• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆಲವು ನಾಯಕರಿಗೆ ಸಂಪುಟದಲ್ಲಿ ಅವಕಾಶ: ದಿನೇಶ್ ಗುಂಡೂರಾವ್ ಭರವಸೆ

|

ಬೆಂಗಳೂರು, ಜೂನ್ 07: ಸಂಪುಟ ಪುನರ್‌ ರಚನೆ ವೇಳೆ ಕೆಲವು ಕಾಂಗ್ರೆಸ್ ಮುಖಂಡರಿಗೆ ಅವಕಾಶ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಸಂಪುಟ ಪುನರ್‌ ರಚನೆಗೆ ಮೈತ್ರಿ ಸರ್ಕಾರ ಮುಂದಾಗುತ್ತಿದ್ದಂತೆ, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹೀಗೆ ಹೇಳಿದ್ದು, ಹಿರಿಯರು, ಅತೃಪ್ತರಲ್ಲಿ ಕೆಲವರಿಗೆ ಸಂಪುಟ ಸೇರುವ ಅವಕಾಶ ಒದಗಿಬರಲಿದೆ ಎಂದು ನಿರೀಕ್ಷಿಸಬಹುದಾಗಿದೆ.

ಸಂಪುಟ ವಿಸ್ತರಣೆ ಯಾವಾಗ? ಸಿದ್ದರಾಮಯ್ಯ ಅವರದ್ದು ಒಂದೇ ಉತ್ತರ

ಸಂಪುಟ ಪುನರ್‌ ರಚನೆ ವೇಳೆ ಹಲವು ಹಿರಿಯ ಮುಖಂಡರಿಗೆ ಅವಕಾಶ ಸಿಗಲಿದೆ ಎಂದ ದಿನೇಶ್ ಗುಂಡೂರಾವ್ ಇದೇ ವೇಳೆ, ಪಕ್ಷದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದವರಿಗೆ ಶಿಕ್ಷೆಯೂ ಸಿಗಲಿದೆ ಎಂದು ಸೂಚನೆ ನೀಡಿದ್ದಾರೆ.

ಸಂಪುಟ ವಿಸ್ತರಣೆ : ಕಾಂಗ್ರೆಸ್‌ಗೆ ಷರತ್ತು ಹಾಕಿದ ದೇವೇಗೌಡರು!

ಪಕ್ಷದ ವಿರುದ್ಧ ಬಂಡಾಯವೆದ್ದು ಬಹಿರಂಗವಾಗಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಬಗ್ಗೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಮಾತನಾಡುತ್ತಿರುವ ರೋಷನ್ ಬೇಗ್ ವಿರುದ್ಧ ಹೈಕಮಾಂಡ್‌ಗೆ ದೂರು ಸಲ್ಲಿಸಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಕಾಯಲಾಗುತ್ತಿದೆ ಎಂದು ಅವರು ಹೇಳಿದರು.

English summary
KPCC president Dinesh Gundu Rao said some of the congress leaders will get in to cabinet soon. He also said a complaint was sent to congress high command on Roshan Baig.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X