SIR ಪ್ರಕ್ರಿಯೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಕಟ್ಟುನಿಟ್ಟಿನ ಕ್ರಮ, FIR ದಾಖಲು: ಜಿಬಿಎ ಎಚ್ಚರಿಕೆ!

SIR: ಪ್ರಕ್ರಿಯೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಕಟ್ಟುನಿಟ್ಟಿನ ಕ್ರಮ FIR ದಾಖಲಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಅಪರ ಜಿಲ್ಲಾ ಚುನಾವಣಾಧಿಕಾರಿ (ಕೇಂದ್ರ) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ (BTC) ಚುನಾವಣಾ ಸಿದ್ಧತೆ ಕುರಿತು ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೆಪ್ಟೆಂಬರ್ 29ರ ಮಂಗಳವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು (ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ಜಗದೀಶ್.ಜಿ ಅವರು SIR ಪ್ರಕ್ರಿಯೆಗೆ ಸಂಬಂಧಿಸಿದಂತೆ BLO ಅಥವಾ ಯಾವುದೇ ಸಂಬಂಧಪಟ್ಟ ಸಿಬ್ಬಂದಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವುದು ಅಥವಾ ತಪ್ಪು ಮಾರ್ಗದರ್ಶನ ನೀಡುವುದು ಕಂಡುಬಂದಲ್ಲಿ ನಿಯಮ ಉಲ್ಲಂಘನೆಯ ಸ್ವರೂಪಕ್ಕೆ ಅನುಗುಣವಾಗಿ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ, ಅಗತ್ಯವಿರುವ ಪ್ರಕರಣಗಳಲ್ಲಿ FIR ದಾಖಲಿಸುವಂತಹ ಕಾನೂನು ಕ್ರಮ ಕೈಗೊಳ್ಳಲಾಗುವುದು ತಿಳಿಸಿದ್ದಾರೆ.

SIR GBA Issues Strict Warning in Bengaluru FIR for Misleading Voters With False Information

ಅರ್ಹ ನಾಗರಿಕರಿಗೆ ಸೂಕ್ತ ಮಾಹಿತಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಗೊಂದಲ ಉಂಟಾಗದಂತೆ ಅಧಿಕೃತ ಹಾಗೂ ಪರಿಶೀಲಿತ ಮಾಹಿತಿಯನ್ನು ಮಾತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು ಹಾಗೂ 18 ವರ್ಷ ಅಥವಾ ಮೇಲ್ಪಟ್ಟ, ಭಾರತೀಯ ನಾಗರಿಕರಾಗಿದ್ದು ಹಾಗೂ ಚುನಾವಣಾ ಆಯೋಗ ನಿಗದಿಪಡಿಸಿರುವ ಇತರೆ ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ಒದಗಿಸುವಂತೆ ತಿಳಿಸಲಾಯಿತು.

ಅಗತ್ಯ ಪ್ರದೇಶಗಳಲ್ಲಿ ವಿಶೇಷ SIR ಅಭಿಯಾನ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಗತ್ಯವಿರುವ ಪ್ರದೇಶಗಳನ್ನು ಗುರುತಿಸಿ, ಅಂತಹ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಹಮ್ಮಿಕೊಳ್ಳುವಂತೆ ಸೂಚಿಸಲಾಯಿತು ಹಾಗೂ ಸ್ಥಳೀಯ ಮಟ್ಟದಲ್ಲಿ ಸಾರ್ವಜನಿಕರಿಗೆ SIR ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ತಲುಪಿಸುವ ಮೂಲಕ ಅರ್ಹ ನಾಗರಿಕರಿಗೆ ಅಗತ್ಯ ಸಹಕಾರ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರ ಸಹಕಾರಕ್ಕೆ ಮನವಿ

ಮತದಾರರ ಪಟ್ಟಿಯು ನಿಖರವಾಗಿದ್ದು, ಅರ್ಹ ಮತದಾರರ ಹೆಸರುಗಳು ಸೇರ್ಪಡೆಯಾಗಿರುವುದು ಹಾಗೂ ಯಾವುದೇ ಅರ್ಹ ಮತದಾರರು ಹೊರಗುಳಿಯದಿರುವುದು ಈ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಮೂನೆ-6 ಸೇರಿದಂತೆ ಸಂಬಂಧಿತ ಅರ್ಜಿಗಳನ್ನು ಸಲ್ಲಿಸಿ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಸಿದ್ಧತೆ ಕುರಿತು ಸಭೆ

ಬೆಂಗಳೂರು ಶಿಕ್ಷಕರ ಕ್ಷೇತ್ರದ (BTC) ಚುನಾವಣಾ ಸಿದ್ಧತೆ ಕುರಿತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಅಪರ ಜಿಲ್ಲಾ ಚುನಾವಣಾಧಿಕಾರಿಗಳು (ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ಅವರು ಸಭೆ ನಡೆಸಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ನಾಮಪತ್ರಗಳ ಪರಿಶೀಲನೆ, ಅಭ್ಯರ್ಥಿಗಳ ಹಿಂಪಡೆಯುವಿಕೆ, ಮತದಾನ ಹಾಗೂ ಮತ ಎಣಿಕೆ ಸೇರಿದಂತೆ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು.

ಚುನಾವಣಾ ವೇಳಾಪಟ್ಟಿ

• ಅಧಿಸೂಚನೆ ದಿನಾಂಕ : ಸೆಪ್ಟೆಂಬರ್ 29, 2026 (ಮಂಗಳವಾರ)

• ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 6, 2026 (ಮಂಗಳವಾರ)

• ನಾಮಪತ್ರಗಳ ಪರಿಶೀಲನೆ (Scrutiny) : ಅಕ್ಟೋಬರ್ 7, 2026 (ಬುಧವಾರ)

• ಅಭ್ಯರ್ಥಿಗಳ ಹಿಂಪಡೆಯುವಿಕೆಗೆ (Withdrawal) ಕೊನೆಯ ದಿನಾಂಕ : ಅಕ್ಟೋಬರ್ 9, 2026 (ಶುಕ್ರವಾರ)

• ಮತದಾನದ ದಿನಾಂಕ : ಅಕ್ಟೋಬರ್ 23, 2026 (ಶುಕ್ರವಾರ)

• ಮತದಾನದ ಸಮಯ : ಬೆಳಿಗ್ಗೆ 8.00 ರಿಂದ ಸಂಜೆ 4.00 ರವರೆಗೆ

• ಮತ ಎಣಿಕೆ ದಿನಾಂಕ : ಅಕ್ಟೋಬರ್ 27, 2026 (ಮಂಗಳವಾರ)

• ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನಾಂಕ : ಅಕ್ಟೋಬರ್ 31, 2026 (ಶನಿವಾರ)

ಮತಗಟ್ಟೆಗಳ ವಿವರ

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಒದಗಿಸಲಾಯಿತು. ಮತಗಟ್ಟೆಗಳ ವಿವರಗಳನ್ನು ಪರಿಶೀಲಿಸಿ, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗತ್ಯ ಸಹಕಾರ ನೀಡುವಂತೆ ಪ್ರತಿನಿಧಿಗಳಿಗೆ ತಿಳಿಸಲಾಯಿತು.

ನಮೂನೆ-19 ಅರ್ಜಿ ಸ್ವೀಕಾರಕ್ಕೆ ವಿಶೇಷ ಕೌಂಟರ್

ಅರ್ಹ ಶಿಕ್ಷಕರಿಂದ ನಮೂನೆ-19 ಅರ್ಜಿಗಳನ್ನು ಸ್ವೀಕರಿಸಲು ಅಪರ ಜಿಲ್ಲಾ ಚುನಾವಣಾಧಿಕಾರಿ(ಕೇಂದ್ರ) ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳ ಎಲ್ಲಾ ERO ಕಛೇರಿಗಳಲ್ಲಿ ಪ್ರತ್ಯೇಕ ಕೌಂಟರ್ಗಳನ್ನು ತೆರೆಯುವಂತೆ ಸೂಚಿಸಲಾಗಿದ್ದು. ಪ್ರತಿ ಕೌಂಟರ್ನಲ್ಲಿ ಜವಾಬ್ದಾರಿಯುತ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸಿ, ಅವರ ಹೆಸರು ಮತ್ತು ಹುದ್ದೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶಿಸುವಂತೆ ತಿಳಿಸಲಾಯಿತು ಹಾಗೂ ಅರ್ಜಿ ಸ್ವೀಕೃತಿ, ಸಂಬಂಧಪಟ್ಟ ದಾಖಲೆಗಳು ಹಾಗೂ ರಿಜಿಸ್ಟರ್ಗಳನ್ನು ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ನಿಗದಿತ ಕಾರ್ಯ ವಿಧಾನದಂತೆ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವಂತೆ ಜಿಬಿಎ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+