಗಸೂಚಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಈ ಮಾರ್ಗಗಳಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ.
ಯಾವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳಾವುವು?
* ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಹೋಗುವ ಎಲ್ಲಾ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕ್ವೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲಿ ರಸ್ತೆ ಅಥವಾ ಕ್ವೀನ್ಸ್ ರಸ್ತೆಯ ಮೂಲಕ ಸಂಚಾರ ಮಾಡಬಹುದು.
* ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ತಿರುವು ಪಡೆಯಬೇಕು. ಬಿಎಂಟಿಸಿ ಹಾಗೂ ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಸಂಷರಿಸಬಹುದು.
* ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಕಬ್ಬನ್ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸಬಹುದು.
* ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೀಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.
* ಕಾರ್ಯಕ್ರಮಕ್ಕೆ ಬರುವು ವಿವಿಐಪಿ, ವಿಐಪಿ ವಾಹನಗಳಿಗೆ ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳು, ಸಿಬ್ಬಂದಿಗೆ ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬದಾಮಿ ಹೌಸ್, ಕೆಜಿ ರಸ್ತೆಯ ಎಡ ಬದಿಯಲ್ಲಿ ಹಾಗೂ ಯುನೈಟೆಡ್ ಮಿಷನ್ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಲ್ಲಿ ಪಾರ್ಕಿಂಗ್ ನಿಷೇಧ?
ಆರ್‌ಆರ್ಎಂಆರ್ ರಸ್ತೆ, ಕಸ್ತೂರಿಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕಾರ್ಯಕ್ರಮಕ್ಕೆ ಪ್ರವೇಶ ಹೇಗೆ?
* ವಿವಿಐಪಿ, ವಿಐಪಿಗಳು ವಾಹನದಿಂದ ಇಳಿದ ನಂತರ ಕೆ.ಬಿ. ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ಗಳ ಮೂಲಕ ಕಂಠೀರವ ಕ್ರೀಡಾಂಗಣ ಪ್ರವೇಶಿಸಬಹುದು.ಇನ್ನು ಸಾರ್ವಜನಿಕರು ಹಾಗೂ ಜನಸಾಮಾನ್ಯರು ಕೆ.ಜಿ. ರಸ್ತೆಯ ಎಸ್‌ಬಿಎಂ ಜಂಕ್ಷನ್ ಬಳಿ, ರಿಚ್‌ಮಂಡ್ ಸರ್ಕಲ್ ಬಳಿ ಅಥವಾ ಕ್ವೀನ್ಸ್ ಸರ್ಕಲ್ ಬಳಿಯಿಂದ ಕ್ರೀಡಾಂಗಣ ಪ್ರವೇಶಿಸಲು ಅನುಕೂಲ ಮಾಡಲಾಗಿದೆ.
ಮಹತ್ವದ ಸೂಚನೆ
* ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಪ್ರಮಾಣ ವಚನ ಸಮಾರಂಭಕ್ಕೆ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳು, ಬೆಂಕಿಪೊಟ್ಟಣ, ಲೈಟರ್‌ಗಳು ತರದಂತೆ ಸೂಚಿಸಲಾಗಿದೆ.
* ಮುಖ್ಯ ಕೆಲಸಗಳು, ಕಂಠೀರವ ಕ್ರೀಡಾಂಗಣ ಸಮೀಪದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಸಿಇಟಿ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚಿಸಲಾಗಿದೆ.
-
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು











Click it and Unblock the Notifications