ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿರ್ಸಿ ಸರ್ಕಲ್ ಮೇಲ್ಸೇತುವೆಯ ಒಂದು ಪಾರ್ಶ್ವದ ಕೆಲಸ 3 ದಿನಗಳಲ್ಲಿ ಅಂತ್ಯ

|
Google Oneindia Kannada News

ಬೆಂಗಳೂರು, ಜನವರಿ 26: ಇನ್ನು ಮೂರು ದಿನಗಳಲ್ಲಿ ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಮೇಲ್ಸೇತುವೆಯ ಒಂದು ಪಾರ್ಶ್ವದ ಕಾಮಗಾರಿ ಅಂತ್ಯಗೊಳ್ಳಲಿದೆ.

ಮುಂದಿನ ವಾರದಿಂದ ಸಂಚಾರಕ್ಕೆ ಮುಕ್ತಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ. ನಗರದ ಟೌನ್‌ಹಾಲ್ ಕಡೆಯಿಂದ ಮೈಸೂರು ರಸ್ತೆಯತ್ತ ಸಾಗುವ ಮಾರ್ಗದಲ್ಲಿ ರಾಯನ್ ವೃತ್ತದವರೆಗೆ ಡಾಂಬರು ಶೀಟು ಹಾಕುವ ಕಾಮಗಾರಿ ಪೂರ್ಣಗೊಂಡಿದೆ.

ಚಾಲುಕ್ಯ ವೃತ್ತದ ವಿವಾದಿತ ಉಕ್ಕಿನ ಸೇತುವೆ ಯೋಜನೆಗೆ ಮರುಜೀವ ಚಾಲುಕ್ಯ ವೃತ್ತದ ವಿವಾದಿತ ಉಕ್ಕಿನ ಸೇತುವೆ ಯೋಜನೆಗೆ ಮರುಜೀವ

ಇಂದಿನಿಂದ ಡಾಂಬರು ಹಾಕುವ ಕೆಲಸ ಆರಂಭವಾಗಿದೆ. ಒಂದೆರೆಡು ದಿನಗಳ ಬಳಿಕ ಟೌನ್‌ಹಾಲ್‌ನಿಂದ ರಾಯನ್‌ ವೃತ್ತದ ಕಡೆಗೆ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಅಂದರೆ ಬಿಬಿಎಂಪಿ ಅಧಿಕಾರಿಗಳು ಜನವರಿ 29ರ ವೇಳೆಗೆ ವಾಹನ ಸಂಚಾರಕ್ಕೆ ಸಿದ್ಧಗೊಳ್ಳಲಿದೆ.

Sirsi circle flyover one lane work will be over within two days

ಸುಮಾರು 2.65 ಕಿ.ಮೀ ಉದ್ದವಿರುವ ಮೇಲ್ಸೇತುವೆಯ ದುರಸ್ತಿಗೆ 4.30 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ನಾಗೇಶ್ ಮಾಯಣ್ಣ ಸಾಯಿ ತ್ರಿಷಾ ಇನ್‌ಫ್ರಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದೆ.

ಜಯದೇವ ಬಳಿ ಮೆಟ್ರೋ ಕಾಮಗಾರಿ ಆರಂಭ: ವಾಹನಗಳಿಗೆ ಬದಲಿ ಮಾರ್ಗ ಜಯದೇವ ಬಳಿ ಮೆಟ್ರೋ ಕಾಮಗಾರಿ ಆರಂಭ: ವಾಹನಗಳಿಗೆ ಬದಲಿ ಮಾರ್ಗ

ಪುರಭವನದಿಂದ ಮೈಸೂರು ರಸ್ತೆ ಮತ್ತು ಚಾಮರಾಜಪೇಟೆಯ ಕಡೆಗೆ ಸಾಗುವವರು ಪರ್ಯಾಯ ರಸ್ತೆಗಳಲ್ಲಿ ತೆರಳಬೇಕಾಗುತ್ತದೆ. ಒಂದು ಪದರ ಡಾಂಬರು ಕಿತ್ತು ಹಾಕಿ, 3 ಎಂಎಂ ದಪ್ಪದ ಡಾಂಬರು ಶೀಟ್ ಹೊದಿಸಲಾಗುತ್ತದೆ.

English summary
BBMP officers clarified that market flyover oneside work will be over within two or three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X