ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಕಿರುಕುಳ ನೀಡುತ್ತಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು,ಜೂನ್ 11: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸರಕಾರ ಅನಗತ್ಯ ಕಿರುಕುಳ ನೀಡುತ್ತಿದೆ. ಜೂನ್ 13 ರಂದು ದೇಶದ ಎಲ್ಲಾ ಭಾಗಗಳಲ್ಲಿರುವ ಇಡಿ ಕಚೇರಿ ಮುಂದೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ. ಆದರ ಅಂಗವಾಗಿ ಜೂನ್ 13 ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್ ಬಳಿಯಿರುವ ಇ.ಡಿ. ಕಚೇರಿ ಮುಂದೆ ಸೋಮವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸಂಸತ್ ಸದಸ್ಯರು ಹಾಗೂ ಎಐಸಿಸಿ ಪದಾಧಿಕಾರಿಗಳು ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಇ.ಡಿ. ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು ರಾಹುಲ್ ಗಾಂಧಿಯವರನ್ನು ಎಷ್ಟು ಹೊತ್ತು ವಿಚಾರಣೆ ನಡೆಸಲಾಗುವುದೋ ಅಷ್ಟೊತ್ತು ಪ್ರತಿಭಟನೆ ಮಾಡಲಾಗುವುದು. ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕರೆ ನೀಡುತ್ತೇನೆ. ಈ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಡಿಕೆಶಿವಕುಮಾರ್ ತಿಳಿಸಿದ್ದಾರೆ.

ಈ ಪ್ರತಿಭಟನೆ ವಿಚಾರವಾಗಿ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ನಡೆಸಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ರಾಜ್ಯದ ಇತರೆ ಭಾಗಗಳಿಂದ ಪ್ರತಿಭಟನೆಗೆ ಆಗಮಿಸುವವರು ಹಿಂದಿನ ದಿನವೇ ಬೆಂಗಳೂರಿಗೆ ಬರಬೇಕೆಂದು ಈ ಮೂಲಕ ಕರೆ ನೀಡುತ್ತಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ಪ್ರಧಾನಿ ಹುದ್ದೆ ತ್ಯಾಗ ಮಾಡಿದ್ದ ಸೋನಿಯಾ ಗಾಂಧಿ

ಪ್ರಧಾನಿ ಹುದ್ದೆ ತ್ಯಾಗ ಮಾಡಿದ್ದ ಸೋನಿಯಾ ಗಾಂಧಿ

ನಾವು ಇ.ಡಿ. ಕಚೇರಿ ಒಳಗೆ ಪ್ರವೇಶ ಮಾಡುವುದಿಲ್ಲ. ರಾಷ್ಟ್ರದ ಜನತೆಯ ನೋವನ್ನು ವ್ಯಕ್ತಪಡಿಸಲು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿಯಾಗಲು ಎರಡು ಬಾರಿ ಅವಕಾಶ ಸಿಕ್ಕರೂ ದೇಶದ ಹಿತಕ್ಕಾಗಿ ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನ ಮಂತ್ರಿ ಸ್ಥಾನ ತ್ಯಾಗ ಮಾಡಿದ್ದಾರೆ.

ಇಡಿಯಿಂದ ವಿನಾಃ ಕಾರಣ ಕಿರುಕುಳ

ಇಡಿಯಿಂದ ವಿನಾಃ ಕಾರಣ ಕಿರುಕುಳ

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ರಾಜಕೀಯ ತ್ಯಾಗ ಹಾಗೂ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಸರ್ಕಾರ ಅವರ ವಿರುದ್ಧ ವಿನಾಕಾರಣ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಟ್ಟು ಕಿರುಕುಳ ನೀಡುತ್ತಿದೆ. ಬಿಜೆಪಿ ಸರ್ಕಾರವೇ ಈ ಹಿಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಟ್ಟಿದ್ದರೂ ಗಾಂಧಿ ಕುಟುಂಬಕ್ಕೆ ತೊಂದರೆ ಕೊಡುವ ಉದ್ದೇಶದಿಂದ ಮತ್ತೆ ಆ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವಹಿಸಿ ತನಿಖೆ ಆರಂಭಿಸಲಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಜವಾಹರಲಾಲ್ ನೆಹರು ಅವರ ಕಾಲದಿಂದ ಆರಂಭವಾಗಿದ್ದು, ಇದು ಕಾಂಗ್ರೆಸ್ ಪಕ್ಷದ ಪತ್ರಿಕೆಯಾಗಿದೆ. ಮಾಧ್ಯಮ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದು ಇದನ್ನು ನಡೆಸಲು ಅನೇಕ ಸಮಸ್ಯೆಗಳು ಎದುರಾಗುತ್ತದೆ. ಅಂದಿನಿಂದ ಆ ಪತ್ರಿಕೆಯ ಆಸ್ತಿಪಾಸ್ತಿಗಳನ್ನು ಉಳಿಸಿಕೊಂಡು ಬರಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಆಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಿಸಲಾಗಿದೆ

ಆಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಿಸಲಾಗಿದೆ

ಈ ಹಿಂದೆ ಆಸ್ಕರ್ ಫರ್ನಾಂಡಿಸ್ ಅವರು ಅದಕ್ಕೆ ಟ್ರಸ್ಟಿಯಾಗಿದ್ದು, ಈಗ ಆಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಿಸಲಾಗಿದೆ. ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಆರ್ಥಿಕ ವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ಆರಂಭಿಸಿದೆ. ನಮ್ಮ ನಾಯಕರುಗಳು ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ. ಅವರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಗಾಂಧಿ ಕುಟುಂಬದ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿಯವರು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ.

ರಾಹುಲ್ ಗಾಂಧಿ ವಿಚಾರಣೆ ಪೂರ್ಣವಾಗುವವರೆಗೂ ಪ್ರತಿಭಟನೆ

ರಾಹುಲ್ ಗಾಂಧಿ ವಿಚಾರಣೆ ಪೂರ್ಣವಾಗುವವರೆಗೂ ಪ್ರತಿಭಟನೆ

ಸೋನಿಯಾ ಗಾಂಧಿಯವರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ವಿಚಾರಣೆ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ರಾಹುಲ್ ಗಾಂಧಿಯವರು ಜೂನ್ 13ರಂದು ಇಡಿ ಕಚೇರಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಹೀಗಾಗಿ ದೇಶಾದ್ಯಂತ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಎಲ್ಲಾ ಇ.ಡಿ. ಕಚೇರಿಗಳ ಮುಂದೆ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಶಿವಕುಮಾರ್ ವಿವರಿಸಿದರು.

English summary
Sonia and Rahul gandhi Ed inquiry:congress protest in front of Bengaluru shanthinagar Ed office on June 13 at 10 am. kpcc president dk Shivakumar said, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X