ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸರ್ಕಾರಕ್ಕೆ ಸೋನಿಯಾ, ರಾಹುಲ್ ಗಾಂಧಿಯನ್ನು ಕುಗ್ಗಿಸಲು ಸಾಧ್ಯವಿಲ್ಲ: ಡಿಕೆಶಿ

|
Google Oneindia Kannada News

ಬೆಂಗಳೂರು ಜುಲೈ 21: ಕಾಂಗ್ರೆಸ್ ಪಕ್ಷದ ಶಕ್ತಿಯಾಗಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಬರಲಿ, ಸಿಬಿಐ ಅಧಿಕಾರಿಗಳು ಅಷ್ಟೇ ಯಾಕೆ ಬಿಜೆಪಿಯ ದಂಡೇ ಬಂದರೂ ಮುಟ್ಟಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇಡಿ ವಿಚಾರಣೆ ಎದುರಿಸಿದ ಸೋನಿಯಾ ಗಾಂಧಿ ಬೆಂಬಲಿಸಿ ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ದೇಶಕ್ಕೆ ತ್ರಿವರ್ಣ ಧ್ವಜ, ರಾಷ್ಟ್ರ ಗೀತೆಯನ್ನು ಕಾಂಗ್ರೆಸ್ ತಂದು ಕೊಟ್ಟಿದೆ. ನಾವೆಲ್ಲ ನಾಯಕರು ಕಾಂಗ್ರೆಸ್ ಕುಟುಂಬದ ಮಕ್ಕಳು ಎಂದರು.

ಈ ಹಿಂದೆ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ಕೇಳಿದ್ದರಂತೆ. ನಿರಂತರ ವಿಚಾರಣೆ ನಡೆಸಿದು ಕುಗ್ಗಿಲ್ಲವಲ್ಲ ಕಾರಣ ಏನ ಎಂದು. ಅದಕ್ಕೆ ರಾಹುಲ್ ಗಾಂಧಿ ಅವರು ನಾನು ಇಲ್ಲಿ ಒಬ್ಬನೇ ಕುಳಿತಿಲ್ಲ. ದೇಶಾದ್ಯಂತ ಕಾಂಗ್ರೆಸ್ಸಿಗರು ಹೊರಗೆ ಕುಳಿತಿದ್ದಾರೆ ಎಂದು ತಿಳಿಸಿದ್ದರೆ. ಅದೇ ರೀತಿ ಸೋನಿಯಾ ಗಾಂಧಿ ಅವರು ಒಬ್ಬಂಟಿಯಲ್ಲ ಅವರಿಗೆ ದೇಶದ ಕಾಂಗ್ರೆಸ್ಸಿರ ಬೆಂಬಲವಿದೆ. ಅದಕ್ಕಾಗೆ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದೇನೆ. ಶುಕ್ರವಾರ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಇದೇ ವೇಳೆ ಅವರು ವಿವರಿಸಿದರು.

ಕುಗ್ಗಿಸಲು ಸಾಧ್ಯವಿಲ್ಲ

ಕುಗ್ಗಿಸಲು ಸಾಧ್ಯವಿಲ್ಲ

ನನಗೆ ಅಧಿಕಾರಿಗಳ ಮೇಲೆ ಸಣ್ಣ ಅನುಮಾನ ಇದೆ. ಈ ಹಿಂದೆ ದೆಹಲಿಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ವಿಚಾರಣೆ ಕುರಿತು ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದೇವೆ. ಅಲ್ಲದೇ ದೆಹಲಿಗೆ ಸಿದ್ದರಾಮಯ್ಯ ಅವರು ಹೋಗಿದ್ದಾಗಲು ಆ ಬಗ್ಗೆ ಕೇಳಿದ್ದೆ. ಆಗಲೂ ರಾಹುಲ್ ಗಾಂಧಿ ಅವರು ಮಾನಸಿಕವಾಗಿ ಯಾವುದೇ ಕಾರಣಕ್ಕೂ ಕುಗ್ಗಿಲ್ಲ ಎಂದು ತಿಳಿಸಿದ್ದರು ಎಂದು ಕಾಂಗ್ರೆಸ್ ನಾಯಕರನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದರು.


ಇಡಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬೆಂಬಲ ನೀಡುವ ಉದ್ದೇಶದಿಂದ

ಬೆಂಗಳೂರು ಸೇರಿದಂತೆ ದೇಶದ ಇನ್ನಿತರ ಭಾಗಗಳಲ್ಲಿ ಕಾಂಗ್ರೆಸ್ ನಿಂದ ನಡೆಯುತ್ತಿದೆ. ನಾನು ಜೈಲಿನಲ್ಲಿದ್ದಾಗ ಸೋನಿಯಾ ಅವರು ಧೈರ್ಯ ತುಂಬಿದ್ದರು. ಇಂದು ನಾವೆಲ್ಲರು ಅವರಿಗೆ ಧೈರ್ಯ ತುಂಬುತ್ತಿದ್ದೇವೆ ಎಂದು ಹೇಳಿದರು.

ನೋಟಿಸ್ ಗೆ ಹೆದರಲ್ಲ

ನೋಟಿಸ್ ಗೆ ಹೆದರಲ್ಲ

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನೊಟೀಸ್‌ಗೆ ಹೆದರುವವರಲ್ಲ. ಸೋನಿಯಾ ಗಾಂಧಿ ಅವರು ನಾನು ತಿಹಾರ್ ಜೈಲಿನಲ್ಲಿದ್ದಾಗ ಒಂದೂವರೆ ತಾಸು ಕೂತು ನನ್ನ ಜತೆ ಮಾತನಾಡಿ ನನಗೆ ಶಕ್ತಿ ತುಂಬಿದ್ದರು. ಆಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಇರಲಿಲ್ಲ. ಕಾಂಗ್ರೆಸ್ ಕಾರ್ಯಕರ್ತನ ಜತೆಗೆ ನಾನಿದ್ದೇನೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಅವರು ಧೈರ್ಯ ತುಂಬಿದ್ದರು. ಇಂದು ಅವರಿಗೆ ನಾವೆಲ್ಲರು ಧೈರ್ಯ ತುಂಬುತ್ತಿದ್ದೇವೆ.

ಹಗರಣದ ವಿವರಣೆ ನೀಡಿದ ಡಿಕೆಶಿ

ಹಗರಣದ ವಿವರಣೆ ನೀಡಿದ ಡಿಕೆಶಿ

ಪಕ್ಷಕ್ಕೆ ಕಾರ್ಯಕರ್ತರು ನೀಡಿದ ಹಣವನ್ನು ನಾವು ದೆಹಲಿಗೆ ಕಳುಹಿಸುತ್ತೇವೆ. ಅದೇ ರೀತಿ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಉಳಿಸಲು, ಅಲ್ಲಿ ಕೆಲಸ ಮಾಡುತ್ತಿದ್ದವರಿಗೆ ವೇತನ ನೀಡಲು ಕಾಂಗ್ರೆಸಿಗರೆಲ್ಲರೂ ಸೇರಿ ಹಣವನ್ನು ದೇಣಿಗೆ ರೂಪದಲ್ಲಿ ಕೊಟ್ಟರು. ಆಗ ಸುಬ್ರಮಣಿಯನ್ ಸ್ವಾಮಿ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಚುನಾವಣಾ ಆಯೋಗ ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿತು. ಆದಾಯ ತೆರಿಗೆ ಇಲಾಖೆಯೂ ಇದರಲ್ಲಿ ತಪ್ಪಿಲ್ಲ ಎಂದು ತಿಳಿಸಿತು ಸಂಸತ್ತಿನಲ್ಲಿ ಅರುಣ್ ಜೇಟ್ಲಿ ಇದರಲ್ಲಿ ಅಕ್ರಮವಿಲ್ಲ ಎಂದಿದ್ದರು ಎಂದು ಅವರು ಈ ವೇಳೆ ತಿಳಿಸಿದರು.

ಬಿಜೆಪಿ ಭ್ರಮೆಯ್ಲಲಿದೆ

ಬಿಜೆಪಿ ಭ್ರಮೆಯ್ಲಲಿದೆ

ತಪ್ಪಿಲ್ಲದಿದ್ದರೂ ಸಹ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಹೆದರಿಸಿದರೆ, ಎಲ್ಲರೂ ಬಿಜೆಪಿಗೆ ಬರುತ್ತಾರೆ ಎಂದು ಭಾವಿಸಿದರೆ ಇದು ಕೇವಲ ನಿಮ್ಮ ಭ್ರಮೆ. ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ನಾವೆಲ್ಲರೂ ಮಹಾತ್ಮಾ ಗಾಂಧಿ, ನೆಹರೂ, ಸರ್ದಾರ್ ಪಟೇಲ್, ಅಂಬೇಡ್ಕರ್, ಮೌಲಾನ ಅಜಾದ್ ಸೇರಿದಂತೆ ದೇಶಕ್ಕೆ ತ್ಯಾಗ ಮಾಡಿದವರ ಅನುಯಾಯಿಗಳು ಎಂದು ಬಿಜೆಪಿ ವಿರುದ್ಧ ಅವರು ಗುಡುಗಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಕನಿಷ್ಠ 1 ಲಕ್ಷ ಜನ ಸೇರಿ ಆಗಸ್ಟ್ 15 ರಂದು ಮೆರವಣಿಗೆ ಹೋಗಬೇಕು. 7 ಕಿ.ಮೀ ಹೆಜ್ಜೆ ಹಾಕಬೇಕು. ನಾಳೆ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡಬೇಕಿದೆ. ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಿತ್ತೊಗೆಯುವವರೆಗೂ ನಮ್ಮ ಶಾಂತಿಯುತ ಹೋರಾಟ ಮುಂದುವರಿಯಬೇಕು. ನನ್ನ ವಿರುದ್ಧ ಪ್ರಕರಣ ದಾಖಲಾಗಿ 5 ವರ್ಷ ಆಗಿದ್ದು, ಜೈಲಿಗೆ ಹೋಗಿ ಬಂದು 3ವರ್ಷ ತುಂಬಿದೆ. ಚುನಾವಣೆ ಸಂದರ್ಭದಲ್ಲಿ ಒಂದು ವರ್ಷ ನನಗೆ ವಿರಾಮ ನೀಡಿ, ನಂತರ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರ ಬರೆದಿದ್ದೇನೆ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಡಿಕೆ ಶಿವಕುಮಾರ ತಿಳಿಸಿದರು.

English summary
Congress leader Sonia Gandhi and Rahul Gandi cannot be cowed down by no one kpcc president DK Shivakumar said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X