ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚರ್ಚ್ ಸ್ಟ್ರೀಟ್ ಸ್ಫೋಟ : ಆರೋಪಿಗಳ ಮಾಹಿತಿ ಪತ್ತೆ

By Kiran B Hegde
|
Google Oneindia Kannada News

ಬೆಂಗಳೂರು, ಫೆ. 16: ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ನಡೆದಿದ್ದ ಸ್ಫೋಟ ಪ್ರಕರಣ ಆರೋಪಿಗಳ ಕುರಿತು ಖಚಿತ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತರು, ಚರ್ಚ್ ಸ್ಟ್ರೀಟ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಪ್ರಮುಖವಾಗಿ ಎರಡು ಸಂಘಟನೆಗಳ ಮೇಲೆ ಬಲವಾದ ಶಂಕೆಯಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಸದಸ್ಯರು ಕರ್ನಾಟಕ ಹಾಗೂ ಹೊರ ರಾಜ್ಯದಲ್ಲಿ ತನಿಖೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. [ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟ]

street

ಪ್ರಕರಣವೇನು? : ನಗರದ ಚರ್ಚ್ ಸ್ಟ್ರೀಟ್‌ನಲ್ಲಿರುವ ಕೋಕೋನಟ್ ಗ್ರೋವ್ ಎಂಬ ಹೋಟೆಲಿನ ಬಳಿ 2014ರ ಡಿಸೆಂಬರ್ 28ರಂದು ಸಂಜೆ 8.30ಕ್ಕೆ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಭವಾನಿ (33) ಎಂಬ ಮಹಿಳೆ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದರು. [ಶಂಕಿತರ ರೇಖಾಚಿತ್ರ ಸಿದ್ಧ]

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲರಾಗಿದ್ದರು. [ಸ್ಫೋಟಕ್ಕೆ ತಿಂಗಳಾದರೂ ಆರೋಪಿ ಸಿಕ್ಕಿಲ್ಲ]

ಈ ಮಧ್ಯೆ ಇಂಡಿಯನ್ ಮುಜಾಹಿದೀನ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಭಟ್ಕಳ ಮೂಲದ ಕೆಲವರನ್ನು ಬಂಧಿಸಲಾಗಿತ್ತು.

English summary
Bengaluru police commissioner M.N. Reddy has told that "special investigation team has got information of the people behind the Church Street blast".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X