ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಪಾರ್ಕಿಂಗ್ ವ್ಯವಸ್ಥೆ ಸರಿಮಾಡಿ : ಲೋಕಾಯುಕ್ತ

|
Google Oneindia Kannada News

Y Bhaskar Rao
ಬೆಂಗಳೂರು, ಸೆ.28 : ಬೆಂಗಳೂರಿನ ಹಲವು ರಸ್ತೆಗಳಲ್ಲಿ ಅನಧಿಕೃತವಾಗಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಬಿಬಿಎಂಪಿ ಮುಂದಾಗಿದೆ. ಲೋಕಾಯುಕ್ತರು ಈ ಕುರಿತು ಬಿಬಿಎಂಪಿಗೆ ನಿರ್ದೇಶನ ನೀಡಿದ್ದು, ಅಕ್ರಮವಾಗಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿದರೆ, ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ನಗರದ ಯಾವುದೇ ರಸ್ತೆಗಳಲ್ಲಿ ಅನಧಿಕೃತವಾಗಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಎಚ್ಚರಿಕೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ನಗರಾದ್ಯಂತ ಅಕ್ರಮ ಪಾರ್ಕಿಂಗ್ ಶುಲ್ಕ ವಸೂಲಿ ದಂಧೆ ನಡೆಯುತ್ತಿರುವುದರ ಬಗ್ಗೆ ಲೋಕಾಯುಕ್ತ ಕಚೇರಿಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಶುಕ್ರವಾರ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬ್ರಿಗೇಡ್ ಮತ್ತು ಕಮರ್ಷಿಯಲ್ ರಸ್ತೆಗಳಲ್ಲಿ ಮಾತ್ರ ಅಧಿಕೃತವಾಗಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆದ್ದರಿಂದ ಈ ಎರಡು ರಸ್ತೆಗಳನ್ನು ಹೊರತುಪಡಿಸಿ ಬೇರೆ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿದರೆ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಬಿಬಿಎಂಪಿ ಪ್ರತಿ ಬಡಾವಣೆಗಳಲ್ಲಿಯೂ 2 ರಿಂದ 3 ಅಂತಸ್ತಿನ ಪಾರ್ಕಿಂಗ್ ಸ್ಥಳಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಾಣ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಪಾರ್ಕಿಂಗ್ ಲಾಟ್ ಇರುವ ಸ್ಥಳ, ಪಾರ್ಕಿಂಗ್ ಶುಲ್ಕ ಮುಂತಾದ ಮಾಹಿತಿಗಳನ್ನು ಸ್ಥಳೀಯ ಪೊಲೀಸ್ ಠಾಣೆಗೆ ಬಿಬಿಎಂಪಿ ನೀಡಬೇಕು ಎಂದು ಲೋಕಾಯುಕ್ತರು ಆದೇಶ ನೀಡಿದ್ದಾರೆ. ಇದರಿಂದ ಪಾರ್ಕಿಂಗ್ ಹೆಸರಿನಲ್ಲಿ ಜನರಿಂದ ಹೆಚ್ಚು ಹಣ ಪಡೆಯುವುದು ತಪ್ಪಿಸಲು ಮುಂದಾಗಿದ್ದಾರೆ.

ಪಾರ್ಕಿಂಗ್ ಕುರಿತು ತೆಗೆದುಕೊಳ್ಳು ಕ್ರಮಗಳ ಕುರಿತು ಬಿಬಿಎಂಪಿ ಲೋಕಾಯುಕ್ತರಿಗೆ ಪ್ರತಿ 6 ತಿಂಗಳಿಗೊಮ್ಮೆ ವರದಿ ನೀಡುವಂತೆಯೂ ಭಾಸ್ಕರ್ ರಾವ್ ಸೂಚಿಸಿದ್ದಾರೆ. (ಪಾರ್ಕಿಂಗ್ ಶುಲ್ಕ ಜಾರಿಗೆ ಧೈರ್ಯತೋರದ ಮೇಯರ್)

English summary
Karnataka Lokayukta Y Bhaskar Rao has directed the police and BBMP to submit reports every six months on the measures taken to mitigate parking problems in Bangalore. In meeting held on Friday, September 27 with officials of the police, Bruhat Bangalore Mahanagara Palike for people friendly parking systems in Bangalore Lokayukta said this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X