ಬೆಂಗಳೂರಿಗೆ 6 ತಾಲ್ಲೂಕುಗಳ ಸೇರ್ಪಡೆ: ಉದ್ದೇಶ & ಯಾರಿಗೆ ಏನೆಲ್ಲಾ ಅನುಕೂಲಗಳಿವೆ?
Bengaluru: ರಾಜ್ಯ ರಾಜಧಾನಿ ಬೆಂಗಳೂರು ನಗರ ವ್ಯಾಪ್ತಿ ವಿಸ್ತರಣೆ ಆಗುತ್ತಲಿದೆ. ಈಗಾಗಲೇ ಹಲವು ಜಿಲ್ಲೆಗಳವರೆಗೂ ಹಬ್ಬಿದೆ. ಇದೀಗ ಆರು ತಾಲ್ಲೂಕುಗಳನ್ನು ಬೆಂಗಳೂರಿಗೆ ಸೇರ್ಪಡೆ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗಾದ್ರೆ, ಅವುಗಳು ಯಾವುವು ಹಾಗೂ ಉದ್ದೇಶ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಬೃಹತ್ ಐಟಿ ಸಿಟಿಗಳಲ್ಲಿ ಬೆಂಗಳೂರು ಕೂಡ ಒಂದಾಗಿದೆ. ಇದರ ವ್ಯಾಪ್ತಿ ದಿನದಿಂದ ದಿನಕ್ಕೆ ವಿಸ್ತರಣೆ ಆಗುತ್ತಲಿದೆ. ಇದೀಗ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ, ಮಾಗಡಿ ತಾಲೂಕಿನ ಬಿಡದಿ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲ್ಲಿನ ಪ್ರದೇಶಗಳು ಹೊಸ ಬೆಂಗಳೂರಿಗೆ ಸೇರ್ಪಡೆ ಆಗುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದರು. ಹಾಗಾದ್ರೆ ಇದರ ಉದ್ದೇಶ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ದೇವನಹಳ್ಳಿಯಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. "ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಬೆಂಗಳೂರು ಸುತ್ತಲಿನ ಪ್ರದೇಶಗಳನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ಯೋಜನೆ ರೂಪಿಸಲಾಗುತ್ತಿದೆ," ಎಂದು ಡಿಸಿಎಂ ಡಿಕೆ ಶಿವಮುಕಾರ್ ಅವರು ಹೇಳಿದರು.
ಬೆಂಗಳೂರಿನಲ್ಲಿ ಇರುವ ನಿಮ್ಮ ಆಸ್ತಿ ಕಾಪಾಡಿಕೊಳ್ಳುವುದು ನಿಮ್ಮೆಲ್ಲರ ಕರ್ತವ್ಯ. ನಾನು ಬೆಂಗಳೂರಿಗೆ ಹೊಸ ರೂಪ ನೀಡುವುದರ ಜೊತೆಗೆ ಆಸ್ತಿ ಮೌಲ್ಯಕ್ಕೆ ಗೌರವ ತರುವ ಕೆಲಸ ಮಾಡುತ್ತೇನೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲ್ಲಿನ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಸಚಿವ ಕೆ.ಎಚ್.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ನೆಲಮಂಗಲ ಶಾಸಕ ಶ್ರೀನಿವಾಸ್ ಬೇಡಿಕೆ ಇಟ್ಟಿದ್ದರಿಂದ ಬೆಂಗಳೂರು ಉತ್ತರ ಎಂಬ ಹೊಸ ಹೆಸರನ್ನು ನೀಡಲಾಗಿದೆ ಎಂದು ಹೇಳಿದರು.
ದೂರ ದೃಷ್ಟಿಯಿಂದ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹೊಸ ಬೆಂಗಳೂರು ಕಟ್ಟಿ ವಿಶ್ವದ ಗಮನ ಸೆಳೆಯುವ ಕೆಲಸ ಮಾಡಬೇಕಿದೆ. ಇದನ್ನು ದೃಷ್ಟಿಕೋನದಲ್ಲಿ ಇಟ್ಟುಕೊಂಡು ಎಲ್ಲರೂ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ನಂದಗುಡಿ ಮತ್ತು ಸೋಲೂರು, ಬಿಡದಿಯ ರೈತರ ಜಮೀನಿಗೆ ಅನ್ಯಾಯ ಆಗದಂತೆ ಉತ್ತಮ ಬೆಲೆ ದೊರಕಿಸಲು ಅನುಕೂಲ ಆಗುವಂತಹ ಕೆಲಸ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಬೆಂಗಳೂರು ಮಹಾನಗರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಸುತ್ತಮುತ್ತಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ರಾಮನಗರ ಹಾಗೂ ಮಾಗಡಿ ತಾಲೂಕಿನ ಬಿಡದಿ ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುವ ಯೋಜನೆ ಇದಾಗಿದೆ. ಈ ಮೂಲಕ
ಈ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಅಂತಲೂ ತಿಳಿಸಿದ್ದಾರೆ.
ಯೋಜನೆಯ ಪ್ರಮುಖ ಉದ್ದೇಶ
* ವೇಗದ ಅಭಿವೃದ್ಧಿ: ಬೆಂಗಳೂರು ನಗರದ ವೇಗವಾದ ಬೆಳವಣಿಗೆಗೆ ಅನುಗುಣಕ್ಕೆ ತಕ್ಕಂತೆ ಆಡಳಿತಾತ್ಮಕ ಹಾಗೂ ಭೌಗೋಳಿಕ ವಿಸ್ತರಣೆ ಮಾಡಲಾಗುತ್ತದೆ.
* ಈ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ವಿಶ್ವದ ಗಮನ ಸೆಳೆಯುವಂತೆ ಮಾಡುವುದು.
* ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಎಂಬ ಹೊಸ ಜಿಲ್ಲೆಗಳನ್ನು ರಚಿಸಿ, ಈ ಪ್ರದೇಶಗಳನ್ನು ಅವುಗಳ ವ್ಯಾಪ್ತಿಗೆ ತರಲಾಗುತ್ತದೆ.
ಹೊಸ ತಾಲ್ಲೂಕುಗಳ ಸೇರ್ಪಡೆ
* ಹೊಸಕೋಟೆ
* ನೆಲಮಂಗಲ
* ದೊಡ್ಡಬಳ್ಳಾಪುರ
* ದೇವನಹಳ್ಳಿ
* ರಾಮನಗರ
* ಮಾಗಡಿ ತಾಲೂಕಿನ ಬಿಡದಿ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications