ಐಎಂಎ ಹಗರಣ: ಜಮೀರ್ ಅಹ್ಮದ್, ರೋಷನ್ ಬೇಗ್‌ಗೆ ಎಸ್‌ಐಟಿ ನೋಟಿಸ್

ಬೆಂಗಳೂರು, ಜುಲೈ 25: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ರೋಷನ್ ಬೇಗ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಇದೇ ತಿಂಗಳ 29ರಂದು ವಿಚಾರಣೆಗೆ ಹಾಜರಾಗುವಂತೆ ಇಬ್ಬರೂ ಶಾಸಕರಿಗೆ ಎಸ್‌ಐಟಿ ನೋಟಿಸ್‌ನಲ್ಲಿ ಸೂಚಿಸಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ಬಂಧಿತನಾಗಿರುವ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದೆ. ಆತನನ್ನು ಸತತ ವಿಚಾರಣೆಗೆ ಒಳಪಡಿಸುತ್ತಿದ್ದು, ಆತ ಅನೇಕ ಮಹತ್ವದ ಸಂಗತಿಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

SIT issued notice to mlas zameer ahmed and roshan baig on ima scam

ಮನ್ಸೂರ್ ಖಾನ್ ಜತೆ ರೋಷನ್ ಬೇಗ್ ಮತ್ತು ಜಮೀರ್ ಅಹ್ಮದ್ ಇಬ್ಬರೂ ವ್ಯವಹಾರ ನಡೆಸಿದ್ದಾರೆ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಈ ಪ್ರಕರಣದಲ್ಲಿ ಅವರ ಪಾತ್ರವೇನಾದರೂ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಬೇಕಿದೆ.

ಐಎಂಎ ಹಗರಣ: ಪ್ರಭಾವಿಗಳ ಹೆಸರು ಹೊರ ಹಾಕಿದ ಮನ್ಸೂರ್ ಖಾನ್

ಐಎಂಎ ಕಂಪೆನಿಯ ಲೆಕ್ಕಪರಿಶೋಧಕ ಇಕ್ಬಾಲ್ ಖಾನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಕಂಪೆನಿಗಳ ರಿಜಿಸ್ಟ್ರಾರ್‌ಗೆ ತಪ್ಪು ಮಾಹಿತಿ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+