ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತೃಪ್ತರ ರಾಜೀನಾಮೆ ಸ್ವೀಕರಿಸುವಂತೆ ಸ್ಪೀಕರ್ ಗೆ ಬಿಎಸ್ ವೈ ಆಗ್ರಹ

By ಅನಿಲ್ ಆಚಾರ್
|
Google Oneindia Kannada News

Recommended Video

ಬಿ.ಎಸ್.ಯಡಿಯೂರಪ್ಪ ಅಸ್ಥಿರ ಸರ್ಕಾರದ ಬಗ್ಗೆ ಸ್ಪೀಕರ್‍ಗೆ ಮನವಿ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಜುಲೈ 10: ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಅವರು ಶಾಸಕರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಡಿಕೆ ಶಿವಕುಮಾರ್ ಕೈಗೆ ಸಿಗದೆ ರೆಬೆಲ್ ಪಡೆ ಎಸ್ಕೇಪ್! Live Updates ಡಿಕೆ ಶಿವಕುಮಾರ್ ಕೈಗೆ ಸಿಗದೆ ರೆಬೆಲ್ ಪಡೆ ಎಸ್ಕೇಪ್! Live Updates

ಶನಿವಾರದಂದು ಕಾಂಗ್ರೆಸ್- ಜೆಡಿಎಸ್ ನ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಮಂಗಳವಾರದಂದು ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ್ದ ಸ್ಪೀಕರ್, ಐವರ ರಾಜೀನಾಮೆ ಪತ್ರ ಕ್ರಮವಾಗಿದೆ. ಉಳಿದ ಎಂಟು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ. ಆದ್ದರಿಂದ ಸ್ವತಃ ಅವರೇ ಬಂದು ರಾಜೀನಾಮೆ ಸಲ್ಲಿಸಬೇಕು ಎಂದು ಹೇಳಿದ್ದರು.

Speaker has to accept dissent MLAs resignation, said BS Yeddyurappa

ಅತೃಪ್ತ ಶಾಸಕರ ರಾಜೀನಾಮೆ ಸ್ವೀಕರಿಸಲು ವಿಧಾನಸಭಾ ಅಧ್ಯಕ್ಷರು ತಡ ಮಾಡುತ್ತಿರುವುದು ಸರಿವಿಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲು ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡುವ ಬಗ್ಗೆ ಬಿಜೆಪಿಯಿಂದ ಚಿಂತನೆ ನಡೆದಿದೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

English summary
Karnataka political crisis: Speaker K.R.Ramesh Kumar has to accept Congress- JDS dissent MLA's resignation, urged by BJP state president BS Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X