Prajwal Revanna Case: 24 ಗಂಟೆಯೊಳಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್: ಅಪ್ಪ-ಮಗನಿಗೆ ಭಾರೀ ಸಂಕಷ್ಟ
ಬೆಂಗಳೂರು, ಏಪ್ರಿಲ್ 30: ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ತಂದೆ ಎಚ್‌ಡಿ ರೇವಣ್ಣ ಅವರಿಗೆ ಎಸ್‌ಐಟಿ ಭಾರೀ ಆಘಾತ ನೀಡಿದೆ. ಮಂಗಳವಾರ ನೋಟಿಸ್ ಜಾರಿ ಹಾಜರಾಗುವಂತೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಪೆನ್‌ಡ್ರೈವ್ ಪ್ರಕರಣವನ್ನು ವಿಶೇಷ ತನಿಖಾ ತಂಡ (SIT)ಕ್ಕೆ ನೀಡುತ್ತಿದ್ದ ತನಿಖೆ ಆರಂಭಿಸಿರುವ ಅಧಿಕಾರಿಗಳು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮತ್ತವರ ತಂದೆ ಎಚ್‌ಡಿ ರೇವಣ್ಣ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ 24 ಗಂಟೆಯೊಳಗೆ ಖುದ್ದು ಅಪ್ಪಾ-ಮಗಾ ಖುದ್ದು ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಂತ್ರಸ್ತೆಯರ ವಿಚಾರಣೆ ಬಳಿಕ ನೋಟಿಸ್ ಜಾರಿ
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಹೆಣ್ಣು ಮುಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಲೈಂಗಿಕ ಆರೋಪ ಎದುರಿಸುತ್ತಿದ್ದಾರೆ. ಅಶ್ಲೀಲ ವಿಡಿಯೋಗಳು ಇರುವ ಪೆನ್‌ಡ್ರೈವ್ ಹೊರ ಬರುತ್ತಿದ್ದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT)ಕ್ಕೆ ಪ್ರಕರಣದ ತನಿಖೆ ಹಸ್ತಾಂತರಿಸಿದೆ.
ಪ್ರಕರಣ ಕೈಗೆತ್ತಿಕೊಂಡ ಎಸ್‌ಐಟಿ ಅಧಿಕಾರಿಗಳು ಹಾಸನ ಜಿಲ್ಲೆಯಲ್ಲಿ ಮಹಿಳಾ ಪೊಲೀಸರು ಸೇರಿದಂತೆ ಸುಮಾರು ಐದು ಮಂದಿ ಸಂತ್ರಸ್ತರನ್ನು ಸೋಮವಾರ ವಿಚಾರಣೆ ಮಾಡಿದ್ದಾರೆ. ಕೂಲಂಕುಷವಾಗಿ ಪ್ರಕರಣ ಪರಿಶೀಲಿಸಿದ್ದಾರೆ. ಇದೀಗ ಮಂಗಳವಾರ ಪ್ರಜ್ವಲ್ ರೇವಣ್ಣ ಮತ್ತು ಎಚ್‌ಡಿ ರೇವಣ್ಣ ಅವರಿಗೆ ಖುದ್ದು ಹಾಜರಾಗುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಸರ್ಕಾರವೇ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸುತ್ತಿದ್ದಂತೆ ರಾಜ್ಯದಿಂದ ಕಾಲ್ಕಿತ್ತ ಆರೋಪಿತ ಪ್ರಜ್ವಲ್ ರೇವಣ್ಣ ಜರ್ಮನಿ ಸೇರಿದ್ದಾರೆ. ಅಲ್ಲಿಯೇ ತಂಗಿದ್ದಾರೆ. ಇತ್ತ ಪ್ರಜ್ವಲ್ ರೇವಣ್ಣ ತಂದೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ನಾಲ್ಕೈದು ವರ್ಷದ ಹಳೆ ಪ್ರಕರಣವನ್ನು ಈಗ ರಾಜಕೀಯ ದುರುದ್ದೇಶದಿಂದ ಹೊರ ತರಲಾಗಿದೆ. ಇದು ಷಡ್ಯಂತ್ರ ಎಂದೆಲ್ಲ ಹೇಳಿಕೊಂಡಿದ್ದಾರೆ.
ಪೆನ್‌ಡ್ರೈವ್ ವಿಚಾರ ಹೊರ ಬರುತ್ತಿದ್ದಂತೆ ಅರಸಿಕೆರೆ, ಹಾಸನ ಸೇರಿದಂತೆ ಹಲವು ಕಡೆಗಳಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು, ಪ್ರಜ್ವಲ್ ರೇವಣ್ಣ ಹಾಗೂ ಎಚ್‌ಡಿ ರೇವಣ್ಣ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾರೆ.

ರಾಜ್ಯಾದ್ಯಂತ ಆಕ್ರೋಶ, ಕಾಂಗ್ರೆಸ್‌ನಿಂದ ಪ್ರತಿಭಟನೆ
ಪ್ರಕರಣವು ಸದ್ಯ ರಾಜ್ಯವ್ಯಾಪಿ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಜಿಡಿಎಸ್-ಬಿಜೆಪಿ ಮೈತ್ರಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ. ಪ್ರಕರಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದೆ.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರ ಸುಮ್ಮನಿರುವುದೇಕೆ ಎಂದು ಎಎಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಪ್ರಶ್ನಿಸಿತ್ತುದ್ದಾರೆ. ಇತ್ತ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಸಹ ಮೊಮ್ಮಗನ ಪೆನ್‌ಡ್ರೈವ್ ಪ್ರಕರಣ ಕುರಿತು ಹಾಸನ ಜನರಿಗೆ ಹಾಗೂ ರಾಜ್ಯದ ಜನರಿಗೆ ಪ್ರತಿಕ್ರಿಯಿಸಬೇಕು ಎಂಬ ಆಗ್ರಹ ಎಲ್ಲೆಡೆ ಹೆಚ್ಚಾಗಿದೆ.












Click it and Unblock the Notifications