17,500 ಅಧಿಕಾರಿಗಳು ಸಮೀಕ್ಷೆಗೆ ನಿಮ್ಮನೆಗೆ ಬರ್ತಾರೆ: ಸಮೀಕ್ಷೆ ಹೇಗೆ ನಡೆಯುತ್ತೆ?...DK Shivakumar

ಬೆಂಗಳೂರು, ಅಕ್ಟೋಬರ್ 04: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯ ರಾಜ್ಯದಲ್ಲಿ ಈಗಾಗಲೇ ಆಗಿದೆ. ಇಂದಿನಿಂದ ರಾಜಧಾನಿ ಬೆಂಗಳೂರಿನಲ್ಲಿ GBA ವ್ಯಾಪ್ತಿಯ ಐದು ನಗರ ಪಾಲಿಕೆ ಶನಿವಾರದಿಂದ ಸಮೀಕ್ಷೆ ಆರಂಭವಾಗಲಿದೆ. ಶುಕ್ರವಾರ ಅಂತಿಮ ತರಬೇತಿ ಪಡೆದಿರುವ 17,500 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಅವರೆಲ್ಲ ಮನೆ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಸರ್ಕಾರ ಇಂದಿನಿಂದ ಬೆಂಗಳೂರಿನ ಐದು ಮಹಾನಗರ ಪಾಲಿಕೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದೆ. ಸುಮಾರು 17,500 ಅಧಿಕಾರಿಗಳು ನಿಮ್ಮ ಮನೆಗಳಿಗೆ ಭೇಟಿ ನೀಡಿ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಬೆಂಗಳೂರಿನ ಜನರಿಗೆ ಉತ್ತಮವಾಗಿ ಯೋಜನೆ ರೂಪಿಸಲು ಸಾಧ್ಯವಾಗುವಂತೆ ಎಲ್ಲಾ ನಾಗರಿಕರು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಂಪೂರ್ಣವಾಗಿ ಸಹಕರಿಸಬೇಕೆಂದು ಅವರು ಕೋರಿದ್ದಾರೆ.

Social-Educational Survey Start in Bengaluru 17 500 officials will Visit Households DK Shivakumarf

ಕಳೆದ ಸೆಪ್ಟಂಬರ್ 22 ರಿಂದ ಬೆಂಗಳೂರು ನಗರದಿಂದ ರಾಜ್ಯಾದ್ಯಂತ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ಸಾಗಿದೆ. ಅಲ್ಲಿಂದ ಇವತ್ತಿನವರೆಗೆ ಒಟ್ಟು ಹನ್ನೊಂದು ದಿನದ ನಂತರ ರಾಜಧಾನಿ ಸಮೀಕ್ಷೆ ಚಟುವಟಿಕೆಗಳು ಶುರು ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟು ಸುಮಾರು 17,500 ಅಧಿಕಾರಿಗಳು, ಸಿಬ್ಬಂದಿಯನ್ನು ಸಮೀಕ್ಷಾದಾರರಿಗೆ ಆಯಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎರಡು ಹಂತಗಳಲ್ಲಿ ತರಬೇತಿ ನೀಡಲಾಗುತ್ತದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿನ ಐದು ನಗರ ಪಾಲಿಕೆಗಳ ಆಯುಕ್ತರ ಮೇಲ್ವಿಚಾರಣೆಯಲ್ಲಿ ಸಮೀಕ್ಷಾ ಕಾರ್ಯ ನಡೆಯಲಿದೆ. ಅಪರ ಆಯುಕ್ತರು, ಜಂಟಿ ಆಯುಕ್ತರು ಮತ್ತು ಉಪ ಆಯುಕ್ತರು ಸಮೀಕಾ ಕಾರ್ಯದಲ್ಲಿರಲಿದ್ದಾರೆ. ಐದು ನಗರ ಪಾಲಿಕೆಗಳ ವ್ಯಾಪ್ತಿಗೆ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಕೆಎಸ್‌ಎಸ್ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದರ ಬಗ್ಗೆ ಈಗಾಗಲೇ ಪಾಲಿಕೆ ಆಯುಕ್ತರು ಮಾಹಿತಿ ನೀಡಿದ್ದಾರೆ.

ಈ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗಾಗಿ ಒಟ್ಟು 34 ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದು, ಅವರೆಲ್ಲ ಸಮೀಕ್ಷಾ ಕಾರ್ಯವನ್ನು ಸುಗಮವಾಗಿ ನಡೆಸಲಿದ್ದಾರೆ. ಸಮೀಕ್ಷಾದಾರರು ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಕಾಪಾಡುವನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬರಂತೆ ಗ್ರೂಪ್-ಎ ವೃಂದದ ಅಧಿಕಾರಿಗಳನ್ನು ವಾರ್ಡ್ ಮೇಲ್ವಿಚಾರಕರಾಗಿ ಚಾಜನ್ ಅಧಿಕಾರಿಗಳು ಸಹ ಇರಲಿದ್ದಾರೆ.

ಸಮೀಕ್ಷೆ ನಡೆಸುವ 15 ರಿಂದ 20 ಸಮೀಕ್ಷಾದಾರರ ಗುಂಪಿನ ಮೇಲೆ ಒಬ್ಬ ಉಪ ಮೇಲಿಚಾರಕರು ಇರಲಿದ್ದಾರೆ. ಪ್ರತಿ 300 ಮನೆಗಳಿಗೆ ಒಬ್ಬರಂತೆ ಸಮೀಕ್ಷಾದಾರರನ್ನು ನಿಯೋಜಿಸಲಾಗಿದೆ. ಅವರೆಲ್ಲ ತಮಗೆ ನೀಡಿದ ವಾರ್ಡ್ ವ್ಯಾಪ್ತಿಯಲ್ಲಿನ ಎಲ್ಲ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+