• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಂದಿಜ್ವರಕ್ಕೆ ರಾಜ್ಯದಲ್ಲಿ 6 ಮಂದಿ ಬಲಿ: ಪರಮೇಶ್ವರ್ ಆತಂಕ

|
Google Oneindia Kannada News
   ಹಂದಿಜ್ವರಕ್ಕೆ ರಾಜ್ಯದಲ್ಲಿ 6 ಮಂದಿ ಬಲಿ | Oneindia Kannada

   ಬೆಂಗಳೂರು, ಅಕ್ಟೋಬರ್ 15: ರಾಜ್ಯದಲ್ಲಿ ಹಂದಿ ಜ್ವರ ಮಹಾಮಾರಿಯಾಗಿ ಮತ್ತೆ ಹಬ್ಬುತ್ತಿದ್ದು, 2018ರಲ್ಲಿ ಇಲ್ಲಿಯವರೆಗೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದ್ದಾರೆ.

   ಕರ್ನಾಟಕದಲ್ಲಿ ಈ ಬಾರಿ ಡೆಂಗ್ಯೂ ಹಾವಳಿ ನಿಯಂತ್ರಣದಲ್ಲಿ! ಕರ್ನಾಟಕದಲ್ಲಿ ಈ ಬಾರಿ ಡೆಂಗ್ಯೂ ಹಾವಳಿ ನಿಯಂತ್ರಣದಲ್ಲಿ!

   ಹಂದಿ ಜ್ವರದ ಹಿಂದಿನ ಪ್ರಭಾವವನ್ನು ಗಮನಿಸಿದರೆ 2015ರಲ್ಲಿ 94 ಮಂದಿ ಮೃತಪಟ್ಟಿದ್ದರು. 2017ರಲ್ಲಿ 3ಸಾವಿರ ಪ್ರಕರಣಗಳು ಪತ್ತೆಯಾಗಿದ್ದು 15 ಮಂದಿ ಮೃತಪಟ್ಟಿದ್ದರು. ಎಲ್ಲಾ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ಯಾರೂ ಗಾಬರಿ ಪಡುವ ಅಗತ್ಯವಿಲ್ಲ ಎಂದರು.

   ಬೆಂಗಳೂರಲ್ಲಿ 10 ದಿನಗಳಲ್ಲಿ 23 ಎಚ್‌1ಎನ್‌1 ಪ್ರಕರಣ ಪತ್ತೆ ಬೆಂಗಳೂರಲ್ಲಿ 10 ದಿನಗಳಲ್ಲಿ 23 ಎಚ್‌1ಎನ್‌1 ಪ್ರಕರಣ ಪತ್ತೆ

   ಉತ್ತರ ಕರ್ನಾಟಕ ಭಾಗದಲ್ಲಿ ಎಚ್‌1ಎನ್‌1 ಪತ್ತೆಗೆ ಪ್ರಯೋಗಾಲಯ ಸ್ಥಾಪಿಸುತ್ತೇವೆ,ಉತ್ತರ ಕರ್ನಾಟಕ ಭಾಗದಲ್ಲಿ ಹಂದಿ ಜ್ವರ ಪತ್ತೆಗೆ ಯಾವುದೇ ಪ್ರಯೋಗಾಲಯ ಇಲ್ಲ, ಹೀಗಾಗಿ ಈ ಭಾಗದಲ್ಲಿ ಸೋಂಕಿಗೆ ತುತ್ತಾದವರಿಗೆ ಸೂಕ್ತ ಸಮಯಕ್ಕೆ ವೈದ್ಯಕೀಯ ಸೇವೆ ಒದಗಿಸಲಾಗುತ್ತಿಲ್ಲ ಎಂಬ ದೂರು ಇದೆ. ಆದ್ದರಿಂದ ಪ್ರಯೋಗಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

   ಬೆಂಗಳೂರಲ್ಲಿ ಎಚ್‌1ಎನ್‌1 46 ಪ್ರಕರಣ ಪತ್ತೆ: ರಾಜ್ಯಾದ್ಯಂತ ಹೈ ಅಲರ್ಟ್ ಬೆಂಗಳೂರಲ್ಲಿ ಎಚ್‌1ಎನ್‌1 46 ಪ್ರಕರಣ ಪತ್ತೆ: ರಾಜ್ಯಾದ್ಯಂತ ಹೈ ಅಲರ್ಟ್

   ಜನವರಿ 2018ರಿಂದ ಇಲ್ಲಿಯವರೆಗೆ 4902 ಜನರನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 456 ಪ್ರಕರಣಗಳಲ್ಲಿ ಮಾತ್ರ ಹಂದಿ ಜ್ವರ ಪತ್ತೆಯಾಗಿದೆ. ಈ ಪೈಕಿ ಆರು ಮಂದಿ ಮೃತಪಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ, ಅರಸೀಕೆರೆ, ತುಮಕೂರು, ಕಲಬುರಗಿಯಲ್ಲಿ ತಲಾ ಒಂದು ಸಾವು ದಾಖಲಾಗಿದೆ.

   English summary
   Deputy chief minister Dr.G. Parameshwara has revealed that six persons have died in Karnataka due to H1N1 fever in the last 10 months.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X