ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ನ ಋಣ ತೀರಿಸಲು ಸ್ಪೀಕರ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ: ಸೋಮಶೇಖರ್

|
Google Oneindia Kannada News

ಬೆಂಗಳೂರು, ಜುಲೈ 29: ಕಾಂಗ್ರೆಸ್ ಪಕ್ಷದ ಋಣ ತೀರಿಸುವ ಸಲುವಾಗಿ ಸ್ಪೀಕರ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಇದನ್ನು ನಾವು ಮೊದಲೇ ಊಹೆ ಮಾಡಿದ್ದೆವು ಎಂದು ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.

ಸ್ಪೀಕರ್ ತೀರ್ಪನ್ನು ಸುಪ್ರೀಂ ಎತ್ತಿಹಿಡಿದರೆ ಅತೃಪ್ತರ ರಾಜಕೀಯ ಜೀವನದಲ್ಲಿ ಆಷಾಢ! ಸ್ಪೀಕರ್ ತೀರ್ಪನ್ನು ಸುಪ್ರೀಂ ಎತ್ತಿಹಿಡಿದರೆ ಅತೃಪ್ತರ ರಾಜಕೀಯ ಜೀವನದಲ್ಲಿ ಆಷಾಢ!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗಾಗಿಯೇ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಇದೀಗ ನಾವು ಮತ್ತೆ ಕಾನೂನು ಹೋರಾಟ ಮಾಡುತ್ತೇವೆ.

LIVE: ಸಿಎಲ್‌ಪಿ ಸಭೆ : ಕಾಂಗ್ರೆಸ್-ಜೆಡಿಎಸ್ ಸಭಾತ್ಯಾಗಕ್ಕೆ ನಿರ್ಧಾರ?LIVE: ಸಿಎಲ್‌ಪಿ ಸಭೆ : ಕಾಂಗ್ರೆಸ್-ಜೆಡಿಎಸ್ ಸಭಾತ್ಯಾಗಕ್ಕೆ ನಿರ್ಧಾರ?

ನಂಬಿಕೆ ದ್ರೋಹಕ್ಕೆ ಮತ್ತೊಂದು ‌ಹೆಸರು ಕೃಷ್ಣಭೈರೇಗೌಡ. ಅವರು ಸದನದಲ್ಲಿ ನಮ್ಮ ಬಗ್ಗೆ ಮಾತನಾಡಿರುವುದನ್ನು ಗಮನಿಸಿದ್ದೇವೆ. ಕೃಷ್ಣ ಭೈರೇಗೌಡ ಸಾಚಾ ಅಲ್ಲ. ಜೆಡಿ ಎಸ್ ಗೆ ಬೆನ್ನಿಗೆ‌ಚೂರಿ‌ಹಾಕಿ ಕಾಂಗ್ರೆಸ್ ಗೆ ಬಂದಿದ್ದ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

Speaker Gratitude Towards Congress Shown His Party Loyalty

ದೇವೇಗೌಡ ರ ಮಾತಿನಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾನೆ ಹೊರತು ಅವನ ಸೋಲಿಗೆ ನಾವು ಕಾರಣವಲ್ಲ. ಭೇಟಿ ಮಾಡುವುದಾಗಿ ಕೆಲವರು ಹೇಳಿದ್ದಾರೆ ಅವರನ್ನು ರಣರಂಗದಲ್ಲಿ ಸ್ವಾಗತಿಸುತ್ತೇವೆ ಎಂದು ಪರೋಕ್ಷ ವಾಗಿ ವಾಗ್ದಾಳಿ ನಡೆಸಿದ್ದಾರೆ.

ಸುಪ್ರೀಂಗೆ ಅರ್ಜಿ ಸಲ್ಲಿಸಲಿರುವ ಅನರ್ಹಗೊಂಡ ಶಾಸಕರುಸುಪ್ರೀಂಗೆ ಅರ್ಜಿ ಸಲ್ಲಿಸಲಿರುವ ಅನರ್ಹಗೊಂಡ ಶಾಸಕರು

ಕೆಲವೆ ಹೊತ್ತಿನಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಆರಂಭವಾಗಲಿದೆ. ‌ಮೈತ್ರಿ ಸರ್ಕಾರ ಪತನವಾಗಬೇಕೆಂಬುದು ಕಾಂಗ್ರೆಸ್ ಪಕ್ಷದ ಬಹುತೇಕ ‌ನಾಯಕರ ಇಚ್ಛೆಯಾಗಿತ್ತು. ಆ ನಾಯಕರೇ ವಿಧಾನಸಭೆಯಲ್ಲಿ ಸರ್ಕಾರ ಉಳಿಸುವ ಪ್ರಯತ್ನ ಮಾಡುವ ಗೋಸುಂಬೆತನ ತೋರಿಸಿದ್ದಾರೆ. ನಾನು ಸದ್ಯದಲ್ಲೇ ಕ್ಷೇತ್ರದ ಜನರ ಸಭೆ ಕರೆದು ಚರ್ಚಿಸಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದರು.

English summary
Disqualified MLA ST Somashekhar criticised speaker that Rameshkumar obliged to Congress to show his loyalty to party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X