GBA: ಬೆಂಗಳೂರಲ್ಲಿ 1,19,000 ಮನೆಗಳ ಸಮೀಕ್ಷೆ, 05 ಪಾಲಿಕೆವಾರು ಅಂಕಿ-ಅಂಶ ಇಲ್ಲಿದೆ
ಬೆಂಗಳೂರು, ಅಕ್ಟೋಬರ್ 06: ಕರ್ನಾಟಕ ಸರ್ಕಾರದ ಸೂಚನೆ ಮೇರೆಗೆ ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇತ್ತೀಚೆಗೆ ಆರಂಭವಾಯಿತು. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಅಧಿಕಾರಿಗಳು ಈವರೆಗೆ 1.19 ಲಕ್ಷ ಮನೆಗಳನ್ನು ಸಮೀಕ್ಷೆ ನಡೆಸಿದ್ದಾರೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ತಿಳಿಸಿದೆ.
ಭಾನುವಾರ 5 ನಗರ ಪಾಲಿಕೆಗಳಲ್ಲಿ ಸಂಜೆ 07.00 ಗಂಟೆಯವರೆಗೆ 95,024 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರು ನಿಮ್ಮ ಮನೆಗಳಿಗೆ ಬರುವ ವೇಳೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಹಕರಿಸಲು ಮತ್ತು ಭಾಗವಹಿಸಲು ಎಲ್ಲಾ ನಾಗರಿಕರಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೋರಿದೆ.

ಇಷ್ಟು ಮಾತ್ರವಲ್ಲದೇ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹ ಸ್ವತಃ ಆನ್‌ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಿಬಿಎ ವೆಬ್ ಸೈಟ್ ಲಿಂಕ್ https://kscbcselfdeclaration.karnataka.gov.in/ ನೀಡಿದೆ. ಅದರ ಮೂಲಕವು ನೀವು ಸ್ವಯಂ ಪ್ರೇರಿತವಾಗಿ ಈ ಸಮೀಕ್ಷೆಯ ಭಾಗವಾಗಬಹುದೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕದಾದ್ಯಂತ ಆರಂಭವಾದ ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಸರ್ಕಾರದಿಂದ ನಿಯೋಜನೆಗೊಂಡ ಅಧಿಕಾರಿಗಳು ಸೂಕ್ತ ತರಬೇತಿ ಸಹಿತ ಮಸೀಕ್ಷೆ ಆರಂಭಿಸಿದ್ದಾರೆ. ಈರವರೆಗೆ 1,19,000 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಉಳಿದಂತೆ ಸಮೀಕ್ಷೆ ಕಾರ್ಯ ಮುಂದುವರಿದಿದೆ. ಇದರಲ್ಲಿ ಸಮೀಕ್ಷೆ ನಡೆದ ಪಾಲಿಕೆ ವಾರು ಮನೆಗಲ ಮಾಹಿತಿ ಇಲ್ಲಿದೆ.
ಪಾಲಿಕೆವಾರು ಮನೆಗಳ ಸರ್ವೇ ಮಾಹಿತಿ
1. ಕೇಂದ್ರ ನಗರ ಪಾಲಿಕೆ : 14,288 ಮನೆ ನಿವಾಸಿಗಳ ಸರ್ವೇ ಆಗಿದೆ.
2. ಪೂರ್ವ ನಗರ ಪಾಲಿಕೆ : 17,269 ಮನೆಗಳ ಭೇಟಿ
3. ಉತ್ತರ ನಗರ ಪಾಲಿಕೆ : 31,363 ಮನೆಗಳಿಗೆ ಅಧಿಕಾರಿಗಳ ಭೇಟಿ
4. ದಕ್ಷಿಣ ನಗರ ಪಾಲಿಕೆ : 16,445 ಮನೆ ನಿವಾಸಿಗಳ ಸರ್ವೇ ಆಗಿದೆ.
5. ಪಶ್ಚಿಮ ನಗರ ಪಾಲಿಕೆ : 40,112 ಮನೆ ನಿವಾಸಿಗಳ ಸರ್ವೇ ಆಗಿದೆ.
ಒಟ್ಟು ಮನೆಗಳು: 1,19,477 ಮನೆಗಳ ಸರ್ವೆ ಮುಗಿದಿದೆ.
ಪ್ರತಿ ಮನೆ ಮನೆಗಳಿಗೂ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ನಾಗರಿಕರು ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿ ಅಗತ್ಯ ದಾಖಲೆ ಇಟ್ಟುಕೊಂಡು ಸಮೀಕ್ಷೆಗೆ ಸಹಕರಿಸಬೇಕು ಎಂದು ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಕೋರಿದ್ದಾರೆ.
ಮತ್ತೊಂದೆಡೆ ರಾಜ್ಯ ಸರ್ಕಾರದ ಈ ಸಮೀಕ್ಷೆ ಕುರಿತು ವಿಪಕ್ಷ ನಾಯಕರು ಕಿಡಿ ಕಾರಿದ್ದಾರೆ. ಅಧಿಕಾರಿಗಳಿಗೆ ತರಬೇತಿ ಇಲ್ಲ ಎಂದು ಆರಂಭದಲ್ಲಿ ದೂರಿದ್ದರು. ಈ ಸಮೀಕ್ಷೆ ಬಸವತತ್ವ ವಿರುದ್ಧವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದೂರಿದರು. ಅಲ್ಲದೇ ಸಮೀಕ್ಷೆ ವೇಳೆ ಕೇಳುವ ಪ್ರಶ್ನೆಗಳು ಇಡಿ ಪ್ರಶ್ನೆಗಳಂತಿವೆ ಅಂತಲೂ ಆರೋಪಿಸಲಾಗಿದೆ. ಬಿಜೆಪಿ ಆರ್.ಅಶೋಕ್, ತೇಜಸ್ವಿ ಸೂರ್ಯ ಅವರು ಸೇರಿದಂತೆ ಕೆಲವರು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳದಂತೆ ಕರೆ ನೀಡಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications