• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರಾವಾಹಿ, ಸಿನಿಮಾ ಕಲಾವಿದರಿಗೆ ಪರಿಹಾರ ನೀಡಬೇಕು- ಸಿದ್ಧರಾಮಯ್ಯ ಒತ್ತಾಯ

|

ಬೆಂಗಳೂರು, ಮೇ 8: ಇಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿರೋಧ ಪಕ್ಷಗಳು, ರೈತ ಸಂಘಟನೆಗಳ ಮುಖಂಡರನ್ನು ಒಳಗೊಂಡ ನಿಯೋಗದ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ಹಕ್ಕೊತ್ತಾಯಗಳನ್ನು ಸಲ್ಲಿಸಿದೆ.

ಈ ವೇಳೆ ಲಾಕ್‌ಡೌನ್‌ನಿಂದ ಜನರ ಸಮಸ್ಯೆಯ ಕುರಿತಾಗಿ ಚರ್ಚೆ ನಡೆಸಿದ್ದು, ರೈತರ ಸಮಸ್ಯೆ, ಬೀದಿ ಬದಿಯ ವ್ಯಾಪಾರಿಗಳ ಸಮಸ್ಯೆ, ಉದ್ಯೋಗ ಸಮಸ್ಯೆಗಳ ಜೊತೆಗೆ ಕಲಾವಿದರ ಸಮಸ್ಯೆಯನ್ನು ಸಹ ಮುಖ್ಯಮಂತ್ರಿಗಳ ಮುಂದೆ ಸಿದ್ಧರಾಮಯ್ಯ ಇಟ್ಟಿದ್ದಾರೆ.

ಸಿಎಂ ಘೋಷಿಸಿದ ಕೊರೊನಾ ಪ್ಯಾಕೇಜ್ ಬಗ್ಗೆ ಸಿದ್ದರಾಮಯ್ಯರಿಗೆ ದೂರು!

ಸಿನಿಮಾ, ಧಾರವಾಹಿಗಳಲ್ಲಿ ಕೆಲಸ ಮಾಡುವ ಕಲಾವಿದರಿಗೆ ಪ್ರತಿ ತಿಂಗಳು ರೂ.10,000 ನೀಡಬೇಕು ಎಂದು ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಲಾಕ್‌ಡೌನ್‌ನಿಂದ ಚಿತ್ರೀಕರಣ ಇಲ್ಲದೆ, ಕಂಗಾಲಾದ ಬಡ ಕಲಾವಿದರಿಗೆ ನೆರವು ನೀಡಬೇಕು ಎಂದು ತಿಳಿಸಿದ್ದಾರೆ.

ಅದರೊಂದಿಗೆ, ಬೀದಿ ಬದಿಯ ವ್ಯಾಪಾರಿಗಳು, ಅಲೆಮಾರಿ ಸಮುದಾಯಗಳು ಸೇರಿದಂತೆ ಸಂಘಟಿತ, ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ರೂ.10,000 ನೀಡಬೇಕು ಎಂದು ಒತ್ತಾಯಿಸಿದ್ದಾರೆ.

''ಸಾಂಪ್ರದಾಯಿಕ ವೃತ್ತಿ ನಡೆಸುವವರು, ಸಿನಿಮಾ, ಧಾರವಾಹಿಗಳಲ್ಲಿ ಕೆಲಸ ಮಾಡುವ ಕಲಾವಿದರು, ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಬೀದಿ ಬದಿಯ ವ್ಯಾಪಾರಿಗಳು, ಅಲೆಮಾರಿ ಸಮುದಾಯಗಳು ಸೇರಿದಂತೆ ಸಂಘಟಿತ, ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ರೂ.10,000 ನೀಡಬೇಕು.'' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

ಲಾಕ್‌ಡೌನ್ ಕಾರಣದಿಂದಾಗಿ ಜನರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕನಿಷ್ಟ ರೂ.50,000 ಕೋಟಿಯ ವಿಶೇಷ ಆರ್ಥಿಕ ಪ್ಯಾಕೇಜನ್ನು ನೀಡುವಂತೆ ಒತ್ತಾಯಿಸಬೇಕು ಎಂದು ಯಡಿಯೂರಪ್ಪಗೆ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

English summary
Opposition party leader Siddaramaiah tweets that the government has to give relief amounts for serial and film actors also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X