ಹೋಂ ಕ್ವಾರಂಟೈನ್ ಉಲ್ಲಂಘನೆ; ಬೆಂಗಳೂರಲ್ಲಿ 570 ಎಫ್‌ಐಆರ್
ಬೆಂಗಳೂರು, ಜುಲೈ 15 : ಹೋಂ ಕ್ವಾರಂಟೈನ್‌ನಲ್ಲಿರುವ ಜನರು ಎಚ್ಚರಿಕೆಯಿಂದ ಇರಬೇಕು. ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಜನರ ವಿರುದ್ಧ ಬೆಂಗಳೂರು ನಗರದಲ್ಲಿ 570 ಎಫ್‌ಐಆರ್‌ಗಳು ದಾಖಲಾಗಿವೆ.
Recommended Video
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿ ಹೊರಗೆ ಸುತ್ತಾಡಿದ ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ. 30 ಎನ್‌ಸಿಆರ್‌ಗಳನ್ನು ಸಹ ದಾಖಲು ಮಾಡಲಾಗಿದೆ.
ಬಿಬಿಎಂಪಿ ವಾರ್ ರೂಂ ಜುಲೈ 14ರಂದು ನೀಡಿದ ಮಾಹಿತಿಯಂತೆ ಬೆಂಗಳೂರು ನಗರದಲ್ಲಿ 87,557 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇವರಲ್ಲಿ ಸೋಂಕು ಪೀಡಿತರು, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ ವ್ಯಕ್ತಿಗಳು ಇದ್ದಾರೆ.

ಹೋಂ ಕ್ವಾರಂಟೈನ್ ಮಾರ್ಗಸೂಚಿ ಪಾಲನೆ ಬಗ್ಗೆ ಗಮನಹರಿಸಲು 12 ಸಾವಿರ ಸ್ವಯಂ ಸೇವಕರು ತಮ್ಮ ಹೆಸರನ್ನು ನೋಂದಣಿ ಮಾಡಿದ್ದಾರೆ. 10 ಸಾವಿರ ಸಿಬ್ಬಂದಿಗಳನ್ನು ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ನೇಮಕ ಮಾಡಲಾಗಿದೆ.
ಮೂರು ದಿನಕ್ಕೊಮ್ಮೆ ಅಧಿಕಾರಿಗಳು ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ. ಮನೆಗೆ ಹಾಕಿರುವ ಪೋಸ್ಟರ್ ಇದೆಯೇ?, ಮಾರ್ಗಸೂಚಿಗಳನ್ನು ಅವರು ಪಾಲನೆ ಮಾಡುತ್ತಿದ್ದಾರೆಯೇ? ಎಂದು ಪರಿಶೀಲಿಸುತ್ತಾರೆ.
ಹಲವು ಬಾರಿ ಮಾರ್ಗಸೂಚಿಗಳನ್ನು ಪಾಲನೆ ಮಾಡದವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಪದೇ ಪದೇ ನಿಯಮ ಉಲ್ಲಂಘಟನೆ ಮಾಡಿದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ಮಂಗಳವಾರ ನಗರದಲ್ಲಿ 1267 ಹೊಸ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 20969.












Click it and Unblock the Notifications