ಸಿರ್ಸಿ ಸರ್ಕಲ್ ಮೇಲ್ಸೇತುವೆ ಒಂದು ಭಾಗ ಸಂಚಾರಕ್ಕೆ ಮುಕ್ತ

ಬೆಂಗಳೂರು, ಫೆಬ್ರವರಿ 8: ಸಿರ್ಸಿ ವೃತ್ತದ ಮೇಲ್ಸೇತುವೆಯ ಒಂದು ಭಾಗ ಇಂದಿನಿಂದ ಸಂಚಾರಕ್ಕೆ ಮುಕ್ತವಾಗುತ್ತಿದೆ. ಮೈಸೂರು ರಸ್ತೆಯ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆಯ ಒಂದು ಪಾರ್ಶ್ವದಲ್ಲಿ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರ ಸಂಜೆಯಿಂದ ವಾಹನ ಸಂಚಾರ ಮುಕ್ತಗೊಳಿಸಲಾಗುತ್ತಿದೆ. ಇದರಿಂದ ಟೌನ್‌ಹಾಲ್‌ನಿಂದ ಮೈಸೂರು ರಸ್ತೆಯತ್ತ ಸಾಗುವ ವಾಹನ ಸವಾರರು ನಿರಾಳವಾಗುವಂತಾಗಿದೆ.

ಸುಮಾರು 2.65 ಕಿ.ಮೀ ಉದ್ದವಿರುವ ಸಿರ್ಸಿ ಮೇಲ್ಸೇತುವೆಯ ದುರಸ್ತಿ ಕಾಮಗಾರಿಯು ಜ.3ರಿಂದ ಆರಂಭವಾಗಿತ್ತು. ಟೌನ್‌ಹಾಲ್‌ನಿಂದ ರಾಯನ್ ವೃತ್ತ ಕಾಮಗಾರಿ ಪೂರ್ಣಗೊಳಿಸಿ, ಜನವರಿ 28ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಅಲ್ಲಿಂದಾಚೆಗೆ ಕಾಮಗಾರಿ ಪ್ರಗತಿಯಲ್ಲಿದ್ದುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

Sirsi Circle flyover one side opens today: BBMP

ಕಾಮಗಾರಿಯನ್ನು ಹಂತಹಂತವಾಗಿ ಮಾಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ, ಮೆಜೆಸ್ಟಿಕ್ ಕಡೆಗೆ ಸಾಗುವ ಡಭನ್ ರಾಂಪ್ ಅಥವಾ ಕೆಆರ್ ಮಾರುಕಟ್ಟೆ ಕಡೆಗೆ ಹೋಗುವ ಡೌನ್ ರಾಂಪ್ ನಿಂದ ಟೌನ್‌ಹಾಲ್‌ ವರೆಗಿನ ಮೇಲ್ಸೇತುವೆ ಮಾರ್ಗದಲ್ಲಿ ಮೊದಲು ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.

ಕಾಮಗಾರಿ ಪೂರ್ಣ ರಾಯನ್ ವೃತ್ತದ ಕಡೆಗೆ ಹೋಗುವ ಡೌನ್ ರಾಂಪ್ ನಿಂದ ಮೈಸೂರು ರಸ್ತೆವರೆಗಿನ ಮಾರ್ಗದ ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಇಂದು ಸಂಜೆಯಿಂದ ಒಂದು ಭಾಗ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ನಂತರ ಮೈಸೂರು ರಸ್ತೆಯಿಂದ ಟೌನ್‌ಹಾಲ್ ಕಡೆಗೆ ಬರುವ ಮಾರ್ಗದ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+