ಶಿರಾ, ಆರ್‌ಆರ್ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!
ಬೆಂಗಳೂರು, ಸೆ. 29: ಬಹುನಿರೀಕ್ಷಿತ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಹಾಗೂ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಾಸಕ ಬಿ. ಸತ್ಯನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರ ಹಾಗೂ ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆ ಇದೇ ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ.


Recommended Video
ಉಪಚುನಾವಣೆಯ ಟಿಕೆಟ್ ಅಂಗಡಿ ಕುಟಂಬಕ್ಕೆ ಕೊಡಿ! | Oneindia Kannada
ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.












Click it and Unblock the Notifications