6 ವರ್ಷ, 3 ಸಿಎಂಗಳು: ಇನ್ನೂ ಬಗೆಹರಿದಿಲ್ಲ ಬೆಂಗಳೂರು ದಕ್ಷಿಣದ ಈ ಟ್ರಾಫಿಕ್ ಸಮಸ್ಯೆ
ಬೆಂಗಳೂರು, ಮಾರ್ಚ್ 23: ಇದು ಬೆಂಗಳೂರು ದಕ್ಷಿಣ ಭಾಗದ ಪ್ರತಿನಿತ್ಯ ನೂರಾರು ಜನರು ಸಂಚಾರ ನಡೆಸುವ ಪ್ರದೇಶದ ಪ್ರಮುಖ ಸಂಚಾರ ಸಮಸ್ಯೆ. 6 ವರ್ಷಗಳು ವರ್ಷಗಳಿಂದ ಈ ಯೋಜನೆ ಜಾರಿಗೊಳಿಸಬೇಕು ಎಂಬ ಬೇಡಿಕೆ ಇದೆ, ಮೂರು ಮುಖ್ಯಮಂತ್ರಿಗಳು, ಮೂವರು ಬಿಎಂಆರ್‌ಸಿಎಲ್ ಎಂಡಿಗಳು ಬದಲಾದರೂ ಸಹ ಯೋಜನೆ ಇನ್ನೂ ಕಾರ್ಯಗತಗೊಂಡಿಲ್ಲ. 2019ರಲ್ಲಿ ಮೂರು ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ನೀಡಿದ್ದ ಭರವಸೆ ಈಡೇರಿಲ್ಲ. ಈ ಯೋಜನೆಗೆ ಈಗ ಮತ್ತೆ ಜೀವ ಬಂದಿದೆ.
ಬೆಂಗಳೂರು ನಗರದ ಪ್ರಮುಖ ಪ್ರದೇಶವಾದ ಬನಶಂಕರಿಯ ಸಮಸ್ಯೆ ಇದು. ಬನಶಂಕರಿ ಬಸ್ ನಿಲ್ದಾಣದಿಂದ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಫುಟ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಗೆ 6 ವರ್ಷಗಳು ಕಳೆದಿದೆ. ಸೇತುವೆ ನಿರ್ಮಾಣ ಮಾಡುವುದು ದೂರದ ಮಾತು, ಒಂದು ಹಿಡಿ ಮಣ್ಣು ತೆಗೆದು ಕಾಮಗಾರಿಗೆ ಚಾಲನೆ ಸಹ ನೀಡಿಲ್ಲ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಬನಶಂಕರಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಫುಟ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಯನ್ನು ಮಾಡಬೇಕು ಎಂದು ಸಂಸದರು ಬಿಎಂಆರ್‌ಸಿಎಲ್ ಮುಂದೆ ಬೇಡಿಕೆ ಇಟ್ಟರು.
ತೇಜಸ್ವಿ ಸೂರ್ಯ ಪೋಸ್ಟ್: ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೇಜಸ್ವಿ ಸೂರ್ಯ ಪೋಸ್ಟ್ ಹಾಕಿದ್ದಾರೆ. 'ಬನಶಂಕರಿ ಪ್ರದೇಶದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಬಲ್ಲ, ಮೆಟ್ರೋ & ಬಿಎಂಟಿಸಿ ಬಸ್ ನಿಲ್ದಾಣಗಳ ಮಧ್ಯೆ ಫುಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕಳೆದ 6 ವರ್ಷಗಳಿಂದ ನಾನು ಒತ್ತಾಯಿಸುತ್ತಿದ್ದು, ಈ ಕುರಿತು ಕೂಡ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದ್ದೇನೆ' ಎಂದು ಹೇಳಿದ್ದಾರೆ.
'ಒತ್ತಾಯದ ನಂತರ 3 ಮುಖ್ಯಮಂತ್ರಿಗಳು, 3 ಬಿಎಂಆರ್‌ಸಿಎಲ್ ಎಂಡಿಗಳು ಕಾರ್ಯನಿರ್ವಹಿಸಿದರೂ ಕೂಡ ಯೋಜನೆ ಇನ್ನೂ ಆರಂಭವಾಗದಿರುವುದು ವಿಪರ್ಯಾಸ. ಬಜೆಟ್‌ನಲ್ಲಿ ಇದಕ್ಕೆಂದೇ 50 ಕೋಟಿ ರೂ. ಮೀಸಲಿದ್ದರೂ ಕೂಡ ಬಿಬಿಎಂಪಿ & ಬಿಎಂಆರ್‌ಸಿಎಲ್ ಮಧ್ಯದ ಗೊಂದಲದಲ್ಲಿ ಪ್ರಯಾಣಿಕರ ಸಂಕಷ್ಟವನ್ನು ಅರಿತುಕೊಂಡು, ಶೀಘ್ರ ಕಾರ್ಯಾರಂಭದ ಅಗತ್ಯತೆ ಬಗ್ಗೆ ವಿವರಿಸಿದ್ದೇನೆ' ಎಂದು ತಿಳಿಸಿದ್ದಾರೆ.
'ಪ್ರಸ್ತುತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಎಂಡಿ ಅವರು, ತಮ್ಮ ಅವಧಿಯಲ್ಲಿಯೇ ಕಾರ್ಯ ಕೈಗೆತ್ತಿಕೊಂಡು, ಪೂರ್ಣಗೊಳಿಸುವುದಾಗಿ ಭರವಸೆ ನೀಡಿರುತ್ತಾರೆ' ಎಂದು ತೇಜಸ್ವಿ ಸೂರ್ಯ ಪೋಸ್ಟ್ ಹಾಕಿದ್ದಾರೆ.
ಬನಶಂಕರಿ ಬೆಂಗಳೂರು ನಗರದ ದಕ್ಷಿಣದ ಪ್ರಮುಖ ಪ್ರದೇಶ. ಇಲ್ಲಿ ಬಿಎಂಟಿಸಿಯ ಬೃಹತ್ ಟಿಟಿಎಂಸಿ ಇದೆ. ಕನಕಪುರ ರಸ್ತೆ, ಕುಮಾರಸ್ವಾಮಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿ ಹೀಗೆ ವಿವಿಧ ಪ್ರದೇಶದ ಕಡೆ ಸಾಗುವ ಬಸ್, ವಾಹನಗಳು ಇಲ್ಲಿಗೆ ಆಗಮಿಸುತ್ತವೆ. ಬನಶಂಕರಿಗೆ ನಮ್ಮ ಮೆಟ್ರೋ ಸಂಪರ್ಕವೂ ಇದ್ದು, ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣದ ನಡುವೆ ಸಂಚಾರ ನಡೆಸಲು ಜನರು ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಓಡಬೇಕಿದೆ.
2019ರಿಂದ ಮೆಟ್ರೋ & ಬಿಎಂಟಿಸಿ ಬಸ್ ನಿಲ್ದಾಣಗಳ ಮಧ್ಯೆ ಫುಟ್ ಓವರ್ ಬ್ರಿಡ್ಜ್ ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ ಕಾಮಗಾರಿ ಇನ್ನೂ ಸಹ ಪೂರ್ಣಗೊಂಡಿಲ್ಲ. ಅತ್ಯಂತ ಜನದಟ್ಟಣೆಯ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲು ಏಕೆ ವಿಳಂಬ ಮಾಡಲಾಗುತ್ತಿದೆ? ಎಂಬುದಕ್ಕೆ ಅಧಿಕಾರಿಗಳು ಉತ್ತರ ನೀಡಬೇಕಿದೆ.
3 ತಿಂಗಳಿನಲ್ಲಿ ಕಾಮಗಾರಿ ಪೂರ್ಣ: 2019ರಲ್ಲಿ ಸಂಸದ ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್. ಅಶೋಕ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಬನಶಂಕರಿ ಬಸ್ ನಿಲ್ದಾಣದ ಸ್ಥಳಕ್ಕೆ ಭೇಟಿ ನೀಡಿ ಫುಟ್ ಓವರ್ ಬ್ರಿಡ್ಜ್ ನಿರ್ಮಾಣದ ಕುರಿತು ಪರಿಶೀಲನೆ ನಡೆಸಿದ್ದರು. ಆದರೆ ಯೋಜನೆ ಇನ್ನೂ ಸಹ ಆರಂಭವಾಗಿಲ್ಲ.
ಆಗ ಬನಶಂಕರಿ ಬಸ್ ನಿಲ್ದಾಣದ ಬಳಿ ಉಂಟಾಗಿರುವ ಸಂಚಾರ ದಟ್ಟಣೆ ನಿವಾರಿಸಲು ಫುಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಈ ಕಾಮಗಾರಿ ಮೂರು ತಿಂಗಳ ಒಳಗಾಗಿ ಪೂರ್ಣಗೊಳ್ಳಲಿದೆ ಭರವಸೆ ನೀಡಲಾಗಿತ್ತು. 2025ರ ಮಾರ್ಚ್ ಅಂತ್ಯದಲ್ಲಿ ಇನ್ನೂ ಕಾಮಗಾರಿ ಆರಂಭಿಸುವ ಮಾತುಗಳು ಕೇಳಿ ಬರುತ್ತಿವೆ.
ಫುಟ್ ಓವರ್ ಬ್ರಿಡ್ಜ್ ನಿರ್ಮಾಣದಿಂದ ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಹಾಗೂ ಪಾದಚಾರಿಗಳಿಗೆ ಅನುಕೂಲವಾಗಲಿದೆ. ಕೂಡಲೇ ಕಾಮಗಾರಿ ಆರಂಭಿಸಿ ಈ ಯೋಜನೆಯನ್ನು ಪೂರ್ಣಗೊಳಿಸಿ ಎಂದು ಜನರು ಒತ್ತಾಯಿಸುತ್ತಿದ್ದಾರೆ.
2022ರಲ್ಲಿ ಬಿಎಂಆರ್‌ಸಿಎಲ್ ತನ್ನ ವೆಬ್‌ಸೈಟ್‌ನಲ್ಲಿ ಬನಶಂಕರಿ ಬಸ್ ನಿಲ್ದಾಣದಿಂದ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಫುಟ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡುವ ಯೋಜನೆ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಬನಶಂಕರಿ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಬರಲಿದ್ದು, 2017ರಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ.
ಬಿಎಂಆರ್‌ಸಿಎಲ್ ಮತ್ತು ಸ್ಥಳೀಯ ಸಂಸ್ಥೆಗಳ ನಡುವಿನ ಸಮನ್ವಯತೆ ಕೊರತೆಯ ಕಾರಣ ಈ ಯೋಜನೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನವೆಂಬರ್ 9, 2019ರಲ್ಲಿ ಪ್ರಸ್ತಾವಿತವಾದ ಯೋಜನೆ ಇನ್ನೂ ಸಹ ಕಾರ್ಯ ರೂಪಕ್ಕೆ ಬಂದಿಲ್ಲ. ಪ್ರತಿನಿತ್ಯ ನೂರಾರು ಬಸ್‌ಗಳು ಬನಶಂಕರಿ ಟಿಟಿಎಂಸಿಗೆ ಬರಲಿದ್ದು, ಸಾವಿರಾರು ಪ್ರಯಾಣಿಕರು ಸಂಚಾರ ನಡೆಸುತ್ತಾರೆ.
ಈ ಪ್ರಸ್ತಾವಿತ ಯೋಜನೆ ನಮ್ಮ ಮೆಟ್ರೋ, ಬಿಎಂಟಿಸಿ ಪ್ರಯಾಣಿಕರಿಗೆ ಮಾತ್ರವಲ್ಲ ಪಾದಾಚಾರಿಗಳಿಗೆ, ಸ್ಥಳೀಯ ವರ್ತಕರಿಗೆ ಅನುಕೂಲವಾಗಲಿದೆ. ಬನಶಂಕರಿ ಮೆಟ್ರೋ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ನೇರ ಸಂಪರ್ಕ ಸಿಗುವ ಕಾರಣ ಜನರು ರಸ್ತೆಯಲ್ಲಿ ಟ್ರಾಫಿಕ್ ನಡುವೆಯೇ ರಸ್ತೆ ದಾಟಿ ಬಸ್ ನಿಲ್ದಾಣಕ್ಕೆ ಆಗಮಿಸುವುದು ತಪ್ಪಲಿದೆ.
ವಾಹನ ಸಮಸ್ಯೆಯ ಜೊತೆಗೆ ಬನಶಂಕರಿ ದೇವಾಲಯ ಸಹ ಇಲ್ಲಿದ್ದು ಸಾವಿರಾರು ಭಕ್ತರು ಆಗಮಿಸುತ್ತಾರೆ. ಎಲ್ಲಾ ಸಮಯದಲ್ಲಿಯೂ ಇಲ್ಲಿ ವಾಹನಗಳ ಸಂಚಾರ ಹೆಚ್ಚಿರುತ್ತದೆ. ಆದ್ದರಿಂದ ಪ್ರಯಾಣಿಕರು ಬಸ್ ಮತ್ತು ಮೆಟ್ರೋ ನಿಲ್ದಾಣದ ನಡುವೆ ಸಂಚಾರ ನಡೆಸಲು ಹರಸಾಹಸ ಪಡಬೇಕಾಗುತ್ತದೆ.
ಅಧಿಕಾರಿಗಳ ಮಾಹಿತಿ ಪ್ರಕಾರ ಬನಶಂಕರಿ ಜಂಕ್ಷನ್ ವಿನ್ಯಾಸ, ಜಾಗದ ಕೊರತೆಯ ಕಾರಣ ಈ ಯೋಜನೆ ಇನ್ನೂ ಸಹ ಕಾರ್ಯ ರೂಪಕ್ಕೆ ಬಂದಿಲ್ಲ. ನೂರಾರು ಬಸ್‌ಗಳು ಸಂಚಾರ ನಡೆಸುವ ಸ್ಥಳದಲ್ಲಿ ಕಾಮಗಾರಿ ಕೈಗೊಂಡರೆ ಅದು ಮುಗಿಯುವ ತನಕ ಇನ್ನಷ್ಟು ಸಂಚಾರ ದಟ್ಟಣೆ ಉಂಟಾಗುತ್ತದೆ ಎಂಬುದು ಅಧಿಕಾರಿಗಳ ವಾದ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications