ಶಾಸಕರನ್ನು ಕಾಯುವ ಚೌಕಿದಾರ್ ಆಗಿಬಿಟ್ಟೀರಲ್ಲಾ ಮೋದಿ: ಸಿದ್ದರಾಮಯ್ಯ

ಬೆಂಗಳೂರು, ಜನವರಿ 15: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ಬದಲಾವಣೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮತ್ತು ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಬೆಳಿಗ್ಗೆಯಷ್ಟೇ ಪ್ರಧಾನಿ ಮೋದಿ ಅವರ ಸ್ವಚ್ಛ ಉದ್ದೇಶ ಮತ್ತು ಸೂಕ್ತ ಅಭಿವೃದ್ಧಿ ಘೋಷಣೆ ಕುರಿತು ಲೇವಡಿ ಮಾಡಿದ್ದ ಸಿದ್ದರಾಮಯ್ಯ, ಸಂಜೆ ಮತ್ತೊಂದು ವ್ಯಂಗ್ಯದ ಬಾಣವನ್ನು ಮೋದಿ ಕಡೆಗೆ ತೂರಿದ್ದಾರೆ.

Siddaramaiah tweet criticised Narendra modi as Chowkidar guarding state MLAs

ಮೋದಿ ಅವರನ್ನು ಟೀಕಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೇ ಬಳಸುವ ಚೌಕಿದಾರ್ ಪದವನ್ನು ಬಳಸಿಕೊಂಡು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್ ಶಾಸಕರು ಪಕ್ಷದ ನಾಯಕರಿಂದ ತಪ್ಪಿಸಿಕೊಂಡು, ಬಿಜೆಪಿಯೊಂದಿಗೆ ಸಂಪರ್ಕ ಹೊಂದುತ್ತಿದ್ದಾರೆ ಎಂಬ ಸುದ್ದಿಗೆ ಅವರು ಮೋದಿ ಅವರನ್ನು ಹೊಣೆಯನ್ನಾಗಿಸಿದ್ದಾರೆ.

ಚೌಕಿದಾರ್ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ದೇಶದ ಚೌಕಿದಾರ್ ಎಂದು ಹೇಳಿಕೊಳ್ತೀರಿ. ಈಗ ನಮ್ಮ ರಾಜ್ಯದ ಶಾಸಕರನ್ನು ಹೊಟೇಲ್ ಕೋಣೆಗಳಲ್ಲಿ ಕೂಡಿ ಹಾಕಿ ಕಾಯುತ್ತಿರುವ ಚೌಕಿದಾರ್ ಆಗಿಬಿಟ್ಟಿರಲ್ಲಾ.. ಛೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+