ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕೆ ಒಪ್ಪಿಗೆ: ಸೌಮ್ಯಾ ರೆಡ್ಡಿ ರಾಜೀನಾಮೆ
ಬೆಂಗಳೂರು, ಮಾರ್ಚ್ 21: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.
Recommended Video
ನಾನು ಅಭಿವೃದ್ಧಿಯ ವಿರೋಧಿಯಲ್ಲ, ಆದರೆ ಪರ್ಯಾಯ ವ್ಯವಸ್ಥೆ ಇದ್ದರು ಸಹ ಪರಿಸರಕ್ಕೆ ಹಾನಿಕಾರಕವಾದ ಯೋಜನೆಯನ್ನು ಅನುಷ್ಠಾನಗೊಳಿಸಲು ಸಜ್ಜಾಗಿರುವುದನ್ನು ನಾನು ಬೆಂಬಲಿಸಲು ಸಾಧ್ಯವಿಲ್ಲ ಮತ್ತು ನನ್ನ ಆತ್ಮಸಾಕ್ಷಿಯು ಇದಕ್ಕೆ ಅನುಮತಿಸುವುದಿಲ್ಲ.
ಅದ್ಭುತವಾದ ಪರಿಸರವನ್ನು ಕಾಪಾಡುವುದಕ್ಕಿಂತ ದೊಡ್ಡದೇನೂ ಇಲ್ಲ ಎಂದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪಗಳು ನಮಗೆ ತೋರಿಸಿಕೊಟ್ಟಿವೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಬೇರೆ ಮಾರ್ಗವಿದ್ದರೂ ಈ ಯೋಜನೆಯನ್ನು ಏಕೆ ಕೈಗೆತ್ತಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಮಾರ್ಚ್ 20 ರಂದು ಕರೆದ ಸಭೆಯಲ್ಲಿ ಅರಣ್ಯ ಸಚಿವರೇ ಗೈರಾಗಿದ್ದಾರೆ. ಈ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿರುವುದರಿಂದ ನಾನು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.












Click it and Unblock the Notifications