ಬೆಂಗಳೂರಿನಲ್ಲಿ ನಾಳೆಯಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಮತದಾರರು ಏನು ಮಾಡಬೇಕು

ಬೆಂಗಳೂರಿನಲ್ಲಿ ಜೂನ್ 30ರ ಮಂಗಳವಾರದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಜೂನ್ 30ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ಭೇಟಿ ನೀಡಿ ಗಣತಿ ಅರ್ಜಿಗಳನ್ನು ವಿತರಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ ಮಾಡಿದ್ದಾರೆ. ನಾಳೆಯಿಂದ ಎಸ್‌ಐಆರ್ ಹೇಗೆ ನಡೆಯಲಿದೆ ಹಾಗೂ ಬೆಂಗಳೂರಿನ ಮತದಾರರು ಏನು ಮಾಡಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಜಿಬಿಎ ಕೇಂದ್ರ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಮನೆ-ಮನೆ ಭೇಟಿಗೆ ಸಂಬಂಧಿಸಿದಂತೆ ನಡೆದ ಪತ್ರಿಗೋಷ್ಠಿಯನ್ನು ಉದ್ದೇಶಿಸಿ ಮಹೇಶ್ವರ್ ರಾವ್ ಅವರು ಮಾತನಾಡಿದರು. ಮನೆ-ಮನೆ ಭೇಟಿ ಸಂದರ್ಭದಲ್ಲಿ ನಿವಾಸಿಗಳು ಲಭ್ಯವಿಲ್ಲದಿದ್ದರೆ ಬಿಎಲ್‌ಒಗಳು ಇನ್ನೆರಡು ಬಾರಿ ಭೇಟಿ ನೀಡಿ ಗಣತಿ ಅರ್ಜಿಗಳನ್ನು ವಿತರಿಸಲಿದ್ದಾರೆ. ಯಾವುದೇ ಮನೆ ಸಮೀಕ್ಷೆಯಿಂದ ಹೊರಗುಳಿಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

SIR

ಶೇ.76.32ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಪೂರ್ವಭಾವಿ ಚಟುವಟಿಕೆಯಾಗಿ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಮಾಡುವ ಕಾರ್ಯದಲ್ಲಿ ಇದುವರೆಗೆ ಶೇ. 76.32ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟು 1,03,88,363 ಮತದಾರರಲ್ಲಿ 79,27,902 ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದ್ದು, ಇನ್ನೂ 24,60,461 ಮತದಾರರ ಮ್ಯಾಪಿಂಗ್ ಬಾಕಿಯಿದೆ. ಉಳಿದ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.

ಬೆಂಗಳೂರು ನಗರ ಸಚಿವ ಕೃಷ್ಣಬೈರೇಗೌಡರೇ ಈ ಬಗ್ಗೆಯೂ ರೀಲ್ಸ್‌ ಮಾಡಿ ಪ್ಲೀಸ್ ಎಂದ ಆರ್ ಅಶೋಕ್
ಬೆಂಗಳೂರು ನಗರ ಸಚಿವ ಕೃಷ್ಣಬೈರೇಗೌಡರೇ ಈ ಬಗ್ಗೆಯೂ ರೀಲ್ಸ್‌ ಮಾಡಿ ಪ್ಲೀಸ್ ಎಂದ ಆರ್ ಅಶೋಕ್

ಬೆಳಿಗ್ಗೆ ನಮೂನೆ ವಿತರಣೆ - ಸಂಜೆ ಸಂಗ್ರಹ

ಬಿಎಲ್‌ಒಗಳು ಬೆಳಿಗ್ಗೆ ಮನೆಗಳಿಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಲಿದ್ದು, ಸಂಜೆ ವೇಳೆಗೆ ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಮತದಾರರು ಭರ್ತಿ ಮಾಡಿದ ನಮೂನೆಗಳೊಂದಿಗೆ ತಮ್ಮ ನಿವಾಸದ ಇತ್ತೀಚಿನ ಛಾಯಾಚಿತ್ರವನ್ನು ಸಹ ಸಲ್ಲಿಸುವಂತೆ ಕೋರಲಾಗಿದೆ. ಅಲ್ಲದೆ, ಗಣತಿ ನಮೂನೆಗಳನ್ನು ವೋಟರ್ ಕಲೆಕ್ಷನ್ ಸೆಂಟರ್‌ಗಳಲ್ಲಿ ಹಾಗೂ ರಜಾದಿನಗಳಲ್ಲಿ ಮತಗಟ್ಟೆಗಳಲ್ಲಿ ಸಲ್ಲಿಸಬಹುದಾಗಿದೆ.

2,855 ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ಗಣತಿ ನಮೂನೆ ಭರ್ತಿ ಮಾಡುವ ವೇಳೆ ಅಥವಾ ಮತದಾರರ ನೋಂದಣಿಗೆ ಸಂಬಂಧಿಸಿದ ಯಾವುದೇ ಗೊಂದಲಗಳಿದ್ದಲ್ಲಿ ಮಾರ್ಗದರ್ಶನ ನೀಡಲು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ 2,855 ಮತದಾರರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರ ಜೊತೆಗೆ ವಾರ್ಡ್ ಕಚೇರಿಗಳಲ್ಲಿ ಬಿಎಲ್‌ಒಗಳಿಗೆ ನೆರವಾಗುವ ಉದ್ದೇಶದಿಂದ 902 Facilitation Centres ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

SIR: ನಿಮ್ಮ ವೋಟರ್ ಐಡಿ ಪರಿಷ್ಕರಣೆ ಹೇಗೆ, ಮತದಾರರ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವುದು ಹೇಗೆ ಇಲ್ಲಿದೆ ಪಿನ್ ಟು ಪಿನ್ ಮಾಹಿತಿ
SIR: ನಿಮ್ಮ ವೋಟರ್ ಐಡಿ ಪರಿಷ್ಕರಣೆ ಹೇಗೆ, ಮತದಾರರ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವುದು ಹೇಗೆ ಇಲ್ಲಿದೆ ಪಿನ್ ಟು ಪಿನ್ ಮಾಹಿತಿ

16,505 ಬಿಎಲ್‌ಎ ನೇಮಕ: ಬೆಂಗಳೂರು ನಗರ ಜಿಲ್ಲೆಯಲ್ಲಿ 28 ಮತದಾರರ ನೋಂದಣಾಧಿಕಾರಿಗಳು, 75 ಸಹಾಯಕ ಮತದಾರರ ನೋಂದಣಾಧಿಕಾರಿಗಳು, 905 ಬಿಎಲ್‌ಒ ಮೇಲ್ವಿಚಾರಕರು ಹಾಗೂ 8,972 ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಿದ್ದು, ಮನೆ-ಮನೆ ಸಮೀಕ್ಷೆ ಕಾರ್ಯಕ್ಕೆ ಅಗತ್ಯ ತರಬೇತಿ ನೀಡಲಾಗಿದೆ. ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ 16,505 ಬಿಎಲ್‌ಎ-2ರನ್ನು ನೇಮಕ ಮಾಡಲಾಗಿದ್ದು, ಅದರ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಲಾಗಿದೆ.

ರಾಜಕೀಯ ಪಕ್ಷಗಳೊಂದಿಗೆ ಸಭೆ: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ರಜಾದಿನ ಹಾಗೂ ಸಂಜೆ ವೇಳೆಯಲ್ಲಿಯೂ ಬಿಎಲ್‌ಒಗಳ ಮೂಲಕ ಕಾರ್ಯ ನಿರ್ವಹಿಸುವುದು, ಮತದಾರರ ಗುರುತಿನ ಚೀಟಿ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಎಸ್ಐಆರ್ (SIR) ವೇಳಾಪಟ್ಟಿ:

* ಮನೆ-ಮನೆ ಭೇಟಿ: 30.06.2026 ರಿಂದ 29.07.2026

* ಮತಗಟ್ಟೆಗಳ ಮರುಹೊಂದಾಣಿಕೆ: 29.07.2026

* ಕರಡು ಮತದಾರರ ಪಟ್ಟಿ ಪ್ರಕಟಣೆ: 05.08.2026

* ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ: 05.08.2026 ರಿಂದ 04.09.2026

* ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ: 05.08.2026 ರಿಂದ 03.10.2026

* ಅಂತಿಮ ಮತದಾರರ ಪಟ್ಟಿ ಪ್ರಕಟಣೆ: 07.10.2026

ಹೆಚ್ಚಿನ ಮಾಹಿತಿಗಾಗಿ: https://ceo.karnataka.gov.in/vfc/details ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+