ಮುಂದಿನ ವರ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿ ಜನ್ಮ ದಿನಾಚರಣೆ: ಸಿಎಂ ಬೊಮ್ಮಾಯಿ
ಬೆಂಗಳೂರು ಸೆಪ್ಟೆಂಬರ್ 15: ಈ ಬಾರಿ ಭಾರತ ಸರ್ಕಾರವು ರಾಜ್ಯ ಸರ್ಕಾರಗಳೇ ಇಂಜಿನಿಯರ್ಸ್ ದಿವಸ ಆಚರಿಸಬೇಕೆಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ ಸರ್ಕಾರದ ವತಿಯಿಂದಲೇ ಎಲ್ಲ ಜಿಲ್ಲೆಗಳಲ್ಲಿ ಇಂಜಿನಿಯರ್ಸ್ ದಿವಸವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು (ಸೆಪ್ಟೆಂಬರ್ 15) ಇಂಜಿನಿಯರ್ಸ್ ದಿವಸ ಆಚರಣೆಯ ಪ್ರಯುಕ್ತ ಟ್ವೀಟ್ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,' ಸರ್ ಎಂ ವಿಶ್ವೇಶ್ವರಯ್ಯ ಎಂದರೇ ಸ್ಪೂರ್ತಿಯ ಸೆಲೆ. ತಾಯಿ ಜೀವಿತಾವಧಿಯ ಪ್ರತಿ ಕ್ಷಣವನ್ನು ಈ ನಾಡಿನ ನೆಲ, ಜಲದ ಅಭಿವೃದ್ಧಿಗೆ ಮೀಸಲಿರಿಸಿದ ಮಹಾನುಭಾವ. ವೈವಿಧ್ಯಮಯ ಜ್ಞಾನ ಹಾಗೂ ಬದ್ದತೆ ಇದ್ದಂತಹ ಮಹಾನ್ ದೇಶಭಕ್ತರಾಗಿದ್ದರು' ಎಂದಿದ್ದಾರೆ. ಇದರೊಂದಿಗೆ ಸರ್.ಎಂ.ವಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮುಂದಿನ ವರ್ಷ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು'' ಎಂದಿದ್ದಾರೆ. ಅವರು ಇಂದು ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಹಾಗೂ ಕರ್ನಾಟಕ ಇಂಜಿನಿಯರುಗಳ ಸಂಘದ ಸಹಭಾಗಿತ್ವದಲ್ಲಿ ಕೆ.ಆರ್.ವೃತ್ತದ ಬಳಿ ಆಯೋಜಿಸಿದ್ದ ಅಭಿಯಂತರರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನವನ್ನು ಇಂಜಿನಿಯರ್ಸ್ ದಿನ ವನ್ನಾಗಿ ಆಚರಿಸುತ್ತೇವೆ. ಈ ವರ್ಷ ಭಾರತ ಸರ್ಕಾರವೂ ಕೂಡ ಅಧ್ಯಯನ ಮಾಡಿ ಎಲ್ಲಾ ರಾಜ್ಯ ಗಳಲ್ಲಿ ಸರ್ಕಾರವೇ ಅಭಿಯಂತರರ ದಿನಾಚರಣೆ ಆಚರಿಸಲು ಸೂಚಿಸಿದೆ. ನಮ್ಮ ರಾಜ್ಯದಲ್ಲಿ ಈಗಾಗಲೇ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಸರ್.ಎಂ.ವಿಶ್ವೇಶ್ವರಯ್ಯ ಅವರು ಕನ್ನಡನಾಡಿನ ಅತ್ಯಂತ ಹೆಮ್ಮೆಯ ಪುತ್ರ. ಅವರು ಸದಾ ಕಾಲ ನಮಗೆ ಪ್ರೇರಣೆ. ಕನ್ನಡ ನಾಡು ಕಟ್ಟಿದ ಧೀಮಂತ ವ್ಯಕ್ತಿ ಎಂದರು.
ಸರ್. ಎಂ.ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿಯೇ ಸ್ಫೂರ್ತಿ ಇದೆ. 90 ವರ್ಷಕ್ಕಿಂತ ಹೆಚ್ಚು ಕಾಲ ಬಾಳಿ, ಬದುಕಿದ ಅವರ ಬದುಕಿನ ಪ್ರತಿ ಕ್ಷಣವೂ ನಾಡಿನ, ದೇಶನ ಅಭಿವೃದ್ಧಿ, ಜನರ ಒಳಿತಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಇಷ್ಟು ವೈವಿಧ್ಯಮಯ ಜ್ಞಾನ ಮತ್ತು ಬದ್ಧತೆ ಇರುವ ವ್ಯಕ್ತಿಗಳು ಬಹಳ ಕಡಿಮೆ. ನಿಜವಾದ ದೇಶಭಕ್ತರು, ನಾಡು ಕಟ್ಟಿದವರು ಅವರು. ಕೇವಲ ಅಣೆಕಟ್ಟುಗಳನ್ನು, ರಸ್ತೆಗಳನ್ನು ಮಾತ್ರ ನಿರ್ಮಾಣ ಮಾಡಲಿಲ್ಲ. ಇಂಧನ ಕ್ಷೇತ್ರದಲ್ಲಿಯೂ ಅವರ ಕೊಡುಗೆ ಅಪಾರ. ಬೃಹತ್ ಕಾರ್ಖಾನೆಗಳ ನಿರ್ಮಾಣವನ್ನು ಕೂಡ ಮಾಡಿದರು ಎಂದರು.
ಕರ್ನಾಟಕ ರಾಜ್ಯದ ಅಧೀನದಲ್ಲಿರುವ ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆ, ಸಿಮೆಂಟ್, ಕಾಗದ ಮುಂತಾದ ಕಾರ್ಖಾನೆಗಳನ್ನು ಮೈಸೂರು ಮಹಾರಾಜರ ಆಶ್ರಯದಲ್ಲಿ ಆರಂಭಿಸಿದರು. ಕೆ.ಆರ್.ಎಸ್ ಅಣೆಕಟ್ಟು ಕಟ್ಟಿ ನಮ್ಮ ಕಾವೇರಿ ಜಲಾನಯನ ಭಾಗದ ರೈತರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಬದ್ಧತೆಯನ್ನು ಸಹ ಮೆರೆದ ಅವರು ಹೆಣ್ಣುಮಕ್ಕಳಿಗೆ ವಿಶೇಷವಾಗಿ ಕಾಲೇಜುಗಳ ನಿರ್ಮಾಣ, ಮೀಸಲಾತಿ, ಆರ್ಥಿಕ ವಲಯದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪ್ರಾರಂಭಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಕ್ರಿಯಾಶೀಲತೆ ಮೆರೆದಿದ್ದಾರೆ ಎಂದರು.

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications