ಶಿವಾಜಿನಗರ ಮೆಟ್ರೋ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ಸಂಪರ್ಕ ಸೇತುವೆ
ಬೆಂಗಳೂರು, ಮೇ 24: ಸ್ಮಾರ್ಟ್ ಸಿಟಿ ಯೋಜನೆಯಡಿ ಬಿಬಿಎಂಪಿಯು ಶಿವಾಜಿನಗರ ಮೆಟ್ರೋ ನಿಲ್ದಾಣದಿಂದ ಸಮೀಪದ ರಸೆಲ್ ಮಾರುಕಟ್ಟೆ ಮತ್ತು ಬಸ್ ನಿಲ್ದಾಣಕ್ಕೆ ನೇರವಾಗಿ ಸಂಪರ್ಕ ಕಲ್ಪಿಸುವ ಸ್ಕೈವಾಕ್ ನಿರ್ಮಿಸಲು ಯೋಜನೆ ರೂಪಿಸಿದೆ.
ಗೊಟ್ಟಿಗೆರೆ-ನಾಗವಾರ ಮೆಟ್ರೋ ಮಾರ್ಗದಲ್ಲಿ ಸಿವಾಜಿನಗರ ಬಳಿ ಸುರಂಗ ನಿಲ್ದಾಣ ನಿರ್ಮಾಣವಾಗಲಿದೆ. ಮೆಟ್ರೋ ರೈಲುಗಳಲ್ಲಿ ಬರುವ ಪ್ರಯಾಣಿಕರು ನೇರವಾಗಿ ಬಸ್ ನಿಲ್ದಾಣ ಮತ್ತು ರಸೆಲ್ ಮಾರುಕಟ್ಟೆಗೆ ತೆರಳಲು ಅನುಕೂಲವಾಗುವಂತೆ ಸ್ಕೈವಾಕ್ ನಿರ್ಮಿಸಲು ಪಾಲಿಕೆ ಉದ್ದೇಶಿಸಿದೆ.
ಈ ಸ್ಕೈವಾಕ್‌ನಲ್ಲೂ ವ್ಯಾಪಾರಕ್ಕೆ ಅನುವು ಮಾಡಿಕೊಡಲು ಚಿಂತನೆ ನಡೆಸಲಾಗಿದೆ. ಇದರಿಂದ ಪ್ರಯಾಣಿಕರು ತಮಗೆ ಅಗತ್ಯವಿರುವ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಅಲ್ಲದೇ ಸುತ್ತಮುತ್ತಲ ರಸ್ತೆಗಳಲ್ಲಿ ಪಾದಚಾರಿಗಳ ಓಡಾಟದಿಂದಾಗುವ ಸಂಚಾರ ದಟ್ಟಣೆಯೂ ತಪ್ಪಲಿದೆ.

ಸ್ಕೈವಾಕ್ ವಿನ್ಯಾಸವನ್ನೂ ರೂಪಿಸಲಾಗಿದೆ, ಯುರೋಪ್ ರಾಷ್ಟ್ರಗಳಲ್ಲಿ ಇಂಥ ಸ್ಕೈವಾಕ್ ನಿರ್ಮಿಸಲಾಗಿದೆ. ಹಾಗೆಯೇ ಕಲಾಸಿಪಾಳ್ಯದಲ್ಲಿ ನಿರ್ಮಿಸುತ್ತಿರುವ ಬಿಎಂಟಿಸಿಯ ನಿಲ್ದಾಣದಿಂದ ಮೂರನೇ ಮಹಡಿಯಿಂದ ನೇರವಾಗಿ ಮೆಟ್ರೋಗೆ ಸಂಪರ್ಕ ಕಲ್ಪಿಸುವ ಸ್ಕೈವಾಕ್ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಬಿ.ಎಂ. ವಿಜಯಶಂಕರ್ ತಿಳಿಸಿದ್ದಾರೆ.












Click it and Unblock the Notifications