ಸಿದ್ದರಾಮಯ್ಯ, ಪರಮೇಶ್ವರ್ ಗೆ ಸೋನಿಯಾ ಬುಲಾವ್!

ಬೆಂಗಳೂರು, ನ. 16 : ಸಮಾವೇಶದ ಹೆಸರಿನಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪ್ರಚಾರ, ಸರ್ಕಾರದ ವಿವಾದಾತ್ಮಕ ಯೋಜನೆಗಳು, ಕಾಂಗ್ರೆಸ್ ಪಕ್ಷದ ಲೋಕಸಭೆ ಚುನಾವಣೆ ಪ್ರಚಾರ ಮುಂತಾದ ವಿಚಾರಗಳ ಕುರಿತಾಗಿ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಬುಲಾವ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳು ನ.18 ರಂದು ದೆಹಲಿಗೆ ತೆರಳಲಿದ್ದಾರೆ. ಸೋನಿಯಾ ಗಾಂಧಿ ಅವರೊಂದಿಗೆ ಉಭಯ ನಾಯಕರು ಸಭೆ ನಡೆಸಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭೆ ಚುನಾವಣಾ ಪ್ರಚಾರ ನಂತರ ಆರಂಭವಾಗಲಿದೆ.

Siddaramaiah

ನರೇಂದ್ರ ಮೋದಿ ಸಮಾವೇಶದ ಹೆಸರಿನಲ್ಲಿ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಿದೆ. ಸರ್ಕಾರದ ಯೋಜನೆಗಳ ಕುರಿತು ಪ್ರತಿಪಕ್ಷಗಳ ಟೀಕೆ ಮುಂತಾದ ವಿಚಾರಗಳ ಕುರಿತು ಸಭೆಯಲ್ಲಿ ಸೋನಿಯಾ ಗಾಂಧಿ ಸಿಎಂ ಮತ್ತು ಪರಮೇಶ್ವರ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟ ಸೇರ್ಪಡೆಯ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ಆದ್ದರಿಂದ ಈ ಸಭೆ ಕರೆಯಲಾಗಿದೆ, ಸರ್ಕಾರದ ಮುಂದಿನ ಕಾರ್ಯಕ್ರಮಗಳು ಮುಖ್ಯವಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವ ಕುರಿತು ರಾಜ್ಯ ನಾಯಕರಿಗೆ ಸೋನಿಯಾಗಾಂಧಿ ಸೂಚನೆಗಳನ್ನು ನೀಡುವ ಸಾದ್ಯತೆ ಇದೆ. (ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ಗೆ ಪತ್ರ!)

ನಿಗಮ ಮಂಡಳಿಗಳ ನೇಮಕಾತಿ, ಪಕ್ಷ ಮತ್ತು ಸರ್ಕಾರದ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ವಿಚಾರವೂ ಸೋನಿಯಾ ಗಾಂಧಿ ಅವರ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಬಹಳ ದಿನಗಳ ನಂತರ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರು ಒಟ್ಟಾಗಿ ಸೋನಿಯಾ ಗಾಂಧಿ ಭೇಟಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+