ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಏ. 20: ಪಾದರಾಯನಪುರ ಘಟನೆಯಲ್ಲಿ ಭಾಗವಹಿಸಿದ್ದವರನ್ನು ಗುರುತಿಸಿ ಕಠಿಣ ಶಿಕ್ಷಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ. ‌ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ.

ಘಟನೆ ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು.

Siddaramaiah urged to recognize those who involved in the Padarayanapura incident and punish them

ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಸಹಮತವಿದೆ. ಇದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಯಾರೇ ಆಗಲಿ, ಕಾನೂನಿಗೆ ಗೌರವ ಕೊಡಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

English summary
Siddaramaiah has urged the government to recognize those who involved in the Padarayanapura incident and punish them. He said strict action should be taken against those who violate the law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X