ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾ

|
Google Oneindia Kannada News

ಬೆಂಗಳೂರು, ಆಗಸ್ಟ್ 04: ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಸಿದ್ದರಾಮಯ್ಯ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

Recommended Video

ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ | Oneindia Kannada

ನನಗೆ ಕೊರೊನಾ ಪಾಸಿಟಿವ್ ಬಂದಿದೆ, ವೈದ್ಯರ ಸಲಹೆ ಮೆರಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದಿದ್ದವರಲ್ಲಿ ಯಾರಿಗಾದರೂ ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ದಯವಿಟ್ಟು ಕ್ವಾರಂಟೈನ್‌ಗೆ ಒಳಗಾಗಿ ಎಂದು ವಿನಂತಿಸಿಕೊಂಡಿದ್ದಾರೆ.

Breaking: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲುBreaking: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Siddaramaiah Tested Coronavirus Positive

ಅಂದ್ಹಾಗೆ, ಸಿದ್ದರಾಮಯ್ಯ ಅವರಿಗೆ ನಿನ್ನೆ ಬೆಳಿಗ್ಗೆಯಿಂದ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನಲೆ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Corona antigen test ಮಾಡಿದ ನಂತರ ಸೋಂಕು ದೃಢಪಟ್ಟಿರುವುದು ತಿಳಿದಿದೆ.

ಈ ಕುರಿತು ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಹ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ಆಗಿ ಎಂದು ವಿನಂತಿಸಿಕೊಂಡಿದ್ದಾರೆ.

ಇನ್ನು ಭಾನುವಾರವಷ್ಟೆ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ, ಮಾಜಿ ಸಿಎಂ ಸಿದ್ದರಾಮಯ್ಯ ಸಹ ಅದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ, ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ, ರಾಜಸ್ಥಾನ ರಾಜಕೀಯ ಬಿಕ್ಕಟ್ಟು ವಿರೋಧಿಸಿ ಪ್ರತಿಭಟನೆ, ವೈದ್ಯಕೀಯ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಖಂಡಿಸಿ ಪ್ರತಿಭಟನೆ ಹಾಗೂ ಸತತ ಸುದ್ದಿಗೋಷ್ಠಿಗಳನ್ನು ನಡೆಸಿದ್ದರು.

English summary
Congress senior Leader Siddaramaiah tested coronavirus positive. he was admitted to manipal hospital at yesterday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X