ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿರೋಧಿಗಳಿಗೆ ಸಿದ್ದರಾಮಯ್ಯ ದೀಪಾವಳಿ ರಾಕೆಟ್ !

|
Google Oneindia Kannada News

Recommended Video

Siddaramaiah fires Deepavali rocket on his political opponents

ಬೆಂಗಳೂರು, ಅಕ್ಟೋಬರ್ 28: ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ಮಾಡಿ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲ ಇಲ್ಲ ಸಿದ್ದರಾಮಯ್ಯ ಹಾಗೆ ಹೇಳಿರಲಿಕ್ಕಿಲ್ಲ ಎಂದ ಡಿಕೆ ಶಿವಕುಮಾರ್ ಇಲ್ಲ ಇಲ್ಲ ಸಿದ್ದರಾಮಯ್ಯ ಹಾಗೆ ಹೇಳಿರಲಿಕ್ಕಿಲ್ಲ ಎಂದ ಡಿಕೆ ಶಿವಕುಮಾರ್

ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ ಎಂದಿದ್ದಾರೆ.

 ನನ್ನದು ಜಾತಿವಿನಾಶದ ಹಾದಿ, ನಿಮ್ಮದು?

ನನ್ನದು ಜಾತಿವಿನಾಶದ ಹಾದಿ, ನಿಮ್ಮದು?

ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್,ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು ಎಂದು ಹೇಳಿದ್ದಾರೆ.

ಡಿಕೆಶಿ ಕೈಲಿ ಜೆಡಿಎಸ್ ಬಾವುಟ, ಕೆಂಡಾಮಂಡಲವಾದ ಸಿದ್ದರಾಮಯ್ಯಡಿಕೆಶಿ ಕೈಲಿ ಜೆಡಿಎಸ್ ಬಾವುಟ, ಕೆಂಡಾಮಂಡಲವಾದ ಸಿದ್ದರಾಮಯ್ಯ

ಬಹಿರಂಗ ಚರ್ಚೆಗೆ ನಾನು ಸಿದ್ಧ

ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ.ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಇದು ನನ್ನ ಸವಾಲು ಕೂಡಾ ಹೌದು ಎಂದು ಹೇಳಿದ್ದಾರೆ.

ಜನರು ಜಾತ್ಯತೀತರಾಗುತ್ತಿದ್ದಾರೆ ಎನ್ನುವುದರಲ್ಲಿ ತಪ್ಪೇನಿದೆ?

ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ, ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಪಕ್ಷಗಳು ದಿವಾಳಿಯಾದಾಗ ಇಂತಹ ಮಾತುಗಳು ಕೇಳುತ್ತವೆ

ರಾಜಕೀಯ ಪಕ್ಷಗಳು ದಿವಾಳಿಯಾದಾಗ ಇಂತಹ ಮಾತುಗಳು ಕೇಳುತ್ತವೆ

ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.

ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳ ಎಂದು ತಿಳಿಸಿದ್ದಾರೆ.

English summary
Siddaramaiah Done Series Of Tweet on Twitter ,and Deepavali message to Political Opponents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X