• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಖಾಸಗಿ ವೈದ್ಯರ ಬಂದ್ ಎಫೆಕ್ಟ್, ರೋಗಿಗಳಲ್ಲಿ ಗೊಂದಲ

|

ಬೆಂಗಳೂರು, ನವೆಂಬರ್ 03: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ತಮ್ಮ ಆಸ್ಪತ್ರೆಗಳಿಗೆ ಕದ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

ಆದರೆ, ಕೆಲ ಜನರು ಮಾತ್ರ ಎಲ್ಲಾ ಆಸ್ಪತ್ರೆಗಳು ಇಂದು (ಶುಕ್ರವಾರ) ಬಂದ್ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿಲ್ಲ. ಅದಕ್ಕೆ ಪೂರಕವೆಂಬಂತೆ ಜಯನಗರದ 3ನೇ ಹಂತದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಇಂದು ರೋಗಿಗಳಿಲ್ಲದೆ ಬಣಗುಡುತಿತ್ತು.

ದಿನವಿಡೀ ರೋಗಿಗಳಿಂದ ತುಂಬಿ ತುಳುಕುತ್ತಿದ್ದ ಜಯನಗರದ 3ನೇ ಹಂತದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಲ್ಲದೆ ಬಿಕೋ ಎನ್ನುತಿತ್ತು,

ಸರ್ಕಾರಿ ಆಸ್ಪತ್ರೆಗಳು ಬಂದ್ ಇಲ್ಲ ಕೇವಲ ಖಾಸಗಿ ಆಸ್ಪತ್ರೆಗಳು ಬಂದಿವೆ ಎಂಬುವುದು ವಿದ್ಯಾಂವತರು ಅಂದರೆ, ದಿನಾಲು ನ್ಯೂಸ್ ನೋಡುತ್ತಿರುವವರಿಗೆ ಮಾತ್ರ ತಿಳಿದಿದೆ. ಇನ್ನು ಕೆಲವರು ಎಲ್ಲಾ ಆಸ್ಪತ್ರೆಗಳು ಬಂದ್ ಎಂದು ಭಾವಿಸಿದ್ದಾರೆ.

ಬೈಕ್ ಸ್ಕಿಡ್ ಆಗಿ ಬಿದ್ದವನಿಗೆ ಕ್ಯಾರೆ ಅನ್ನದ ವೈದ್ಯರು

ಇನ್ನು ಕೆಲವರು ಖಾಸಗಿ ಆಸ್ಪತ್ರೆಗೆ ತೆರಳುತ್ತಿದ್ದವರು ಅನಿವಾರ್ಯವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ತೆರಳಿದರು.

ಜಯನಗರದ ಸಾರ್ವಜನಿಕ ಆಸ್ಪತ್ರೆ ಖಾಲಿ ಖಾಲಿ: ದಿನ ಆಸ್ಪತ್ರೆಯಲ್ಲಿ ರೋಗಿಗಳು ಕ್ಯೂ ನಿಲ್ಲುತ್ತಿದ್ದರು. ಆದರೆ, ಇಂದು ಯಾಕೋ ಸ್ವಲ್ಪ ಮಟ್ಟಿಗೆ ಕಡಿಮೆ ಜನ ಬಂದಿದ್ದಾರೆ.

ಬಾಗಲಕೋಟೆ: ಗರ್ಭಿಣಿ ಚೈತ್ರಾ ಪಾಲಿಗೆ ದೇವರಾದ ಡಾ. ಮನೋಹರ್

ಎಲ್ಲಾ ಆಸ್ಪತ್ರೆಗಳು ಬಂದ್ ಎಂದು ತಿಳಿದು, ನಮ್ಮ ಆಸ್ಪತ್ರೆಗ ಬರುತ್ತಿದ್ದ ರೋಗಿಗಳ ಸಂಖ್ಯೆ ಸಹ ಕಡಿಮೆಯಾಗಿರಬಹುದು ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
karnataka private doctors strike effect, Some peoples feel that all hospitals closed today. So less the patients visit to Jayanagar government hospital, Bengaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more