ಕನ್ನಡ ನಿನ್ನ ಮನೇಲಿ ಮಾತನಾಡ್ಕೋ, ಇಲ್ಲೆಲ್ಲ ನಡೆಯಲ್ಲ: ಕನ್ನಡ ವಿದ್ಯಾರ್ಥಿಗೆ ಹಿಂದಿ ವಾರ್ಡನ್ ಧಮ್ಕಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಹಾಗೂ ಕನ್ನಡಿಗರಿಗೆ ದಿನೇ ದಿನೇ ಗೌರವ ತಗ್ಗುತ್ತಿದೆ. ಬೇರೆ ರಾಜ್ಯಗಳಿಂದ ಬಂದು ಬದುಕು ಕಟ್ಟಿಕೊಂಡಿರುವ ಬಹುತೇಕ ಪರಭಾಷಿಕರಿಗೆ ಈ ನೆಲದ ಬಗ್ಗೆ ಗೌರವ ಇಲ್ಲ ಎನ್ನುವುದು ಹೊಸ ವಿಚಾರವೇನಲ್ಲ. ಇದಕ್ಕೆ ಈಗಾಗಲೇ ಹಲವು ನಿದರ್ಶನಗಳೂ ಇವೆ. ಆದರೆ ಇಲ್ಲಿವರೆಗೆ ಕನ್ನಡ ಗೊತ್ತಿಲ್ಲ ಎನ್ನುತ್ತಿದ್ದವರು, ಇದೀಗ ಕನ್ನಡಿಗರಿಗೇ ಕನ್ನಡ ಮಾತನಾಡಬೇಡ, ನೀವು ಕನ್ನಡ ಮಾತನಾಡಬೇಕೋ, ಹಿಂದಿ ಮಾತನಾಡಬೇಕೋ ಎಂದು ನಾನು ನಿರ್ಧಾರ ಮಾಡ್ತೀವಿ ಎಂದು ಎಚ್ಚರಿಕೆ ಕೊಟ್ಟಿರುವ ಘಟನೆ ಬೆಂಗಳೂರಿನ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, 'ಕನ್ನಡ ನಿನ್ನ ಮನೇಲಿ ಮಾತನಾಡ್ಕೋ, ಇಲ್ಲಿ ಬೇಕಾಗಿಲ್ಲ' ಎಂದು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಾರ್ಡನ್ ಕನ್ನಡ ವಿದ್ಯಾರ್ಥಿಗೆ ಧಮ್ಕಿ ಹಾಕಿದ್ದಾನೆ. ವೈರಲ್ ಆಗಿರುವ ವಿಡಿಯೋ ಬೆಂಗಳೂರಿನ ಎಎಂಸಿ ಕಾಲೇಜಿನ ಹಾಸ್ಟೆಲ್ನದ್ದು ಎಂದು ಉಲ್ಲೇಖಿಸಲಾಗಿದೆ. ಅಲ್ಲಿರುವ ಕನ್ನಡದ ವಿದ್ಯಾರ್ಥಿಗಳು ಕನ್ನಡದಲ್ಲೇ ಮಾತನಾಡಲು ಮುಂದಾದಾಗ ವಾರ್ಡನ್ ಹಿಂದಿಯಲ್ಲೇ ಹರಿಹಾಯ್ದಿದ್ದಾನೆ.

'ಕನ್ನಡ-ಹಿಂದಿ ನಾನು ನಿರ್ಧಾರ ಮಾಡ್ತೀನಿ'
'ನಿಮ್ಮ ಮನೆಯಲ್ಲಿ ಕನ್ನಡ ಮಾತನಾಡಿಕೋ, ಇದು ಕಾಲೇಜು, ಇಲ್ಲೆಲ್ಲ ಬೇಡ ಎಂದಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಕನ್ನಡ ಮಾತನಾಡಲೇಬಾರದಾ? ಎಂದು ಕೇಳಿದ್ದಾರೆ. ಇಲ್ಲಿ ಕನ್ನಡ ಕಡ್ಡಾಯವಲ್ಲ, ಅಷ್ಟೇ. ನೀನು ಕನ್ನಡದಲ್ಲಿ ಮಾತನಾಡಬೇಕೋ, ಹಿಂದಿಯಲ್ಲಿ ಮಾತನಾಡಬೇಕೋ ಡಿಸೈಡ್ ಮಾಡುವುದು ನಾನು. ಕನ್ನಡ ಮಾತನಾಡುವುದಾದರೆ ನಿನ್ನ ಮನೆಯಲ್ಲೇ ಇರು, ಇಲ್ಲೆಲ್ಲ ನಡೆಯಲ್ಲ. ಇದು ನಿನ್ನ ಮನೆಯಲ್ಲ, ಇದು ಕಾಲೇಜು' ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇದೇ ವಿಚಾರವಾಗಿ ವಿದ್ಯಾರ್ಥಿ ಹಾಗೂ ವಾರ್ಡನ್ ನಡುವೆ ವಾಗ್ವಾದ ನಡೆದಿದೆ. ವಾರ್ಡನ್ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಹಲವರು ಈ ವಿಡಿಯೋ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ಕನ್ನಡ ಮಾತನಾಡಬೇಕಾ, ಬೇಡವಾ? ಎಂಬುದನ್ನು ಬೇರೆಯವರು ನಿರ್ಧರಿಸುವ ದುಸ್ಥಿತಿಗೆ ನಾವೆಲ್ಲ ತಲುಪಿದ್ದೀವಾ? ಎಂದು ಕಳವಳಗೊಂಡಿದ್ದಾರೆ.
ದುರಹಂಕಾರದ ಪರಮಾವಧಿ
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) January 4, 2026
ಕನ್ನಡದ ಮೇಲೆ ಅನ್ಯಭಾಷಿಕರ ದಬ್ಬಾಳಿಕೆ
ಕಾಲೇಜಿನಲ್ಲಿ ಕನ್ನಡ ಮಾತನಾಡಬಾರದಂತೆ.
ಇವನಿಗೆ ಈ ಆದೇಶ ಮಾಡೋಕೆ ಈ ಅಧಿಕಾರ ಕೊಟ್ಟೋರು ಯಾರು.
ಕಾಲೇಜು ಕನ್ನಡ ವಿದ್ಯಾರ್ಥಿಗಳ ಮೇಲೆ ಈ ದೌರ್ಜನ್ಯ ಸಹಿಸೋಲ್ಲ.
Amc ಕಾಲೇಜು,ಬನ್ನೇರುಘಟ್ಟ ರಸ್ತೆ.
ಕಾಲೇಜುಗಳಲ್ಲಿ ಉದ್ಯೋಗ ಕನ್ನಡಿಗರಿಗೆ ಆದ್ಯತೆ ಇಲ್ಲ.
ಇವನು ಅವನ ಊರಿಗೆ ಹೋರಡಲಿ. pic.twitter.com/Qs0mhvfSle
ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರಹಾಕಿದ್ದಾರೆ. 'ಇದು ದುರಹಂಕಾರದ ಪರಮಾವಧಿ, ಕನ್ನಡದ ಮೇಲೆ ಅನ್ಯಭಾಷಿಕರ ದಬ್ಬಾಳಿಕೆ, ಕಾಲೇಜಿನಲ್ಲಿ ಕನ್ನಡ ಮಾತನಾಡಬಾರದಂತೆ. ಇವನಿಗೆ ಈ ಆದೇಶ ಮಾಡೋಕೆ ಈ ಅಧಿಕಾರ ಕೊಟ್ಟೋರು ಯಾರು? ಕಾಲೇಜು ಕನ್ನಡ ವಿದ್ಯಾರ್ಥಿಗಳ ಮೇಲೆ ಈ ದೌರ್ಜನ್ಯ ಸಹಿಸೋಲ್ಲ. ಕಾಲೇಜುಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇಲ್ಲ. ಇವನು ಅವನ ಊರಿಗೆ ಹೊರಡಲಿ' ಎಂದು ಎಚ್ಚರಿಕೆ ಕೊಟ್ಟಿದ್ದಾರೆ.ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಕನ್ನಡ ಮಾತನಾಡಬಾರದು ಅನ್ನೋ ನಾಡ ದ್ರೋಹಿಗಳಿಗೆ ಕರ್ನಾಟಕದಲ್ಲಿ ನೆಲೆ ಸಿಗಬಾರದು. ಕೂಡಲೇ ಈತನನ್ನು ವಜಾ ಮಾಡಿ, ಅವನ ಊರಿಗೆ ಕಳಿಸಬೇಕು. ರಾಜ್ಯದ ಪ್ರತಿ ಶಾಲೆ-ಕಾಲೇಜಿಗೂ ಈ ಘಟನೆ ಎಚ್ಚರಿಕೆಯಾಗಿರಲಿ ಎಂದು ಆ ಕಾಲೇಜಿನ ಆಡಳಿತ ಮಂಡಳಿಗೆ ಟ್ಯಾಗ್ ಮಾಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಕ್ಕೆ ಬೆಲೆ ಕೊಡದ ಇಂತವರನ್ನು ಗಡಿಪಾರು ಮಾಡಬೇಕು. ಇಂತವರಿಗೆ ಬುದ್ಧಿ ಕಲಿಸಲು ಸರ್ಕಾರವೇ ಒಂದು ಕಾನೂನು ತರಬೇಕು. ಇಲ್ಲದಿದ್ದರೆ ಪರಭಾಷಿಕರ ದರ್ಪಕ್ಕೆ ಕನ್ನಡ ಪದೇ ಪದೇ ಅವಮಾನಕ್ಕೆ ಒಳಗಾಗುತ್ತಲೇ ಇರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಾರ್ಡನ್ಗೆ ವಿದ್ಯಾರ್ಥಿಗಳಿಂದ ಮುತ್ತಿಗೆ
ವಿಡಿಯೋ ವೈರಲ್ ಆಗುತ್ತಿದಂತೆ ಕನ್ನಡ ಮಾತಾಡಬಾರದು ಎಂದು ಹೇಳಿದ ಎಎಂಸಿ ಕಾಲೇಜ್ ಹಾಸ್ಟಲ್ ವಾರ್ಡನ್ಗೆ ವಿದ್ಯಾರ್ಥಿಗೆ ಮುತ್ತಿಗೆ ಹಾಕಿದ್ದಾರೆ. ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಕನ್ನಡಿಗ ವಿದ್ಯಾರ್ಥಿಗಳ ಆಕ್ರೋಶದಿಂದ ವಾರ್ಡನ್ ಕಕ್ಕಾಬಿಕ್ಕಿಯಾಗಿದ್ದಾನೆ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ವಿದ್ಯಾರ್ಥಿಗಳು ಪಾಠ ಕಲಿಸಿದ್ದಾರೆ.
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications