ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಆಡಿಯೋ ವಿಚಾರ: ಸಿದ್ದರಾಮಯ್ಯ ರಾಷ್ಟ್ರಪತಿಗೆ ಪತ್ರ

|
Google Oneindia Kannada News

ಬೆಂಗಳೂರು, ನವೆಂಬರ್ 10: ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ಅವಕಾಶ ಕೋರಿ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವ ಅಮಿತ್ ಶ ಹಾಗೂ ಕರ್ನಾಟಕ ಸಿಎಂ ಯಡಿಯೂರಪ್ಪ ಅವರನ್ನು ವಜಾಗೊಳಿಸುವಂತೆಯೂ ಪತ್ರದಲ್ಲಿ ಆಗ್ರಹಿಸಲಾಗಿದೆ.

ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಎಂಟು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ, ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ 7 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಇವತ್ತು ಚರ್ಚೆಯಾಗಿದೆ. ಇನ್ನೆರೆಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿಕೆ ಶಿವಕುಮಾರ್ ನಿವಾಸಕ್ಕೆ ರಾಜು ಕಾಗೆ, ಅಶೋಕ್ ಪೂಜಾರಿ ಭೇಟಿಡಿಕೆ ಶಿವಕುಮಾರ್ ನಿವಾಸಕ್ಕೆ ರಾಜು ಕಾಗೆ, ಅಶೋಕ್ ಪೂಜಾರಿ ಭೇಟಿ

ಪಕ್ಷದ ಸಿದ್ಧಾಂತ ಯಾರೂ ಬೇಕಾದರೂ ಒಪ್ಪಿ ಬರಲಿ

ಪಕ್ಷದ ಸಿದ್ಧಾಂತ ಯಾರೂ ಬೇಕಾದರೂ ಒಪ್ಪಿ ಬರಲಿ

ರಾಜು ಕಾಗೆ ಹಾಗೂ ಅಶೋಕ್ ಪೂಜಾರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವುದಾದರೆ ಯಾರು ಬೇಕಾದರೂ ಬರಲಿ, ಮೊದಲು ಪಕ್ಷದ ತತ್ವ ಸಿದ್ಧಾಂತ ಒಪ್ಪಲಿ, ಟಿಕೆಟ್ ನೀಡುವ ವಿಚಾರ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಆಯಾ ಜಿಲ್ಲೆಗಳಲ್ಲಿ ಟಿಪ್ಪು ಜಯಂತಿ ಆಚರಣೆ

ಆಯಾ ಜಿಲ್ಲೆಗಳಲ್ಲಿ ಟಿಪ್ಪು ಜಯಂತಿ ಆಚರಣೆ

ಬಿಜೆಪಿ ಸರ್ಕಾರವು ಟಿಪ್ಪು ಜಯಂತಿ ಆಚರಣೆ ಮಾಡುತ್ತಿಲ್ಲ, ಖಾಸಗಿಯಾಗಿ ಜಯಂತಿ ಆಚರಣೆ ಮಾಡುವ ಬಗ್ಗೆ ಕೋರ್ಟ್ ಹೇಳಿದೆ. ಆಯಾ ಜಿಲ್ಲೆಗಳಲ್ಲಿ ಜಯಂತಿ ಆಚರಣೆ ಮಾಡಲಾಗುತ್ತದೆ. ಪಕ್ಷದವತಿಯಿಂದ ಆಚರಣೆ ಮಾಡುವ ಬಗ್ಗೆ ಪಕ್ಷದ ಅಧ್ಯಕ್ಷರು ಹೇಳುತ್ತಾರೆ ಎಂದು ಹೇಳಿದ್ದಾರೆ.

ನಾಳೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ನಾಯಕರ ಸಭೆ

ನಾಳೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ನಾಯಕರ ಸಭೆ

ಅಭ್ಯರ್ಥಿ ಘೋಷಣೆ ಮಾಡುವುದೊಂದೇ ಬಾಕಿ ಇದೆ. ಅದರ ಬಗ್ಗೆ ನವೆಂಬರ್ 11ರಂದು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಲ್ಲಾ ನಾಯಕರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. 13ರಂದು ಬೆಳಗ್ಗೆ ಅನರ್ಹ ಶಾಸಕರ ತೀರ್ಪು ಪ್ರಕಟವಾಗುವ ನಿರೀಕ್ಷೆ ಇದೆ. 13ರ ಸಂಜೆ ನಾವು ಅಭ್ಯರ್ಥಿಗಳ ಘೋಷಣೆ ಮಾಡಲು ನಿರ್ಧರಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

English summary
Siddaramaiah has written a letter requesting the President to address the issue of Operation Lotus Audio,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X