HD Kumaraswamy: ದಳಪತಿಗಳ ಬೆನ್ನಟ್ಟಿದ ಶನಿ: ಹೆಚ್‌ಡಿ ಕುಮಾರಸ್ವಾಮಿಗೂ ಶುರುವಾಯ್ತು ಸಂಕಷ್ಟ!
ಬೆಂಗಳೂರು ಆಗಸ್ಟ್ 20: ಮುಡಾ ಹಗರಣ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೆ ಆಡಳಿತ ಪಕ್ಷಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ.
ಕಳೆದ ಕೆಲ ತಿಂಗಳುಗಳಿಂದ ದಳಪತಿಗಳ ಬೆನ್ನೇರಿ ಕುಳಿತ ಶನಿ ಈಗ ಹೆಚ್‌ಡಿ ಕುಮಾರಸ್ವಾಮಿ ಹೆಗಲು ಹೇರುವ ಲಕ್ಷಣಗಳು ಕಾಣಿಸುತ್ತಿವೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆಗೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳಿಗೆ ಪಾಠ ಕಲಿಸಲು ಕೈ ನಾಯಕರು ಮುಂದಾಗಿದ್ದಾರೆ. ಹೀಗಾಗಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಇದ್ದ ಆರೋಪಗಳನ್ನು ಬಹಿರಂಗ ತರಲು ಒತ್ತಾಯ ಹೇರಿವೆ.

ಈ ನಡುವೆ ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪದಡಿ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್‌ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಇದು ಕುಮಾರಸ್ವಾಮಿ ಅವರನ್ನು ಸಂಕಷ್ಟ ಸಿಲುಕಿಸುವ ಸಾಧ್ಯತೆ ಇದೆ.
ಹೌದು... ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಕ್ರಮ ಎಸಗಿದ್ದಾರೆ. ಅವರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಕೇಸಿನಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದು ಕುತೂಹಲಕರ. ಮೂಲತ: ಆ ಕಂಪನಿಗೆ ಗಣಿಗಾರಿಕೆಗಯ ಜೊತೆಗೆ ಸಂಬಂಧವೇ ಇರಲಿಲ್ಲ ಎಂಬುದನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ ನಂತರ ಅಕ್ರಮದ ಮತ್ತೊಂದು ಆಯಾಮ ಬೆಳಕಿಗೆ ಬಂದಿದೆ.
2007ರಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್‌ಎಸ್‌ವಿಎಂ ಕಂಪನಿಗೆ 550 ಎಕರೆ ವಿಸ್ತೀರ್ಣ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್.ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಎಸ್‌ಐಟಿ 2023 ನವೆಂಬರ್ 21ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಖನಿಜ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು.
ರಾಜ್ಯಪಾಲರು ಜುಲೈ 29ರಂದು ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ಎಸ್‌ಐಟಿಗೆ ಪತ್ರ ಬರೆದರು. ಕೋರಿದ್ದ ಸ್ಪಷ್ಟನೆಗಳಿಗೆ ಉತ್ತರಗಳೊಂದಿಗೆ ಎಸ್‌ಐಟಿ ಸೋಮವಾರ ಸಂಜೆ ರಾಜ್ಯಪಾಲರಿಗೆ ಪತ್ರ ಬರೆಯಿತು. ಹಾಗೇ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ.
ಹಾಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಖಾಸಗಿ ವ್ಯಕ್ತಿಯೊಬ್ಬ ಕೊಟ್ಟಿರುವ ಆಧಾರ ರಹಿತ ದೂರಿನ ಆಧಾರದಲ್ಲಿ ನೋಟೀಸ್ ಜಾರಿ ಮಾಡಿದ್ದಾರೆ. ಆದರೆ ಕುಮಾರಸ್ವಾಮಿಯವರ ಬಗ್ಗೆ ಇಷ್ಟೆಲ್ಲಾ ತನಿಖೆ ನಡೆದು, ಸಾಕ್ಷುಟ ದಾಖಲೆಗಳಿದ್ದಾಗ್ಯೂ ಕಳೆದ ಹತ್ತು ತಿಂಗಳಿಂದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿಲ್ಲಾ ಯಾಕೆ ಎಂದು ಕೈ ನಾಯಕರು ಪ್ರಶ್ನೆ ಮಾಡಿದ್ದಾರೆ.












Click it and Unblock the Notifications