ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀಘ್ರವೇ ಆದಿವಾಸಿ ಕುಟುಂಬಗಳ ಪ್ರದೇಶಕ್ಕೆ ಭೇಟಿ : ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನೆಲೆಸಿರುವ ಆದಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ದಲ್ಲಿಯೇ ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ತ್ರಿಪುರ ಸಂಸದರು ಹಾಗೂ ಆದಿವಾಸಿ ರಾಷ್ಟ್ರೀಯ ಮಂಚ್ ನ ರಾಷ್ಟ್ರೀಯ ಸಂಚಾಲಕರಾದ ಜಿತೇಂದ್ರ ಚೌಧರಿ ನೇತೃತ್ವದಲ್ಲಿ ಆದಿವಾಸಿ ಸಮನ್ವಯ ಸಮಿತಿಯು ಇಂದು ಆಯೋಜಿಸಿದ್ದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

Soon i will visit to tribal peoples places: Kumarasway

ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆ

ಅರಣ್ಯ ಹಕ್ಕುಗಳ ಕಾಯ್ದೆ 2006 ಅಂಗೀಕಾರವಾಗಿ 12 ವರ್ಷಗಳು ಕಳೆದಿದ್ದರೂ, ಬಹುತೇಕ ಆದಿವಾಸಿಗಳಿಗೆ ಭೂಮಿಯ ಹಕ್ಕು ಪಡೆಯುವಲ್ಲಿ ಇರುವ ಗೊಂದಲಗಳ ನಿವಾರಣೆ, ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಕಾರಾತ್ಮಕವಾಗಿ ತೀರ್ಮಾನ ಕೈಗೊಳ್ಳಲು ಕಂದಾಯ,ಅರಣ್ಯ,ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದರು.

Soon i will visit to tribal peoples places: Kumarasway

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ

ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್, ಸಹಸಂಚಾಲಕ ಯೆಸ್. ವೈ.ಗುರುಶಾಂತ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
CM Kumaraswamy told that i will visit tribal peoples place soon. Our government is taking several steps improve lives of backward and tribal peoples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X