SIR 2026: ಮತದಾರರಿಗೆ ನೋಟಿಸ್ ಬಂದಿದೆಯಾ? ಈ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR 2026) ಪೂರ್ಣಗೊಂಡಿದ್ದು, ಇದೀಗ ವಿಚಾರಣೆ ಪ್ರಕ್ರಿಯೆ ಆರಂಭಿಸಿದೆ. ನೋ ಮ್ಯಾಪಿಂಗ್ ಮತ್ತು ಅಸಂಜಸತೆಗೆ ಸಂಬಂಧಿಸಿದಂತೆ ಯಾವುದೇ ಮತದಾರರಿಗೆ ನೋಟಿಸ್ ಬಂದಿದ್ದರೆ, ನೋಟಿಸ್‌ನಲ್ಲಿ ತಿಳಿಸಿರುವ ದಿನಾಂಕದಂದು ನಿಗದಿತ ವಿಚಾರಣಾ ಸ್ಥಳಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ತಮ್ಮ ವಿಚಾರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಅಪರ ಜಿಲ್ಲಾ ಚುನಾವಣಾಧಿಕಾರಿ ಮತ್ತು ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಹೇಳಿದರು.
SIR-2026ರ ಕುರಿತು ಕೆ.ಆರ್. ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ಆಟೋಗಳಿಗೆ ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಚಾಲನೆ ನೀಡಿದರು. ಇದೇ ವೇಳೆ ವಿಚಾರಣೆ ಪ್ರಕ್ರಿಯೆಯ ಪರಿಶೀಲಿಸಿದರು.

ಕಾರ್ಯಕ್ರಮದಲ್ಲಿ SIR ಜಾಗೃತಿ ಪ್ರಚಾರ ಆಟೋಗಳ ಮೂಲಕ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ SIR-2026ರ ವಿಚಾರಣೆ ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸುವುದು ಈ ಜಾಗೃತಿ ಅಭಿಯಾನದ ಉದ್ದೇಶವಾಗಿದೆ ಎಂದರು.
ಸರಳವಾಗಿ ವಿಚಾರಣೆ ಪ್ರಕ್ರಿಯೆ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) 2026ರ ವಿಚಾರಣೆ ಪ್ರಕ್ರಿಯೆಯನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸರಳವಾಗಿ ಹಾಗೂ ಸುಗಮವಾಗಿ ನಡೆಸಲಾಗುತ್ತಿದೆ. ನೋಟಿಸ್ ಪಡೆದ ಮತದಾರರು ನೋಟಿಸ್‌ನಲ್ಲಿ ತಿಳಿಸಿರುವ ದಿನಾಂಕದಂದು ನಿಗದಿತ ವಿಚಾರಣಾ ಸ್ಥಳಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ತಮ್ಮ ವಿಚಾರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ನೋಟಿಸ್‌ನಲ್ಲಿಯೇ ವಿಚಾರಣೆ ನಡೆಯುವ ಸ್ಥಳ ಹಾಗೂ ದಿನಾಂಕದ ವಿವರಗಳನ್ನು ನಮೂದಿಸಲಾಗಿರುತ್ತದೆ ಎಂದು ಅವರು ಹೇಳಿದರು.
ವಿಚಾರಣೆಗೆ ಆಗಮಿಸುವ ಮತದಾರರಿಗೆ ದಾಖಲೆಗಳ ವಿಚಾರದಲ್ಲಿ ಅನಗತ್ಯ ತೊಂದರೆ ನೀಡದಂತೆ ಹಾಗೂ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡುವಂತೆ ERO ಹಾಗೂ AEROಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ವಿಚಾರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಮ್ಮ ಪ್ರಕರಣಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಆಯುಕ್ತರು ಮನವಿ ಮಾಡಿದರು.
ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಸಂದರ್ಭದಲ್ಲಿ ಕೆಲವು ಅರ್ಹ ವ್ಯಕ್ತಿಗಳ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಕಂಡುಬಂದಲ್ಲಿ, ಅವರು ಪ್ರಸ್ತುತ ಶಾಶ್ವತವಾಗಿ ವಾಸಿಸುತ್ತಿರುವ ಸ್ಥಳದಲ್ಲಿ Form-6 ಮೂಲಕ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಅವಕಾಶವಿದೆ ಎಂದರು.
ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ, ಪ್ರತಿಯೊಬ್ಬರಿಗೂ ಅಗತ್ಯ ಅವಕಾಶ ಹಾಗೂ ಮಾರ್ಗದರ್ಶನ ದೊರೆಯುವ ಉದ್ದೇಶದಿಂದ ವಿಚಾರಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ನೋಟಿಸ್ ಪಡೆದಿರುವ ಸಾರ್ವಜನಿಕರು ನಿಗದಿತ ದಿನಾಂಕ ಹಾಗೂ ಸ್ಥಳದಲ್ಲಿ ವಿಚಾರಣೆಗೆ ಹಾಜರಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕೋರಿದರು.


Click it and Unblock the Notifications
