Get Updates
Get notified of breaking news, exclusive insights, and must-see stories!

ಬೆಂಗಳೂರು ಕಸ ಸಂಗ್ರಹ ಸಮಯದಲ್ಲಿ ಮಹತ್ವದ ಬದಲಾವಣೆ: ಬಿಬಿಎಂಪಿ

ಬೆಂಗಳೂರಿನಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ಹಾಗೂ ಕಸ ಸಂಗ್ರಹಿಸುವುದರಲ್ಲೂ ಲೋಪವಾಗುತ್ತಿದೆ. ಇದೀಗ ಈ ಸಮಸ್ಯೆಯನ್ನು ತಪ್ಪಿಸುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ. ಬೆಂಗಳೂರಿನಲ್ಲಿ ಕಸ ಸಂಗ್ರಹ ಮಾಡುವ ಟೈಮ್ ಅನ್ನು ಬಿಬಿಎಂಪಿ ಬದಲಾಯಿಸಿದೆ. ಇದರಿಂದ ನಗರದಲ್ಲಿ ಕಸದ ಸಮಸ್ಯೆ ಪರಿಹಾರವಾಗಲಿದೆ ಎಂದು ಬಿಬಿಎಂಪಿ ಹೇಳಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5.30 ರಿಂದ 6.30 ರವರೆಗೆ ನಿಗದಿಪಡಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಲಾಗಿದೆ.

Significant change in Bengaluru garbage collection times BBMP

ಈ ಹಿಂದೆ ಬೆಳಿಗ್ಗೆ 6.00 ರಿಂದ 7.30 ಸಮಯವನ್ನು ಜಾರಿ ಮಾಡಲಾಗಿತ್ತು. ಅದನ್ನು ಒಂದು ಗಂಟೆ ಮುಂಚಿತಗೊಳಿಸುವ ಮೂಲಕ ತ್ಯಾಜ್ಯ ಸಂಗ್ರಹಣೆಯನ್ನು ಜನರ ದೈನಂದಿನ ಕಾರ್ಯವೈಖರಿಯ ಜೊತೆಗೆ ಹೊಂದುವಂತೆ ಕ್ರಮ ಕೈಗೊಳ್ಳಲಾಗಿದೆ. ಈ ಬದಲಾವಣೆಯ ಮೂಲಕ ನಿವಾಸಿಗಳು ಕೆಲಸಕ್ಕೆ ಹೊರಡುವ ಮೊದಲು ತ್ಯಾಜ್ಯವನ್ನು ನೀಡಲು ಅನುಕೂಲವಾಗುವುದರ ಜೊತೆಗೆ, ಸಾರ್ವಜನಿಕರಿಂದ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಮತ್ತು ಬ್ಲಾಕ್ ಸ್ಪಾಟ್ (Black Spot) ಗಳು ರೂಪುಗೊಳ್ಳುವುದನ್ನು ತಡೆಗಟ್ಟಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾರ್ವಜನಿಕರ ಸಹಕಾರವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ತಪ್ಪದ ಕಸದ ಸಮಸ್ಯೆ: ಬೆಂಗಳೂರಿನಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಸ ಸಂಗ್ರಹ ಮಾಡುವ ಸಮಯವನ್ನು ಬದಲಾಯಿಸಿರುವುದರಿಂದ ಕಸದ ಸಮಸ್ಯೆ ಪರಿಹಾರವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಸದ ಸಮಸ್ಯೆ ವಿಪರೀತವಾಗಿತ್ತು. ಅಲ್ಲದೇ ಬ್ಲಾಕ್ ಸ್ಪಾಟ್‌ಗಳ ಸಂಖ್ಯೆಯಲ್ಲೂ ಭಾರೀ ಹೆಚ್ಚಳವಾಗಿತ್ತು. ಇತ್ತೀಚೆಗೆ ಈ ವಿಚಾರವಾಗಿ ಕರ್ನಾಟಕ ವಿಧಾನಸಭೆಯಲ್ಲಿ ಮಾತನಾಡಿದ್ದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ ಹೊಸ ಟೆಂಡರ್ ಕರೆಯುವುದಾಗಿ ಹೇಳಿದ್ದರು.

ಅಲ್ಲದೇ ವಿವಿಧ ಪ್ರಮುಖ ನಗರಗಳಲ್ಲಿ ಕಸ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲನೆ ಮಾಡಲಾಗಿದ್ದು, ಉತ್ತಮ ಕಸ ಸಂಗ್ರಹ ಹಾಗೂ ವಿಲೇವಾರಿ ವಿಧಾನವನ್ನು ಬೆಂಗಳೂರಿನಲ್ಲೂ ಅಳವಡಿಸಿಕೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+