ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿ ಪೊಲೀಸರ ನಡೆ 'ಬೇಲಿಯೇ ಎದ್ದು ಹೊಲ ಮೇಯ್ದಂತೆ': ಸಿದ್ದರಾಮಯ್ಯ

|
Google Oneindia Kannada News

Recommended Video

ದೆಹಲಿ ಪೊಲೀಸರ ನಡೆಗೆ ವಿರೋಧ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 16: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಯುನಿವರ್ಸಿಟಿ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೌರ್ಯ' ಬೇಲಿಯೇ ಎದ್ದು ಹೊಲ ಮೇಯ್ದಂತೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರ ವಿರುದ್ಧವೇ ಅನುಮಾನದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರ ವಿರುದ್ಧವೇ ಅನುಮಾನ

ವಿಶ್ವವಿದ್ಯಾಲಯ ಕ್ಯಾಂಪಸ್‌ಗೆ ಪೊಲೀಸರೇ ನುಗ್ಗಿ ನಡೆಸಿರುವ ದಾಂಧಲೆ ನಡೆಸಿ ವಿದ್ಯಾರ್ಥಿಗಳ ಮೇಲೆ‌ ನಡೆಸಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

Siddaramaiah Tweet On Delhi Police Harassment

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ದೆಹಲಿಯಲ್ಲಿ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಡಿನ ದಾಳಿ ನಡೆಸಿರುವ ಹಾಗೂ ಕ್ಯಾಂಪಸ್‌ ಒಳಗೆ ನುಗ್ಗಿ ದಾಂಧಲೆ ಮಾಡಿರುವ ವೀಡಿಯೋ ವೈರಲ್ ಆಗಿದೆ.

ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ ಸಮೂಹ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ವಾಧಿಕಾರಿ ಧಿಮಾಕಿನಿಂದ ಹತ್ತಿಕ್ಕಲು ಹೊರಟಿರುವ ನರೇಂದ್ರ ಮೋದಿ ಸರ್ಕಾರದ ನಡೆ ಖಂಡನೀಯ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.

English summary
Delhi Police entered the Jamia Millia University without Permission. And thrashed the students is condemnable said Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X