ಸಿರ್ಸಿ ಸರ್ಕಲ್ ಮೇಲ್ಸೇತುವೆಯ ಒಂದು ಪಾರ್ಶ್ವದ ಕೆಲಸ 3 ದಿನಗಳಲ್ಲಿ ಅಂತ್ಯ
ಬೆಂಗಳೂರು, ಜನವರಿ 26: ಇನ್ನು ಮೂರು ದಿನಗಳಲ್ಲಿ ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಮೇಲ್ಸೇತುವೆಯ ಒಂದು ಪಾರ್ಶ್ವದ ಕಾಮಗಾರಿ ಅಂತ್ಯಗೊಳ್ಳಲಿದೆ.
ಮುಂದಿನ ವಾರದಿಂದ ಸಂಚಾರಕ್ಕೆ ಮುಕ್ತಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ. ನಗರದ ಟೌನ್‌ಹಾಲ್ ಕಡೆಯಿಂದ ಮೈಸೂರು ರಸ್ತೆಯತ್ತ ಸಾಗುವ ಮಾರ್ಗದಲ್ಲಿ ರಾಯನ್ ವೃತ್ತದವರೆಗೆ ಡಾಂಬರು ಶೀಟು ಹಾಕುವ ಕಾಮಗಾರಿ ಪೂರ್ಣಗೊಂಡಿದೆ.
ಇಂದಿನಿಂದ ಡಾಂಬರು ಹಾಕುವ ಕೆಲಸ ಆರಂಭವಾಗಿದೆ. ಒಂದೆರೆಡು ದಿನಗಳ ಬಳಿಕ ಟೌನ್‌ಹಾಲ್‌ನಿಂದ ರಾಯನ್ ವೃತ್ತದ ಕಡೆಗೆ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಅಂದರೆ ಬಿಬಿಎಂಪಿ ಅಧಿಕಾರಿಗಳು ಜನವರಿ 29ರ ವೇಳೆಗೆ ವಾಹನ ಸಂಚಾರಕ್ಕೆ ಸಿದ್ಧಗೊಳ್ಳಲಿದೆ.

ಸುಮಾರು 2.65 ಕಿ.ಮೀ ಉದ್ದವಿರುವ ಮೇಲ್ಸೇತುವೆಯ ದುರಸ್ತಿಗೆ 4.30 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ನಾಗೇಶ್ ಮಾಯಣ್ಣ ಸಾಯಿ ತ್ರಿಷಾ ಇನ್‌ಫ್ರಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದೆ.
ಪುರಭವನದಿಂದ ಮೈಸೂರು ರಸ್ತೆ ಮತ್ತು ಚಾಮರಾಜಪೇಟೆಯ ಕಡೆಗೆ ಸಾಗುವವರು ಪರ್ಯಾಯ ರಸ್ತೆಗಳಲ್ಲಿ ತೆರಳಬೇಕಾಗುತ್ತದೆ. ಒಂದು ಪದರ ಡಾಂಬರು ಕಿತ್ತು ಹಾಕಿ, 3 ಎಂಎಂ ದಪ್ಪದ ಡಾಂಬರು ಶೀಟ್ ಹೊದಿಸಲಾಗುತ್ತದೆ.












Click it and Unblock the Notifications