ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

#ResignBSYShah ಸಿದ್ದರಾಮಯ್ಯ ಸರಣಿ ಟ್ವೀಟ್ ಬಾಣ

|
Google Oneindia Kannada News

ಬೆಂಗಳೂರು, ನವೆಂಬರ್ 03: "ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ಸೋರಿಕೆಯಾಗಿರುವ ಆಡಿಯೋ/ವಿಡಿಯೋವನ್ನು ಸುಪ್ರೀಂಕೋರ್ಟ್ ಮುಂದಿಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಮುಂದಾಗಿದೆ.

"ಸಂವಿಧಾನದ ಆಶಯವನ್ನು ಬುಡಮೇಲು ಮಾಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಯೋಗ ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಮನವಿ ಪತ್ರ ಸಲ್ಲಿಸಿದೆ.

ರಾಜ್ಯಪಾಲ ಕೈಗೆ ಆಡಿಯೋ ಬಾಂಬ್: ಸರ್ಕಾರ ವಜಾಕ್ಕೆ ಕೆಪಿಸಿಸಿ ಆಗ್ರಹರಾಜ್ಯಪಾಲ ಕೈಗೆ ಆಡಿಯೋ ಬಾಂಬ್: ಸರ್ಕಾರ ವಜಾಕ್ಕೆ ಕೆಪಿಸಿಸಿ ಆಗ್ರಹ

ಕಾಂಗ್ರೆಸ್- ಜೆಡಿಎಸ್ ಶಾಸಕರ ಸರಣಿ ರಾಜೀನಾಮೆ ಬಳಿಕ ಅಲ್ಪಸಂಖ್ಯೆಗೆ ಕುಸಿದ ಕೈ ತೆನೆ ಸರ್ಕಾರ ಪತನವಾಗಲು ಆಪರೇಷನ್ ಕಮಲ ಅಸ್ತ್ರವನ್ನು ಬಿಜೆಪಿ ಬಳಸಿದೆ. ರಾಜೀನಾಮೆ ನೀಡಿದ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು.

ಯಡಿಯೂರಪ್ಪ ಆಡಿಯೋ ವಿವಾದ; ಬಿಜೆಪಿಯ ಸ್ಪಷ್ಟನೆಯಡಿಯೂರಪ್ಪ ಆಡಿಯೋ ವಿವಾದ; ಬಿಜೆಪಿಯ ಸ್ಪಷ್ಟನೆ

ಇದೆಲ್ಲವೂ ಹಾಲಿ ಗೃಹ ಸಚಿವ ಅಮಿತ್ ಶಾ ಅವರ ಅಣತಿಯಂತೆ ನಡೆದಿದೆ, ಯಡಿಯೂರಪ್ಪ ಅವರ ಹೇಳಿಕೆಯಿಂದ ಕೈ ತೆನೆ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ಹಿಡಿದ ವಾಮಮಾರ್ಗ ಈಗ ಬಹಿರಂಗವಾಗಿದೆ ಎಂದು ಕಾಂಗ್ರೆಸ್ ದೂರಿದೆ.

ನಮ್ಮ‌ ಪಕ್ಷದ ಶಾಸಕರಿಗೆ ಆಮಿಷ

ನಮ್ಮ‌ ಪಕ್ಷದ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಮುಂಬೈನ ಹೊಟೇಲ್‌ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಪರೇಷನ್ ಕಮಲ ಎಂಬ ಅಸಂವಿಧಾನಿಕ ಕಾರ್ಯಾಚರಣೆಯ ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ

ಸಿದ್ದರಾಮಯ್ಯರಿಂದ ಸರಣಿ ಪ್ರಶ್ನೆಗಳು

ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ ಬಿಎಸ್ ಯಡಿಯೂರಪ್ಪ ಈಗ ಆಪರೇಷನ್ ಕಮಲ ಕಾರ್ಯಾಚರಣೆ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹ ಗೃಹಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ? ಎಂದು ಮತ್ತೊಂದು ಟ್ವೀಟ್ ನಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆಪರೇಷನ್ ಕಮಲಕ್ಕೆ ಸಾಕ್ಷ್ಯ

ಬಿಎಸ್ ಯಡಿಯೂರಪ್ಪ ಅವರು ತಮ್ಮ ಸರ್ಕಾರದ ನೂರು ದಿನಗಳನ್ನು ಒಂದು ಅದ್ಭುತ ವಿಡಿಯೋ ಪ್ರಸಾರದ ಮೂಲಕ ಆಚರಿಸಿದ್ದಾರೆ. ಈ ಮೂಲಕ ತಾವು ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ರಾಜ್ಯದ ಜನ ಅವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದಿದ್ದಾರೆ.

ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು

ಸನ್ಮಾನ್ಯ ರಾಜ್ಯಪಾಲರನ್ನು ಪಕ್ಷದ ನಾಯಕರ ಜೊತೆ ಭೇಟಿ ಮಾಡಿ, "ಅಪರೇಷನ್ ಕಮಲ" ದಲ್ಲಿ ಭಾಗಿಯಾಗಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಮೇಲೆ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿದೆವು ಎಂದು ರಾಜಭವನದಲ್ಲಿ ವಜುಭಾಯಿ ವಾಲರನ್ನು ಭೇಟಿ ಮಾಡಿದ ನಂತರ ಮನವಿ ಪತ್ರ ಸಮೇತ ಟ್ವೀಟ್ ಮಾಡಿದ್ದಾರೆ.

English summary
AmitShah who is responsible for the resignation of MLAs by offering them with money & position, should take moral responsibility & immediately resign for indulging in anti-constitutional activities tweeted Former CM Siddaramaiah with #ResignBSYShah tag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X