ಬೆಂಗಳೂರಿನ ಆರು ರಸ್ತೆಗಳಿಗೆ ವಿಸ್ತರಣೆ ಭಾಗ್ಯ

ಬೆಂಗಳೂರು, ಸೆ. 19 : ಉದ್ಯಾನ ನಗರಿ ಬೆಂಗಳೂರಿನ ಆರು ರಸ್ತೆಗಳನ್ನು ವಿಸ್ತರಣೆ ಮಾಡಲು ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಸೂಚನೆ ನೀಡಿದ್ದಾರೆ. ಹಲವು ವರ್ಷಗಳಿಂದ ವಿಳಂಬವಾಗುತ್ತಿರುವ ರಸ್ತೆಗಳ ಅಗಲೀಕರಣ ಕಾಮಗಾರಿಗಳಿಗೆ ಚಾಲನೆ ನೀಡಲು ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೇಯರ್ ಬಿ.ಎನ್‌. ಮಂಜುನಾಥ ರೆಡ್ಡಿ ಅವರು, ನಗರದ 6 ರಸ್ತೆಗಳ ಅಗಲೀಕರಣಕ್ಕೆ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ. ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಮಾಡಲು ರಸ್ತೆ ಅಗಲೀಕರಣ ಅಗತ್ಯ. ಇದಕ್ಕಾಗಿ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದು ಮೇಯರ್ ಹೇಳಿದ್ದಾರೆ.[ಮಂಜುನಾಥ ರೆಡ್ಡಿ ಸಂಕ್ಷಿಪ್ತ ಪರಿಚಯ]

manjunath reddy

ಯಾವ ರಸ್ತೆಗಳ ಅಗಲೀಕರಣ : ಮೊದಲ ಹಂತದಲ್ಲಿ ಬನ್ನೇರುಘಟ್ಟ ರಸ್ತೆ, ಸರ್ಜಾಪುರ ರಸ್ತೆ, ಟ್ಯಾನರಿ ರಸ್ತೆ, ದಿನ್ನೂರು ರಸ್ತೆ, ಜಯಮಹಲ್‌ ರಸ್ತೆ ಮತ್ತು ಬಳ್ಳಾರಿ ರಸ್ತೆಗಳ ಅಗಲೀಕರಣ ಕಾಮಗಾರಿಗಳಿಗೆ ಯೋಜನೆ ರೂಪಿಸಬೇಕು ಎಂದು ಮೇಯರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. [ಸಂಚಾರಿ ನಿಯಮ ಉಲ್ಲಂಘನೆ ಪತ್ತೆಗೆ ಹೊಸ ಆಪ್]

ಮೂರು ವರ್ಷಗಳ ಹಿಂದೆ ನಗರದ 230 ರಸ್ತೆಗಳನ್ನು ಅಗಲೀಕರಣ ಮಾಡಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ 20 ರಸ್ತೆಗಳ ಅಗಲೀಕರಣಕ್ಕೆ ಯೋಜನೆ ರೂಪಿಸಿ, ಅಗಲೀಕರಣಕ್ಕೆ ಸ್ವಾಧೀನಪಡಿಸಿ ಕೊಳ್ಳಬೇಕಾದ ಮನೆಗಳನ್ನು ಗುರುತು ಹಾಕಲಾಗಿದೆ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. [ಟೆಂಡರ್‌ ಶ್ಯೂರ್‌ ರಸ್ತೆಯ ವಿಶೇಷತೆಗಳೇನು?]

ಗುರುತು ಮಾಡಿರುವ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡು ಪರಿಹಾರವನ್ನೂ ನೀಡಿಲ್ಲ. ಆದ್ದರಿಂದ, ಮಾಲೀಕರು ಆಸ್ತಿ ಮಾರಾಟ ಮಾಡಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿಡಿಆರ್‌ ಮೂಲಕ ಪರಿಹಾರ ನೀಡಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮೇಯರ್‌ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+