ಜಲ್ಲಿ ತುಂಬಿದ ಟಿಪ್ಪರ್ ಲಾರಿ ಮುಗುಚಿ ಬಿದ್ದು ಆರು ಮಂದಿ ಸಾವು: ಎರಡು ಕಾರು ಜಖಂ

ಬೆಂಗಳೂರು, ಜ. 10: ನಗರದ ಕುಂಬಳಗೋಡು ಸಮೀಪ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಮಗುಚಿ ಕಾರಿನ ಮೇಲೆ ಬಿದ್ದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು ಮೈಸೂರು ರಸ್ತೆಯ ಕುಂಬಳಗೋಡು ಸಮೀಪದ ಕಣಿಮಿಣಿಕೆ ಬಳಿ ಈ ಅವಘಡ ಸಂಭವಿಸಿದೆ. ಇದರಿಂದ ಎರಡು ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದು, ಬೈಕ್ ಸವಾರ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ವಿಫ್ಟ್ ಕಾರಿನಲ್ಲಿದ್ದ ನಿಖಿತಾ ರಾಣಿ (29), ವೀಣಮ್ಮ ( 42), ಇಂದ್ರಕುಮಾರ್ (14), ಕೀರ್ತಿ ಕುಮಾರ್ (40) ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಟೊಯೊಟಾ ಸಿಬ್ಬಂದಿ ಶಿವಪ್ರಕಾಶ್ ಹಾಗೂ ಬೈಕ್ ಸವಾರ ಜಿತಿನ್ ಬಿ. ಜಾರ್ಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಎರಡು ಕಾರು ಒಂದು ಬೈಕ್ ಜಖಂ ಆಗಿದೆ.

SIx People Died in Tipper Lorry Road Accident In Bengaluru- Mysore Road

ಮೈಸೂರು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಅತಿ ವೇಗದಿಂದ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಪಲ್ಟಿ ಹೊಡೆದಿದ್ದು, ಜಲ್ಲಿ ಎರಡು ಕಾರಿನ ಮೇಲೆ ಬಿದ್ದಿದೆ. ಈ ವೇಳೆ ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪಕ್ಕದಲ್ಲಿದ್ದ ಮತ್ತೊಂದು ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಲಾರಿ ಬಿದ್ದ ಪರಿಣಾಮ ಬೈಕ್ ಸವಾರ ಕೂಡ ಸಾವನ್ನಪಿದ್ದಾನೆ. ಘಟನಾ ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SIx People Died in Tipper Lorry Road Accident In Bengaluru- Mysore Road

ಹತ್ತು ಕಿ.ಮೀ. ಟ್ರಾಫಿಕ್ ಜಾಮ್: ಈ ಅವಘಡದಿಂದ ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸುಮಾರು ಹತ್ತು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಟಿಪ್ಪರ್ ಲಾರಿಯನ್ನು ಸ್ಥಳಾಂತರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+