ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಸೇವೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 25, ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಲೋಕಾರ್ಪಣೆ ಮಾಡಿ ಮಾತನಾಡಿದ ಸಚಿವರು, ಇಂತಹ ಆರೋಗ್ಯ ಸೌಲಭ್ಯಗಳು ಕರ್ನಾಟಕದ ಆರೋಗ್ಯ ಕ್ಷೇತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಆರೋಗ್ಯ ಸೇವೆ ಸಾರ್ವಜನಿಕರಿಗೆ ಸಿಗುತ್ತಿದೆ. ದುಬಾರಿ ಚಿಕಿತ್ಸೆಗಳು ಸರ್ಕಾರಿ ಆರೋಗ್ಯ ಸೇವೆಗಳ ಮೂಲಕ ಬಡವರಿಗೂ ಸಿಗುವಂತಾಗಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಮೊತ್ತ ಮೊದಲ ಬಾರಿಗೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಕೊರೊನಾ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳು ಆಗುತ್ತಿವೆ. ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಮತ್ತು ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.

Sophisticated Hyperbaric Oxygen Therapy Localization at Victoria Hospital in Bengaluru

ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಅಥವಾ ಎಚ್‌ಬಿಓ2 ದುಬಾರಿ ಚಿಕಿತ್ಸೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಸೇವೆ ಲಭ್ಯವಾಗುತ್ತಿರುವುದರಿಂದ ಸಾಮಾನ್ಯ ಜನರಿಗೂ ಇದರ ಸೇವೆ ಸಿಗಲಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟನೆಯಾಗಿರುವ ಈ ಎಚ್‌ಬಿಓ2 ಯೂನಿಟ್ ಅನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂಪಾಯಿ ವೆಚ್ಚದ ಆಧುನಿಕ ಯಂತ್ರೋಪಕರಣಗಳು ಇದಾಗಿದೆ ಎಂದು ವಿವರಿಸಿದರು.

ಎಚ್‌ಬಿಓ2 ಸುಟ್ಟಗಾಯಕ್ಕೆ ತುತ್ತಾದವರಿಗೆ, ಡಯಾಬಿಟಕ್ ರೋಗಿಗಳಿಗೆ, ವಾಸ್ಕ್ಯುಲರ್ ಸಮಸ್ಯೆ ಹೊಂದಿರುವವರಿಗೆ, ಕ್ರೀಡಾಪಟುಗಳ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳ ಚಿಕಿತ್ಸಾ ವೇಳೆಯಲ್ಲಿ ನೆರವಾಗುತ್ತದೆ. ಎಚ್‌ಬಿಓ2 ಚಿಕಿತ್ಸೆಯ ಅವಧಿ ಸಾಮಾನ್ಯವಾಗಿ ಒಂದೂವರೆ ಗಂಟೆಯಿಂದ 2 ಗಂಟೆಗಳ ಅವಧಿಯದ್ದಾಗಿರುತ್ತದೆ. ಕಠಿಣ ಸನ್ನಿವೇಶಗಳಲ್ಲಿ 5 ರಿಂದ 6 ಬಾರಿ ಈ ಚಿಕಿತ್ಸೆಯನ್ನು ನೀಡಬಹುದು.

Sophisticated Hyperbaric Oxygen Therapy Localization at Victoria Hospital in Bengaluru

ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಹೀಗಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರುವ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.

Recommended Video

ಸೇನೆಗಾಗಿ ಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಭಾರತಕ್ಕೆ 3 ನೇ ಸ್ಥಾನ | Oneindia Kannada

English summary
Karnataka Health minister said that Affordable Health Care Services at Private hospitals can be a new Revolution in the Health sector only When Government Hospitals free of services,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X