ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ತಂಡ

|
Google Oneindia Kannada News

ಬೆಂಗಳೂರು, ಮಾರ್ಚ್.10: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವುದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Recommended Video

CBI / SIT ಇನ್ನು ಗೊಂದಲದಲ್ಲೇ ಇದೆ ರಾಜ್ಯ ಸರ್ಕಾರ! | Basavaraj Bommai | Oneindia Kannada

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಹೆಚ್ಚುವರಿ ಪೊಲೀಸ್ ಆಯುಕ್ತ ಸುಮೇಂದ್ರ ಮುಖರ್ಜಿ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ರಚನೆ ಮಾಡಲಾಗಿದೆ. ಸಂಪೂರ್ಣ ತನಿಖೆ ನಂತರ ಸತ್ಯಾಂಶ ಹೊರ ಬರಲಿದೆ ಎಂದು ತಿಳಿಸಿದ್ದಾರೆ.

ಜಾರಕಿಹೊಳಿ ವಿರುದ್ಧದ ಕೇಸ್ ವಾಪಸ್ ಪಡೆದ ನಂತರ ಕಲ್ಲಹಳ್ಳಿ ಮೊದಲ ಪ್ರತಿಕ್ರಿಯೆಜಾರಕಿಹೊಳಿ ವಿರುದ್ಧದ ಕೇಸ್ ವಾಪಸ್ ಪಡೆದ ನಂತರ ಕಲ್ಲಹಳ್ಳಿ ಮೊದಲ ಪ್ರತಿಕ್ರಿಯೆ

"ಸಿಡಿ ಪ್ರಕರಣದ ಹಿಂದೆ ಅವರ ತೇಜೋವಧೆ ಮಾಡುವ ಕೆಲಸವಾಗಿದೆ. ಅವರಿಗೆ ಧಕ್ಕೆ ತರುವಂತಾ ಮತ್ತು ಮಾನಹಾನಿ ಮಾಡುವಂತಾ ಕೆಲಸವಾಗಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ" ಎಂದು ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

SIT to probe Ramesh Jarkiholi CD Case: Basavaraja Bommai


ಎಸ್ಐಟಿ ರಚನೆ ಬಗ್ಗೆ ಸಚಿವರ ಸಪ್ಟನೆ:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪತ್ರದ ಆಧಾರದ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಜೊತೆಗೂ ಸಹ ಚರ್ಚೆ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಿಡಿ ಪ್ರಕರಣದ ಹಿಂದೆ ಯಾರಿದ್ದಾರೆ. ಯಾರು ಷಡ್ಯಂತ್ರ ಮಾಡಿದ್ದಾರೆ. ಎಲ್ಲೆಲ್ಲಿ ಆ ಸಿಡಿಯನ್ನು ತಯಾರು ಮಾಡುವಂತಾ ಕೆಲಸ ಮಾಡಿದ್ದಾರೆ. ಈ ಎಲ್ಲ ವಿಚಾರಗಳಲ್ಲಿ ಒಂದು ಸಂಪೂರ್ಣವಾಗಿ ವಿಚಾರಣೆ ಮಾಡಬೇಕೆಂದು ಒಂದು ಎಸ್ಐಟಿ ತಂಡವನ್ನು ರಚಿಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಸೂಚನೆ ನೀಡಿದ್ದೇನೆ" ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

English summary
Ramesh Jarkiholi CD Case: SIT Will Be Formed By Karnataka Govt, Says Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X