ಸಿರ್ಸಿ ಸರ್ಕಲ್ ಫ್ಲೈ ಓವರ್ ಮೇಲೆ ವಾಹನ ಸಂಚಾರ ಬಂದ್
ಬೆಂಗಳೂರು, ಡಿಸೆಂಬರ್ 15: ಬೆಂಗಳೂರಿನ ಬಾಲಗಂಗಾಧರನಾಥ ಮಹಾಸ್ವಾಮೀಜಿ ಮೇಲ್ಸೆತುವೆ ಮೇಲೆ ವಾಹನ ಸಂಚಾರ ಬಂದ್ ಆಗಲಿದೆ. ಬಿಬಿಎಂಪಿ ಫ್ಲೈ ಓವರ್ ಮೇಲೆ ಡಾಂಬರೀಕರಣ ಕಾಮಗಾರಿಯನ್ನು ಕೈಗೊಳ್ಳಲಿದೆ.
ಸಿರ್ಸಿ ಫ್ಲೈ ವರ್ ಮೇಲೆ ಮೈಸೂರು ರಸ್ತೆಯಿಂದ-ಪುರಭವನ ಕಡೆಗೆ ಹೋಗುವ ಮಾರ್ಗದಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತದೆ. ಆದ್ದರಿಂದ, ವಾಹನ ಸಂಚಾರವನ್ನು ಬಂದ್ ಮಾಡಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
ಕಾಮಗಾರಿ ಹಿನ್ನಲೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗುತ್ತದೆ. ಆದ್ದರಿಂದ, ವಾಹನಗಳಿಗೆ ಪರ್ಯಾಯ ಮಾರ್ಗವನ್ನು ಗುರುತಿಸಲಾಗಿದೆ. ಪೊಲೀಸ್ ಇಲಾಖೆಯು ಸಹ ಕಾಮಗಾರಿಯನ್ನು ಕೈಗೊಳ್ಳುವುದಕ್ಕೆ ಅನುಮತಿ ನೀಡಿದೆ.

ಸಿರ್ಸಿ ಸರ್ಕಲ್ ಫ್ಲೈ ಓವರ್ 2.65 ಕಿ. ಮೀ. ಉದ್ದವಿದೆ. ಟೌನ್‌ಹಾಲ್ ಕಡೆಯಿಂದ ಮೈಸೂರು ರಸ್ತೆ ಕಡೆ ಹೋಗುವ ಒಂದು ಮಾರ್ಗವನ್ನು ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಈಗ ಮತ್ತೊಂದು ಭಾಗದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ.
ಡಾಂಬರೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಲು 30 ದಿನದ ಗಡುವು ನೀಡಲಾಗಿದೆ. ಈ ಸಂದರ್ಭದಲ್ಲಿ ಒಂದು ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ. ಆದ್ದರಿಂದ, ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.












Click it and Unblock the Notifications