• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಮಾನ ನಿಲ್ದಾಣಕ್ಕೆ ಬೆದರಿಕೆ, ಇಬ್ಬರ ಬಂಧನ

|

ಬೆಂಗಳೂರು, ನ.9 : ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸಲಾಗುವುದ ಎಂಬ ಎಸ್‌ಎಂಎಸ್ ಕಳಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಚನ್ನಪಟ್ಟಣದವರು ಎಂದು ತಿಳಿದುಬಂದಿದೆ.

ಬಂಧಿತರು ಶನಿವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುತ್ತೇವೆ ಎಂದು ಟರ್ಮಿನಲ್ ಮ್ಯಾನೇಜರ್‌ ಅವರಿಗೆ ಸಂದೇಶ ಕಳಿಸಿದ್ದರು. ಈ ಬಗ್ಗೆ ವಿಮಾನ ನಿಲ್ದಾಣದ ಪೊಲೀಸರಿಗೆ ಮ್ಯಾನೇಜರ್ ಮಾಹಿತಿ ನೀಡಿದ್ದರು.

ಮಾಹಿತಿ ಪಡೆದ ತಕ್ಷಣ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ನಿಂಗೇಗೌಡ ಮತ್ತು ಶಿವಾನಂದ ಎಂಬ ಆರೋಪಿಗಳನ್ನು ಚನ್ನಪಟ್ಟಣದಲ್ಲಿ ಬಂಧಿಸಿದ್ದು, ಬೆಂಗಳೂರಿಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. [ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ]

ಅಪ್ರಾಪ್ತನಿಂದ ಅತ್ಯಾಚಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿಕ್ಕೆಳಚಬಂಡೆ ಗ್ರಾಮದಲ್ಲಿ 17 ವರ್ಷದ ಬಾಲಕನೊಬ್ಬ 26 ವರ್ಷದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನನ್ನ ಮೇಲೆ ಅತ್ಯಚಾರ ನಡೆಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಕಾಮಸಮುದ್ರ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Two arrested for threatening to blow up the Kempegowda International Airport Limited (KIAL)Bengaluru. Channapatna based Nanjegowda and Shivanad sent SMS to Airport officers on Saturday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more